
ನವದೆಹಲಿ(ಡಿ.19): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಭಾರತೀಯ ಜನತಾ ಪಕ್ಷದ ಹಾಲಿ ಸಂಸದ ಗೌತಮ್ ಗಂಭೀರ್, ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿರುವ ಸ್ವಚ್ಚತಾ ಅಭಿಯಾನದ ಭಾಗವಾಗಿ ಕರೋಲ್ ಭಾಗ್‌ನಲ್ಲಿರುವ ಶಿವನ ದೇವಸ್ಥಾನ ಆವರಣವನ್ನು ಸ್ವಚ್ಚತೆ ಮಾಡಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಈ ಮೊದಲು ಕಳೆದ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಕಾಲಾರಾಮ್ ಮಂದಿರದ ಆವರಣವನ್ನು ಸ್ವಚ್ಚಗೊಳಿಸಿ ಮಾದರಿಯಾಗಿದ್ದರಯ. ಸ್ವಚ್ಚತಾ ಅಭಿಯಾನದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಈ ದೇವಸ್ಥಾನದ ಆವರಣವನ್ನು ಸ್ವಚ್ಚಗೊಳಿಸಿದ್ದರು. ಈ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.
ಪ್ರಧಾನಿ ನರೇಂದ್ರ ಮೋದಿ ಕಾಲಾರಾಮ್ ಮಂದಿರದ ಆವರಣದಲ್ಲಿ ಬಕೆಟ್ ಹಾಗೂ ಮಾಪ್ ಹಿಡಿದು ದೇವಸ್ಥಾನದ ನೆಲವನ್ನು ಒರಿಸಿದ್ದರು. ಇನ್ನು ಇದಕ್ಕೂ ಮುನ್ನ ಶ್ರೀ ರಾಮ ಕುಂಡ್‌ನ ಬಳಿಯ ಗೋಧಾವರಿ ನದಿಯ ತಟದಲ್ಲಿರುವ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದಿದ್ದರು.
ದೇಗುಲ ಸ್ವಚ್ಛತೆಗೆ ಮೋದಿ ಕರೆ: ನಾಸಿಕ್ ದೇಗುಲ ನೆಲ ಒರೆಸಿದ ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಇರುವ ದೇವಸ್ಥಾನದಲ್ಲಿ ಜನರು ಸ್ವಚ್ಚತಾ ಕಾರ್ಯವನ್ನು ಕೈಗೊಳ್ಳುವಂತೆ ಕರೆಕೊಟ್ಟಿದ್ದರು.
11 ದಿನ ಕೇವಲ ಎಳನೀರು ಸೇವಿಸಿ ಮೋದಿ ಉಪವಾಸ!
ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ನೂತನ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆಗೆ ‘ಯಜಮಾನತ್ವ’ ವಹಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಅದಕ್ಕಾಗಿ ಶಾಸ್ತ್ರೋಕ್ತವಾದ 11 ದಿನಗಳ ಕಠಿಣ ವ್ರತಾಚರಣೆಯಲ್ಲಿ ತೊಡಗಿದ್ದಾರೆ.
ಪ್ರಾಣಪ್ರತಿಷ್ಠೆಗಾಗಿ ಮೋದಿ ‘ಯಮ ನಿಯಮ’ ವ್ರತಾಚರಣೆಯನ್ನು ಮಾಡುತ್ತಿದ್ದು, ಅದರ ಅಂಗವಾಗಿ ಜ.12ರಿಂದ ನೆಲದ ಮೇಲೆ ಮಲಗುತ್ತಾ, ಕೇವಲ ಎಳನೀರು ಸೇವಿಸಿ ಉಪವಾಸ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗ್ಳೂರು ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಟೂರ್ನಿಗೆ ಚಾಲನೆ
ಶ್ರೀರಾಮನ ಪ್ರಾಣಪ್ರತಿಷ್ಠೆಯ ಐತಿಹಾಸಿಕ ಹಾಗೂ ಪವಿತ್ರ ಸಂದರ್ಭದಲ್ಲಿ ಪಾಲ್ಗೊಳ್ಳಲು ನಾನು ಅದೃಷ್ಟ ಮಾಡಿದ್ದೇನೆ. ಇದಕ್ಕಾಗಿ ದೇವರೇ ನನ್ನನ್ನು ಆಯ್ಕೆ ಮಾಡಿದ್ದಾನೆ ಎಂದು ಭಾವಿಸಿದ್ದೇನೆ. ಹೀಗಾಗಿ ಶಾಸ್ತ್ರಬದ್ಧವಾಗಿ ವ್ರತಾಚರಣೆ ಮಾಡುತ್ತೇನೆ ಎಂದು ಜ.12ರಂದೇ ಮೋದಿ ಪ್ರಕಟಿಸಿದ್ದರು. ಆದರೆ ಅದು ಯಾವ ವ್ರತ ಎಂಬುದನ್ನು ಹೇಳಿರಲಿಲ್ಲ.
ಪ್ರಧಾನಿ ಕಚೇರಿಯ ಮೂಲಗಳ ಪ್ರಕಾರ ಅವರು ‘ಯಮ ನಿಯಮ’ ವ್ರತದಲ್ಲಿ ತೊಡಗಿದ್ದಾರೆ. ಅದರ ಅಂಗವಾಗಿ ಕೇವಲ ಎಳನೀರು ಬಿಟ್ಟರೆ ಇನ್ನಾವುದೇ ಆಹಾರ ಸೇವಿಸುತ್ತಿಲ್ಲ. ನಿತ್ಯ ರಾತ್ರಿ ನೆಲದ ಮೇಲೆ ಮಲಗುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.