ಮಹಿಳಾ ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ಎದುರಿನ ಪಂದ್ಯಕ್ಕೂ ಮುನ್ನ ಶ್ರೇಯಾಂಕ ಪಾಟೀಲ್ ಟೂರ್ನಿಯಿಂದಲೇ ಔಟ್! RCB ಆಟಗಾರ್ತಿ ಸೇರ್ಪಡೆ

Published : Jun 19, 2026, 01:04 PM IST
Shreyanka Patil

ಸಾರಾಂಶ

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ವೇಳೆ ಗಾಯಗೊಂಡಿರುವ ಭಾರತದ ಸ್ಟಾರ್ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ ಟೂರ್ನಿಯಿಂದ ಸಂಪೂರ್ಣವಾಗಿ ಹೊರಬಿದ್ದಿದ್ದಾರೆ. ನೆದರ್‌ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ಅವರ ಸ್ಥಾನಕ್ಕೆ ಮತ್ತೋರ್ವ ಆರ್‌ಸಿಬಿ ಆಟಗಾರ್ತಿ, ಲೆಗ್‌ ಸ್ಪಿನ್ನರ್ ಪ್ರೇಮಾ ರಾವತ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಬೆಂಗಳೂರು: ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಎರಡು ಗೆಲುವುಗಳನ್ನು ದಾಖಲಿಸಿ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಇದೀಗ ಜೂನ್ 21ರಂದು ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲು ಸಜ್ಜಾಗಿದೆ. ಹೀಗಿರುವಾಗಲೇ ಭಾರತ ಮಹಿಳಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್, ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇದು ಮುಂಬರುವ ದಿನಗಳಲ್ಲಿ ಹರ್ಮನ್‌ಪ್ರೀತ್ ಕೌರ್ ಪಡೆಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆಯಿದೆ. ಇದೀಗ ಶ್ರೇಯಾಂಕಾ ಪಾಟೀಲ್ ಸ್ಥಾನಕ್ಕೆ ಮತ್ತೋರ್ವ ಆರ್‌ಸಿಬಿ ಆಟಗಾರ್ತಿ ಭಾರತ ತಂಡ ಕೂಡಿಕೊಂಡಿದ್ದಾರೆ.

ಶ್ರೇಯಾಂಕಾ ಪಾಟೀಲ್, ನೆದರ್‌ಲೆಂಡ್ಸ್ ಎದುರಿನ ಗ್ರೂಪ್ 'ಎ' ಹಂತದ ಎರಡನೇ ಪಂದ್ಯದಲ್ಲಿ ಬೌಲಿಂಗ್ ಮಾಡಿ ಕ್ಷೇತ್ರ ರಕ್ಷಣೆ ಮಾಡುವ ಸಂದರ್ಭದಲ್ಲಿ ಜಾರಿ ಬಿದ್ದಿದ್ದರು. ಇದಾದ ಬಳಿಕ ತೀವ್ರ ಬಲಗಾಲ ಪಾದದ ನೋವಿನಿಂದ ಬಳಲಿದ ಶ್ರೇಯಾಂಕಾ ಪಾಟೀಲ್ ಅವರನ್ನು ಸ್ಟ್ರೆಚರ್ ಮೂಲಕ ಡ್ರೆಸ್ಸಿಂಗ್ ರೂಮ್‌ಗೆ ಕರೆದೊಯ್ಯಲಾಯಿತು. ಇದೀಗ ಶ್ರೇಯಾಂಕಾ ಪಾಟೀಲ್ ತೀವ್ರವಾಗಿ ಗಾಯಗೊಂಡಿರುವುದು ಬಿಸಿಸಿಐ ವೈದ್ಯಕೀಯ ಮೂಲಗಳು ಖಚಿತಪಡಿಸಿರುವುದರಿಂದ ಸಂಪೂರ್ಣ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಹೊರಬಿದ್ದಿದ್ದಾರೆ.

