ಏಕದಿನ ಕ್ರಿಕೆಟ್‌ಗೆ ಟೀಂ ಇಂಡಿಯಾ ಹೊಸ ಜೆರ್ಸಿ; ಮೊದಲ ಪಂದ್ಯದಲ್ಲೇ ಮಿಂಚಿದ ರೋಹಿತ್ ಪಡೆ

Published : Feb 06, 2025, 05:47 PM IST
ಏಕದಿನ ಕ್ರಿಕೆಟ್‌ಗೆ ಟೀಂ ಇಂಡಿಯಾ ಹೊಸ ಜೆರ್ಸಿ; ಮೊದಲ ಪಂದ್ಯದಲ್ಲೇ ಮಿಂಚಿದ ರೋಹಿತ್ ಪಡೆ

ಸಾರಾಂಶ

ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಹೊಸ ಜೆರ್ಸಿಯಲ್ಲಿ ಕಣಕ್ಕಿಳಿದಿದೆ. ತ್ರಿವರ್ಣ ಧ್ವಜದ ಬಣ್ಣಗಳನ್ನು ಜೆರ್ಸಿಯ ಭುಜದ ಪಟ್ಟಿಗಳಲ್ಲಿ ಸೇರಿಸಲಾಗಿದೆ. ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಮಿಂಚಿದರು. ಹರ್ಷಿತ್ ರಾಣಾ ಮತ್ತು ಜಡೇಜಾ ತಲಾ ಮೂರು ವಿಕೆಟ್ ಪಡೆದರು. ಇಂಗ್ಲೆಂಡ್ ೨೪೮ ರನ್ ಗಳಿಸಿ ಆಲೌಟ್ ಆಯಿತು.

ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ನಾಗ್ಪುರದ ವಿದರ್ಭ ಕ್ರಿಕೆಟ್ ಸಂಘದ ಮೈದಾನದಲ್ಲಿ ಗುರುವಾರ ಆರಂಭವಾಗಿರುವ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈ ಹೊಸ ಜೆರ್ಸಿಯನ್ನು ಧರಿಸಿ ಕಣಕ್ಕಿಳಿದಿದೆ. ಮೊದಲ ಪಂದ್ಯದಲ್ಲೇ ಹೊಸ ಜೆರ್ಸಿಯಲ್ಲಿ ಟೀಂ ಇಂಡಿಯಾ ಬೌಲರ್‌ಗಳು ಮಿಂಚಿನ ಪ್ರದರ್ಶನ ತೋರುವ ಮೂಲಕ ಗಮನ ಸೆಳೆದಿದ್ದಾರೆ

ಹೌದು, ಬಿಸಿಸಿಐ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಭಾರತ ಕ್ರಿಕೆಟ್ ತಂಡದ ಏಕದಿನ ಪಂದ್ಯಗಳಿಗೆ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಭಾರತ ತಂಡದ ಪ್ರಮುಖ ಆಟಗಾರರು ಹೊಸ ಲುಕ್ ನಲ್ಲಿರುವ ಚಿತ್ರಗಳನ್ನು ಹಂಚಿಕೊಂಡಿತ್ತು. ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ ಹೊಸ ಜೆರ್ಸಿಯಲ್ಲಿ ಪೋಸ್ ಕೊಟ್ಟಿದ್ದರು.

ಭಾರತ ಕ್ರಿಕೆಟ್ ತಂಡದ ಹೊಸ ಜೆರ್ಸಿಯಲ್ಲಿ ಗಮನಾರ್ಹ ಬದಲಾವಣೆಗಳಿವೆ. ಭುಜದ ಭಾಗದಲ್ಲಿರುವ ಪಟ್ಟೆಗಳಲ್ಲಿ ಭಾರತದ ತ್ರಿವರ್ಣ ಧ್ವಜದ ಬಣ್ಣಗಳನ್ನು ಸೇರಿಸಲಾಗಿದೆ.

