
ನವದೆಹಲಿ[ಡಿ.04]: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯ ಬೆಂಬಲದೊಂದಿಗೆ ತಂಡ ಆಡುವ ಪ್ರತಿ ಸರಣಿಯಲ್ಲೂ ಹಗಲು-ರಾತ್ರಿ ಟೆಸ್ಟ್ ಆಯೋಜಿಸುವ ಇಂಗಿತವನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವ್ಯಕ್ತಪಡಿಸಿದ್ದಾರೆ.
ಪಿಂಕ್ ಬಾಲ್ ಟೆಸ್ಟ್ ಯಶಸ್ವಿ ಬೆನ್ನಲ್ಲೆ ಅಚ್ಚರಿಯ ಹೇಳಿಕೆ ನೀಡಿದ ದಾದಾ
ಬಾಂಗ್ಲಾದೇಶ ವಿರುದ್ಧ ಇತ್ತೀಚೆಗಷ್ಟೇ ಭಾರತ ತನ್ನ ಚೊಚ್ಚಲ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಆಡಿತ್ತು. ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದಿದ್ದ ಪಂದ್ಯ ಅಭೂತಪೂರ್ವ ಯಶಸ್ಸು ಗಳಿಸಿತ್ತು. ‘ಹಗಲು-ರಾತ್ರಿ ಪಂದ್ಯಕ್ಕೆ ಸಿಕ್ಕ ಪ್ರತಿಕ್ರಿಯೆ ಗಮನಿಸಿದ ಬಳಿಕ ಟೀಂ ಇಂಡಿಯಾ ಆಡುವ ಪ್ರತಿ ಸರಣಿಯಲ್ಲೂ ಪಿಂಕ್ ಬಾಲ್ ಟೆಸ್ಟ್ ಇರಬೇಕು. ಪ್ರತಿ ಪಂದ್ಯವನ್ನು ಹಗಲು-ರಾತ್ರಿ ಮಾದರಿಯಲ್ಲಿ ನಡೆಸುವುದು ಕಷ್ಟ. ಆದರೆ ಸರಣಿಯಲ್ಲಿ ಒಂದು ಪಂದ್ಯವನ್ನು ಹಗಲು-ರಾತ್ರಿ ಮಾದರಿಯಲ್ಲಿ ಆಯೋಜಿಸಬೇಕಿದೆ. ಟೆಸ್ಟ್ ಕ್ರಿಕೆಟ್ ಜನಪ್ರಿಯಗೊಳಿಸಲು ಅಂತಹ ಪ್ರಯೋಗಗಳ ಅಗತ್ಯವಿದೆ’ ಎಂದು ಗಂಗೂಲಿ ಅಭಿಪ್ರಾಯಿಸಿದ್ದಾರೆ.
ನನಗೇನಾದರೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಬಂದಿದ್ದರೆ..? ಹೃದಯಗೆದ್ದ ವಿರಾಟ್ ಮಾತು
ಈಡನ್ ಗಾರ್ಡನ್ಸ್‌ನಲ್ಲಿ ಪಿಂಕ್ ಬಾಲ್ ಪಂದ್ಯ ಆಯೋಜಿಸಿದ ಅನುಭವವನ್ನು ಭಾರತದ ಇತರ ರಾಜ್ಯಗಳ ಕ್ರಿಕೆಟ್ ಸಂಸ್ಥೆಗಳೊಂದಿಗೆ ಹಂಚಿಕೊಳ್ಳುವುದಾಗಿ ಗಂಗೂಲಿ ಹೇಳಿದ್ದಾರೆ. ‘ಎಲ್ಲಾ ಕ್ರಿಕೆಟ್ ಸಂಸ್ಥೆ ಅಧಿಕಾರಿಗಳೊಂದಿಗೆ ನಾನು ಮಾತನಾಡಿ, ಅನುಭವ ತಿಳಿಸುತ್ತೇನೆ. ಯಾರಿಗೂ ಸಹ ಕೇವಲ 5000 ಪ್ರೇಕ್ಷಕರ ಎದುರು ಟೆಸ್ಟ್ ಕ್ರಿಕೆಟ್ ಆಡುವುದು ಇಷ್ಟವಿಲ್ಲ’ ಎಂದು ಗಂಗೂಲಿ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.