
ಮುಂಬೈ(ಅ.27): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ(ಅ.27) ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದು, ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪುರುಷರ ಕ್ರಿಕೆಟಿಗರು ಪಡೆದಷ್ಟೇ ಸಂಭಾವನೆಯನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಡೆಯಲಿದ್ದಾರೆ. ಲಿಂಗ ಸಮಾನತೆ ಸಾರುವ ಉದ್ದೇಶದಿಂದ ಪುರುಷ ಹಾಗೂ ಮಹಿಳಾ ಆಟಗಾರ್ತಿಯರಿಗೆ ಸಮಾನ ಪಂದ್ಯದ ಸಂಭಾವನೆ ನೀಡಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.
ಭಾರತ ಪುರುಷ ತಂಡದ ಆಟಗಾರರು ಪಡೆದಷ್ಟೇ ಮಹಿಳಾ ಆಟಗಾರರು ಪ್ರತಿ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರುಪಾಯಿ, ಪ್ರತಿ ಏಕದಿನ ಪಂದ್ಯಕ್ಕೆ 6 ಲಕ್ಷ ರುಪಾಯಿ ಹಾಗೂ ಪ್ರತಿ ಟಿ20 ಪಂದ್ಯಕ್ಕೆ ತಲಾ 3 ಲಕ್ಷ ರುಪಾಯಿಗಳನ್ನು ಪಡೆಯಲಿದ್ದಾರೆ. ಬಿಸಿಸಿಐ ಜಯ್ ಶಾ ಸರಣಿ ಟ್ವೀಟ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 7ನೇ ಬಾರಿಗೆ ಏಷ್ಯಾಕಪ್ ಟೂರ್ನಿಯನ್ನು ಗೆದ್ದು ಬೀಗಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.
ಲಿಂಗ ತಾರತಮ್ಯಕ್ಕೆ ಕಡಿವಾಣಹಾಕಲು ಬಿಸಿಸಿಐ ಮೊದಲ ಹೆಜ್ಜೆಯಿಟ್ಟಿರುವುದನ್ನು ತಿಳಿಸಲು ನಾವು ಹರ್ಷಿತರಾಗಿದ್ದೇವೆ. ನಾವೀಗ ಮಹಿಳಾ ಕ್ರಿಕೆಟಿಗರಿಗರಿಗೂ ಸಮಾನ ವೇತನ ನೀಡಲು ತೀರ್ಮಾನಿಸಿದ್ದೇವೆ. ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ಸಂಭಾವನೆಯು ಸಮಾನವಾಗಿರಲಿದೆ. ನಾವೂ ಹೊಸ ತಲೆಮಾರಿನಲ್ಲಿ ಭಾರತ ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆ ಸಾಧಿಸಿದ್ದೇವೆ ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.
ಪ್ರಾಕ್ಟಿಸ್ ನಂತರ ಸರಿಯಾದ ಊಟ ಸಿಗ್ತಿಲ್ಲ: ICC ಆತಿಥ್ಯದ ಬಗ್ಗೆ ಕೋಪಗೊಂಡ ಟೀಂ ಇಂಡಿಯಾ
ಬಿಸಿಸಿಐನ ಮಹಿಳಾ ಕ್ರಿಕೆಟಿಗರು, ಇದೀಗ ಭಾರತ ಪುರುಷ ಕ್ರಿಕೆಟಿಗರು ಪಡೆಯವಷ್ಟು ಪಂದ್ಯದ ಸಂಭಾವನೆಯನ್ನು ಪಡೆಯಲಿದ್ದಾರೆ. ಟೆಸ್ಟ್ ಪಂದ್ಯವೊಂದಕ್ಕೆ 15 ಲಕ್ಷ ರುಪಾಯಿ, ಏಕದಿನ ಕ್ರಿಕೆಟ್‌ಗೆ 6 ಲಕ್ಷ ರುಪಾಯಿ ಹಾಗೂ ಟಿ20 ಪಂದ್ಯವೊಂದಕ್ಕೆ 3 ಲಕ್ಷ ರುಪಾಯಿ ಪಡೆಯಲಿದ್ದಾರೆ. ಮಹಿಳಾ ಕ್ರಿಕೆಟಿಗರಿಗೆ ವೇತನ ಸಮಾನತೆ ನನ್ನ ಬದ್ದತೆಯಾಗಿದ್ದು, ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು, ಜಯ್ ಹಿಂದ್ ಎಂದು ಜಯ್ ಶಾ ಟ್ವೀಟ್ ಮಾಡಿ ಈ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.