ಸೌರವ್‌ ಗಂಗೂಲಿಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಮತ್ತೆರಡು ಸ್ಟೆಂಟ್‌ ಅಳವಡಿಕೆ

Suvarna News   | Asianet News
Published : Jan 29, 2021, 08:17 AM IST
ಸೌರವ್‌ ಗಂಗೂಲಿಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಮತ್ತೆರಡು ಸ್ಟೆಂಟ್‌ ಅಳವಡಿಕೆ

ಸಾರಾಂಶ

ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿಗೆ ಎರಡನೇ ಬಾರಿಗೆ ಯಶಸ್ವಿಯಾಗಿ ಆ್ಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ದಾದಾ ಆರೋಗ್ಯ ಸ್ಥಿರವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಕೋಲ್ಕತಾ(ಜ.29): ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಗುರುವಾರ ಆ್ಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಅವರ ಹೃದಯದಲ್ಲಿ 2 ಸ್ಟೆಂಟ್‌ ಅಳವಡಿಕೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

ಭಾರತ ತಂಡದ ಮಾಜಿ ನಾಯಕನ ಹೃದಯದಲ್ಲಿದ್ದ ಬ್ಲಾಕೇಜ್‌ಗಳನ್ನು ತೆಗೆಯಲಾಗಿದೆ. ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿ ತಿಳಿಸಿದ್ದಾರೆ. ಎದೆ ನೋವು ಕಾಣಿಸಿಕೊಂಡ ಕಾರಣ ಬುಧವಾರ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದರು. 3 ವಾರಗಳ ಹಿಂದೆ ಗಂಗೂಲಿ ಆ್ಯಂಜಿಯೋಪ್ಲಾಸ್ಟಿಗೆ ಒಳಗಾಗಿದ್ದರು. ಆಗ ಒಂದು ಸ್ಟೆಂಟ್‌ ಅಳವಡಿಕೆ ಮಾಡಲಾಗಿತ್ತು. ಇದೀಗ ದಾದಾ ಹೃದಯಕ್ಕೆ ಮತ್ತೆರೆಡು ಸ್ಟೆಂಟ್‌ ಅಳವಡಿಸಲಾಗಿದೆ.

ಸೌರವ್ ಗಂಗೂಲಿಗೆ ಇಂದು ಮತ್ತೆ ಹೃದಯ ಶಸ್ತ್ರಚಿಕಿತ್ಸೆ..!

ಎರಡನೇ ಬಾರಿಗೆ ಸೌರವ್ ಗಂಗೂಲಿಗೆ ಸ್ಟಂಟ್‌ ಅಳವಡಿಸುವ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹಾ ಆಸ್ಪತ್ರೆಯಲ್ಲಿ ಹಾಜರಿದ್ದರು. ಬಳಿಕ ಮಾತನಾಡಿದ ಮಮತಾ, ಸೌರವ್ ಗಂಗೂಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, 2 ಹೊಸ ಸ್ಟೆಂಟ್ ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ. ಸೌರವ್ ಎಚ್ಚರವಾಗಿದ್ದಾರೆ ಹಾಗೂ ಮಾತನಾಡುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಸೌರವ್ ಹಾಗೂ ಪತ್ನಿ ಡೋನಾ ಜತೆ ಮಾತನಾಡಿದೆ. ಹಾಗೂ ಇದೇ ಸಂದರ್ಭದಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದೆ ಎಂದು ದೀದಿ ಹೇಳಿದ್ದಾರೆ.

ಸೌರವ್‌ ಗಂಗೂಲಿಗೆ ಕಳೆದ ಎರಡು ದಿನಗಳ ಹಿಂದಷ್ಟೇ ಮತ್ತೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಕೋಲ್ಕತದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ, ಬುಧವಾರ ಸಂಜೆ ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್‌ ಪ್ರಕಾರ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಲಾಗಿತ್ತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!