ಇಂಡೋ-ಪಾಕ್ ಫೈನಲ್ ಪಂದ್ಯಕ್ಕೆ ಬಿಸಿಸಿಐ ನೂತನ ಅಧ್ಯಕ್ಷ ಮಿಥುನ್ ಮನ್ಹಾಸ್ ಸೇರಿ ಸದಸ್ಯರು ಗೈರು

Published : Sep 28, 2025, 06:53 PM IST
Mithun Manhas

ಸಾರಾಂಶ

ಇಂಡೋ-ಪಾಕ್ ಫೈನಲ್ ಪಂದ್ಯಕ್ಕೆ ಬಿಸಿಸಿಐ ನೂತನ ಅಧ್ಯಕ್ಷ ಮಿಥುನ್ ಮನ್ಹಾಸ್ ಸೇರಿ ಸದಸ್ಯರು ಗೈರು, ಏಷ್ಯಾಕಪ್ ಫೈನಲ್ ಪಂದ್ಯಕ್ಕೂ ಮುನ್ನ ಬಿಸಿಸಿಐ ಅಧ್ಯಕ್ಷರ ಆಯ್ಕೆಯಾಗಿದೆ. ಆದರೆ ಬಿಸಿಸಿಐ ಯಾವುದೇ ಸದಸ್ಯರು ಫೈನಲ್ ಪಂದ್ಯ ವೀಕ್ಷಣೆಗೆ ಹಾಜರಾಗುತ್ತಿಲ್ಲ.

ದುಬೈ (ಸೆ.28) ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯಕ್ಕೂ ಮೊದಲು ಬಿಸಿಸಿಐ ಪದಾಧಿಕಾರಿಗಳ ಆಯ್ಕೆಯಾಗಿದೆ. ಮಾಜಿ ಕ್ರಿಕೆಟಿಗ, ರಣಜಿ ಸೇರಿ ದೇಶಿ ಕ್ರಿಕೆಟ್‌ನಲ್ಲಿ ಮಿಂಚಿದ ಮಿಥುನ್ ಮನ್ಹಾಸ್ ಬಿಸಿಸಿಐ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರಾಜೀವ್ ಶುಕ್ಲಾ ಉಪಾಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೇರಿದಂತೆ ನೂತನ ಪದಾಧಿಕಾರಿಗಳ ತಂಡ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಹಾಜರಾಗುತ್ತಿಲ್ಲ.

ಪಾಕಿಸ್ತಾನದ ಮೊಹ್ಸಿನ್ ನಖ್ವಿ ಭೇಟಿ ನಿರಾಕರಿಸಿದ ಬಿಸಿಸಿಐ

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿರುವ ಮೊಹ್ಸಿನ್ ನಖ್ವಿ, ಏಷ್ಯಾ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥರಾಗಿದ್ದಾರೆ. ಏಷ್ಯಾಕಪ್ ಫೈನಲ್ ಪಂದ್ಯದ ವೇಳೆ ಮೊಹ್ಸಿನ್ ನಖ್ವಿ ಹಾಜರಿರಲಿದ್ದಾರೆ. ಹೀಗಾಗಿ ಬಿಸಿಸಿಐ ಪಾಕಿಸ್ತಾನದ ಮೊಹ್ಸಿನಿ ನಖ್ವಿ ಜೊತೆ ಕೈಕುಲುಕುವುದು, ಮಾತುಕತೆಗೂ ಬಿಸಿಸಿಐ ನೂತನ ಅಧ್ಯಕ್ಷ ಹಾಗೂ ಅಧಿಕಾರಿಗಳ ತಂಡ ನಿರಾಕರಿಸಿದೆ. ಏಷ್ಯಾಕಪ್ ಉದ್ಘಾಟನಾ ಪಂದ್ಯ, ಲೀಗ್ ಪಂದ್ಯ ಸೇರಿದಂತೆ ಯಾವುದೇ ಪಂದ್ಯಗಳಿಗೂ ಬಿಸಿಸಿಐ ಬಿಸಿಸಿಐ ಅಧಿಕಾರಿಗಳ ತಂಡ ಹಾಜರಾಗಿಲ್ಲ.

ಇಂದು ನಡೆದ ಎಜಿಎಂ ಸಭೆಯಲ್ಲಿ ಮಿಥುನ್ ಮನ್ಹಾಸ್ ಆಯ್ಕೆ

ಇಂದು (ಸೆ.29) ನಡೆದ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ. ರೋಜರ್ ಬಿನ್ನಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅನಿರೀಕ್ಷಿತವಾಗಿ ಮಿಥುನ್ ಮನ್ಹಾಸ್ ನೂತನ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾನುವಾರ ಸಂಜೆ ವೇಳೆಗೆ ಮಿಥುನ್ ಮನ್ಹಾಸ್ ಆಯ್ಕೆ ಖಚಿತಗೊಂಡಿತ್ತು. ರಾಜೀವ್ ಶುಕ್ಲ ಬಿಸಿಸಿಐ ಉಪಾಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ.ರೋಜರ್ ಬಿನ್ನಿ ರಾಜೀನಾಮೆ ಬಳಿಕ ರಾಜೀವ್ ಶುಕ್ಲಾ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ದೇವಜಿತ್ ಸಾಕಿಯಾ ಕಾರ್ಯದರ್ಶಿಯಾಗಿ ಮರು ಆಯ್ಕೆಯಾಗಿದ್ದಾರೆ.

ದೆಹಲಿ ಪರ ಫಸ್ಟ್ ಕ್ಲಾಸ್ ಕ್ರಿಕೆಟ್, ರಣಜಿ ಕ್ರಿಕೆಟ್ ಆಡಿರುವ ಮಿಥುನ್ ಮನ್ಹಾಸ್ ಬಳಿಕ ಅವಕಾಶ ವಂಚಿತರಾಗಿದ್ದರು. ಹೀಗಾಗಿ ಜಮ್ಮು ಮತ್ತು ಕಾಶ್ಮೀರ ರಣಜಿ ತಂಡ ಸೇರಿಕೊಂಡಿದ್ದರು. ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದಾರೆ. ಆದರೆ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದರು. ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ನಡೆಯುತ್ತಿರುವ ಮೊದಲ ಫೈನಲ್ ಪಂದ್ಯಕ್ಕೂ ಇಡೀ ಬಿಸಿಸಿಐ ತಂಡ ಗೈರಾಗುತ್ತಿದೆ. 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!