ಕನ್ನಡತಿ ಶ್ರೇಯಾಂಕಾಗೆ ನಿರಾಸೆ:

ಸಾಕಷ್ಟು ಗಾಯದ ಸಮಸ್ಯೆಯಿಂದಾಗಿಯೇ ಭಾರತ ತಂಡದಿಂದ ಹೊರಗುಳಿದಿದ್ದ ಶ್ರೇಯಾಂಕಾ ಪಾಟೀಲ್, ಇದೀಗ ಚುಟುಕು ವಿಶ್ವಕಪ್‌ಗೆ ಭಾರತ ತಂಡ ಕೂಡಿಕೊಂಡಿದ್ದರು. ಪಾಕಿಸ್ತಾನ ಎದುರಿನ ಪಂದ್ಯದಲ್ಲಿ ಶ್ರೇಯಾಂಕಾ ಮೂರು ಓವರ್‌ ಬೌಲಿಂಗ್ ಮಾಡಿ ಕೇವಲ 17 ರನ್ ನೀಡಿದ್ದರು. ಇದಷ್ಟೇ ಅಲ್ಲದೇ ಫೀಲ್ಡಿಂಗ್‌ನಲ್ಲಿ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳೆದಿದ್ದರು.

 

ಶ್ರೇಯಾಂಕಾ ಪಾಟೀಲ್ ಬದಲಿ ಆಟಗಾರ್ತಿ ಭಾರತ ತಂಡ ಸೇರ್ಪಡೆ:

ಇನ್ನು ಗಾಯಗೊಂಡು ಇಡೀ ಟೂರ್ನಿಯಿಂದ ಶ್ರೇಯಾಂಕಾ ಪಾಟೀಲ್ ಹೊರಬಿದ್ದ ಬೆನ್ನಲ್ಲೇ ಅವರ ಸ್ಥಾನಕ್ಕೆ ಲೆಗ್‌ ಸ್ಪಿನ್ನರ್ ಪ್ರೇಮಾ ರಾವತ್ ಅವರನ್ನು ಭಾರತ ತಂಡ ಕೂಡಿಕೊಳ್ಳಲು ಐಸಿಸಿ ಮಹಿಳಾ ಟಿ20 ವಿಶ್ವಕಪ್ ಆಯೋಜನಾ ಟೆಕ್ನಿಕಲ್ ಕಮಿಟಿಯು ಅನುಮತಿ ನೀಡಿದೆ. ಪ್ರೇಮಾ ರಾವತ್ ಸದ್ಯ ಭಾರತ ಮಹಿಳಾ 'ಎ' ತಂಡದ ಜತೆಗೆ ಇಂಗ್ಲೆಂಡ್ ಪ್ರವಾಸದಲ್ಲಿದ್ದರು. ಇದೀಗ ಪ್ರೇಮಾ ರಾವತ್ ಭಾರತ ಮಹಿಳಾ ಸೀನಿಯರ್ಸ್ ತಂಡ ಕೂಡಿಕೊಂಡಿದ್ದಾರೆ.

ಯಾರು ಈ ಪ್ರೇಮಾ ರಾವತ್?

ಇನ್ನೂ ಐಸಿಸಿ ಸೀನಿಯರ್ಸ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡದ ಪ್ರೇಮಾ ರಾವತ್, ದೇಶಿ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. 24 ವರ್ಷದ ಪ್ರೇಮಾ ರಾವತ್, ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಿಂಚುವ ಮುನ್ನ ವುಮೆನ್ಸ್ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯಲ್ಲಿ 8 ವಿಕೆಟ್ ಕಬಳಿಸಿ ಮಿಂಚಿದ್ದರು. ಇನ್ನು 2025-26ರ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆರ್‌ಸಿಬಿ ಪರ ಪ್ರೇಮಾ ರಾವತ್ ಮೂರು ಪಂದ್ಯಗಳನ್ನಾಡಿ ಎರಡು ವಿಕೆಟ್ ಕಬಳಿಸಿದ್ದರು.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ʻಧೈರ್ಯವಿದ್ರೆ ರಿಂಗ್ ಗೆ ಬನ್ನಿʼ ಹರ್ಭಜನ್ ಸಿಂಗ್‌ ಗೆ ಬಹಿರಂಗ ಸವಾಲು ಹಾಕಿದ ಶ್ರೀಶಾಂತ್
Vaibhav Sooryavanshi: ವೈಭವ್ ಸೂರ್ಯವಂಶಿಗೆ ಶಿಕ್ಷೆ ಕೊಡಿ ಎಂದವರಿಗೆ ಮುಟ್ಟಿ ನೋಡಿಕೊಳ್ಳೋ ಉತ್ತರ ಕೊಟ್ಟ ಬಿಸಿಸಿಐ!