ವಿರಾಟ್ ಕೊಹ್ಲಿ ಮೊದಲ ಏಕದಿನ ಪಂದ್ಯದಿಂದ ಹೊರಬಿದ್ದಿದ್ದೇಕೆ? ಮೌನ ಮುರಿದ ನಾಯಕ ರೋಹಿತ್ ಶರ್ಮಾ

ಗುರುವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ನಡೆಯುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ಮುಖಾಮುಖಿಯಾಗಿವೆ. ಎರಡನೇ ಪಂದ್ಯ ಭಾನುವಾರ ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ಮತ್ತು ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಫೆಬ್ರವರಿ 12 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೂರು ಪಂದ್ಯಗಳಲ್ಲಿ ಆಡುವ ತಂಡವೇ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲೂ ಆಡಲಿದೆ ಎಂಬುದು ಗಮನಾರ್ಹ. ಜಸ್ಪ್ರೀತ್ ಬುಮ್ರಾ ಬದಲಿಗೆ ವರುಣ್ ಚಕ್ರವರ್ತಿ ಸೇರ್ಪಡೆಯಾಗಿರುವುದನ್ನು ಹೊರತುಪಡಿಸಿ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲ.

ಐಸಿಸಿ ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಆಸ್ಟ್ರೇಲಿಯಾಗೆ ತ್ರಿಪಲ್ ಶಾಕ್! ದಿಢೀರ್ ನಿವೃತ್ತಿ ಘೋಷಿಸಿದ ಆಲ್ರೌಂಡರ್

ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಮಿಂಚಿನ ಪ್ರದರ್ಶನ:

ಇಲ್ಲಿನ ನಾಗ್ಪುರದ ವಿದರ್ಭ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬ್ಯಾಟ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಫಿಲ್ ಸಾಲ್ಟ್ ಹಾಗೂ ಬೆನ್ ಡಕೆಟ್‌ ಕೇವಲ 8.5 ಓವರ್‌ಗಳಲ್ಲಿ ಸ್ಪೋಟಕ 75 ರನ್‌ಗಳ ಜತೆಯಾಟವಾಡಿದರು.

ದೊಡ್ಡ ಮೊತ್ತದತ್ತ ದಾಪುಗಾಲು ಹಾಕುತ್ತಿದ್ದ ಇಂಗ್ಲೆಂಡ್‌ ತಂಡಕ್ಕೆ ಚೊಚ್ಚಲ ಏಕದಿನ ಪಂದ್ಯವನ್ನಾಡುತ್ತಿರುವ ವೇಗಿ ಹರ್ಷಿತ್ ರಾಣಾ ಶಾಕ್ ಶಾಕ್ ನೀಡಿದರು. ಇನ್ನು ಅನುಭವಿ ಸ್ಪಿನ್ನರ್ ರವೀಂದ್ರ ಜಡೇಜಾ ಕೂಡಾ ಇಂಗ್ಲೆಂಡ್ ಬ್ಯಾಟರ್‌ಗಳು ದೊಡ್ಡ ಇನ್ನಿಂಗ್ಸ್ ಕಟ್ಟಲು ಅವಕಾಶ ಮಾಡಿಕೊಡಲಿಲ್ಲ. ನಾಯಕ ಜೋಸ್ ಬಟ್ಲರ್ 52 ಹಾಗೂ ಜೇಕೊಬ್ ಬೆಥೆಲ್ 51 ರನ್ ಸಿಡಿಸುವ ಮೂಲಕ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು. ಅಂತಿಮವಾಗಿ ಇಂಗ್ಲೆಂಡ್ ತಂಡವು 47.4 ಓವರ್‌ಗಳಲ್ಲಿ 248 ರನ್ ಬಾರಿಸಿ ಸರ್ವಪತನ ಕಂಡಿತು.

ಭಾರತದ ಪರ ಶಿಸ್ತುಬದ್ದ ದಾಳಿ ನಡೆಸಿದ ರವೀಂದ್ರ ಜಡೇಜಾ 26 ರನ್ ನೀಡಿ 3 ವಿಕೆಟ್ ಪಡೆದರೆ, ಪಾದಾರ್ಪಣೆ ಪಂದ್ಯದಲ್ಲಿ ಹರ್ಷಿತ್ ರಾಣಾ ಕೂಡ ಮೂರು ವಿಕೆಟ್ ಕಬಳಿಸಿ ಸ್ಮರಣೀಯವಾಗಿಸಿಕೊಂಡರು. ಇನ್ನು 2023ರ ಏಕದಿನ ವಿಶ್ವಕಪ್ ಫೈನಲ್ ಬಳಿಕ ಮೊದಲ ಏಕದಿನ ಪಂದ್ಯವನ್ನಾಡಿದ ಅನುಭವಿ ವೇಗಿ ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