
ಬೆಂಗಳೂರು(ಫೆ.23): ಬಹುನಿರೀಕ್ಷಿತ 2ನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯುಪಿಎಲ್)ಗೆ ಶುಕ್ರವಾರ ಚಾಲನೆ ಸಿಗಲಿದ್ದು, ಇನ್ನು 11 ದಿನಗಳ ಕಾಲ ಬೆಂಗಳೂರಿನಲ್ಲಿ ‘ಮಹಿಳಾ ಐಪಿಎಲ್’ ರಂಗೇರಲಿದೆ.
ಕಳೆದ ಬಾರಿ ಮುಂಬೈನಲ್ಲೇ ಎಲ್ಲಾ ಪಂದ್ಯ ನಡೆಸಲಾಗಿದ್ದು, ಈ ಬಾರಿ ಟೂರ್ನಿಯನ್ನು 2 ನಗರಗಳಲ್ಲಿ ಆಯೋಜಿಸಲಾಗುತ್ತಿದೆ. ಬೆಂಗಳೂರಿನಲ್ಲಿ 11 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿ ಇನ್ನುಳಿದ 11 ಪಂದ್ಯಗಳಿಗೆ ನವದೆಹಲಿ ಆತಿಥ್ಯ ವಹಿಸಲಿದೆ.
ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯ ವೇಳಾಪಟ್ಟಿ ಪ್ರಕಟ: ಬೆಂಗಳೂರು ಕ್ರಿಕೆಟ್ ಫ್ಯಾನ್ಸ್‌ಗೆ ಗುಡ್ ನ್ಯೂಸ್..!
ಎರಡನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯು ಮುಂಬರುವ ಫೆಬ್ರವರಿ 23ರಿಂದ ಆರಂಭವಾಗಲಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಡಲಿವೆ. ಸಂಜೆ 7.30ರಿಂದ ಪಂದ್ಯ ಆರಂಭವಾಗಲಿದೆ.
ಟೂರ್ನಿ ಮಾದರಿ: ಟೂರ್ನಿ ಡಬಲ್ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯಲಿದ್ದು, ಲೀಗ್ ಹಂತದಲ್ಲಿ ಪ್ರತಿ ತಂಡಗಳು 2 ಬಾರಿ ಪರಸ್ಪರ ಮುಖಾಮುಖಿಯಾಗಲಿವೆ. ಲೀಗ್ ಹಂತದಲ್ಲಿ ಅಗ್ರಸ್ಥಾನ ಪಡೆದ ತಂಡ ನೇರವಾಗಿ ಫೈನಲ್‌ಗೇರಲಿದ್ದು, 2 ಮತ್ತು 3ನೇ ಸ್ಥಾನಿಯಾದ ತಂಡಗಳು ಎಲಿಮಿನೇಟರ್‌ನಲ್ಲಿ ಸೆಣಸಲಿವೆ. ಗೆದ್ದ ತಂಡ ಪ್ರಶಸ್ತಿ ಸುತ್ತಿಗೇರಲಿದೆ.
ಅತ್ಯಂತ ಕಠಿಣ ಭಾರತವನ್ನೇ ಗೆದ್ದರೆ ವಿಶ್ವವನ್ನೇ ಗೆದ್ದಂತೆ, ಸಂಚಲನ ಸೃಷ್ಟಿಸಿದ ಉಬರ್ CEO !
ಕಳೆದ ಬಾರಿಯಂತೆ ಈ ಬಾರಿ ಕೂಡಾ 5 ಮಹಿಳಾ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಒಟ್ಟು 22 ಪಂದ್ಯಗಳ ಪೈಕಿ 11 ಪಂದ್ಯಗಳು ಬೆಂಗಳೂರು ಹಾಗೂ 11 ಪಂದ್ಯಗಳು ಡೆಲ್ಲಿಯಲ್ಲಿ ನಡೆಯಲಿವೆ. ಫೆಬ್ರವರಿ 23ರಿಂದ ಮಾರ್ಚ್ 04ರವರೆಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ ಪಂದ್ಯಾಟಗಳು ನಡೆಯಲಿವೆ. ಇದಾದ ಬಳಿಕ ಟೂರ್ನಿಯು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪಂದ್ಯಗಳು ನಡೆಯಲಿವೆ. ಒಟ್ಟು 24 ದಿನಗಳ ಅವಧಿಯ ಈ ಟೂರ್ನಿಯಲ್ಲಿ ಪ್ರತಿದಿನ ಒಂದೊಂದು ಪಂದ್ಯ ನಡೆಯಲಿದೆ.
ಉದ್ಘಾಟನಾ ಸಮಾರಂಭಕ್ಕೆ ಶಾರುಖ್, ಟೈಗರ್ ಶ್ರಾಫ್!
ಟೂರ್ನಿಯ ಉದ್ಘಾಟನಾ ಸಮಾರಂಭ ಅದ್ಧೂರಿಯಾಗಿ ನೆರವೇರಲಿದೆ. ಸಂಜೆ 6.30ಕ್ಕೆ ಸಮಾರಂಭ ಆರಂಭಗೊಳ್ಳಲಿದ್ದು, ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್, ಟೈಗರ್ ಶ್ರಾಫ್, ಶಾಹೀದ್ ಕಪೂರ್, ಸಿದ್ಧಾರ್ಥ್ ಮಲ್ಹೋತ್ರಾ, ವರುಣ್ ಧವನ್, ಆರ್ಯನ್ ಕಾರ್ತಿಕ್ ಸೇರಿದಂತೆ ಕಲಾವಿದರು, ಗಾಯಕರು ಪ್ರದರ್ಶನ ನೀಡಲಿದ್ದಾರೆ.
ಎಲ್ಲಾ ಪಂದ್ಯಗಳು ಸಂಜೆ 7.30ಕ್ಕೆ ಆರಂಭ
ಸ್ಪೋರ್ಟ್ಸ್ 18, ಜಿಯೋ ಸಿನಿಮಾದಲ್ಲಿ ನೇರ ಪ್ರಸಾರ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.