
ನವದೆಹಲಿ(ಜೂ.21): 2024ರಿಂದ ಆರಂಭಗೊಳ್ಳಲಿರುವ ಮುಂದಿನ 8 ವರ್ಷಗಳ ಅವಧಿಯಲ್ಲಿ ಬಿಸಿಸಿಐ ಮೂರು ಐಸಿಸಿ ಟೂರ್ನಿಗಳಿಗೆ ಆತಿಥ್ಯ ವಹಿಸಲು ಆಸಕ್ತಿ ತೋರಿದೆ.
2025ರ ಚಾಂಪಿಯನ್ಸ್ ಟ್ರೋಫಿ, 2028ರ ಟಿ20 ವಿಶ್ವಕಪ್ ಹಾಗೂ 2031ರ ಏಕದಿನ ವಿಶ್ವಕಪ್‌ನ ಆತಿಥ್ಯಕ್ಕೆ ಬಿಡ್ ಸಲ್ಲಿಸಲು ಭಾನುವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ. 2017ರ ಬಳಿಕ ಸ್ಥಗಿತಗೊಂಡಿದ್ದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಪುನಾರಂಭಿಸುವುದಾಗಿ ಐಸಿಸಿ ತಿಳಿಸಿದ್ದು, ಬಿಸಿಸಿಐ ಭಾರತದಲ್ಲಿ ನಡೆಸಲು ಆಸಕ್ತಿ ತೋರಿದೆ.
2024ರಿಂದ 2031ರವರೆಗೆ ನಡೆಯಲಿರುವ ಐಸಿಸಿ ಟೂರ್ನಿಗಳ ಪೈಕಿ ಪ್ರತಿ ಎರಡು ವರ್ಷಗಳಿಗೊಮ್ಮೆ ಟಿ20 ವಿಶ್ವಕಪ್ ಹಾಗೂ 2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 14 ತಂಡಗಳು ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಐಸಿಸಿ ಈಗಾಗಲೇ ಖಚಿತಪಡಿಸಿದೆ.
ಭಾರತದ ಟೊಕಿಯೊ ಒಲಿಂಪಿಕ್ಸ್ ಅಭಿಯಾನಕ್ಕೆ ಬಿಸಿಸಿಐ 10 ಕೋಟಿ ರೂ ನೆರವು!
2021ರ ಟಿ20 ವಿಶ್ವಕಪ್ ಭಾರತದಲ್ಲೇ ನಡೆಯಬೇಕಿದ್ದು, ಕೋವಿಡ್ ಕಾರಣ ಯುಎಇಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. 2023ರ ಏಕದಿನ ವಿಶ್ವಕಪ್‌ಗೆ ಭಾರತ ಆತಿಥ್ಯ ವಹಿಸಲಿದೆ. ಈ ಮೊದಲು 2011ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಹಾಗೂ 2016ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಬಿಸಿಸಿಐ ಅಚ್ಚುಕಟ್ಟಾಗಿ ಆಯೋಜಿಸಿ ಸೈ ಎನಿಸಿಕೊಂಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.