* ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭ
* ಟಿ20 ವಿಶ್ವಕಪ್‌ನಲ್ಲಿ ಒಮ್ಮೆಯೂ ಭಾರತದೆದುರು ಗೆದ್ದಿಲ್ಲ ನೆರೆಯ ಪಾಕಿಸ್ತಾನ
* ಪಾಕಿಸ್ತಾನ ತಂಡವನ್ನು ಸೋಲಿಸಿದರೆ ಪಾಕಿಸ್ತಾನ ಸಿಗಲಿದೆಯಂತೆ ಬಂಪರ್ ಆಫರ್
ಇಸ್ಲಾಮಾಬಾದ್(ಅ.08): ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವ ಪಾಕಿಸ್ತಾನ ಕ್ರಿಕೆಟ್‌ಗೆ ಉದ್ಯಮಿಯೊಬ್ಬರು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರಂತೆ. ಆದರೆ ಅವರು ಒಂದು ಷರತ್ತು ಹಾಕಿದ್ದು, ಮುಂಬರುವ ಟಿ20 ವಿಶ್ವಕಪ್ (T20 World Cup) ನಲ್ಲಿ ಭಾರತವನ್ನು ಪಾಕಿಸ್ತಾನ ಸೋಲಿಸಬೇಕಂತೆ. ಸೋಲಿಸಿದರೆ ಆ ಉದ್ಯಮಿ ಖಾಲಿ ಚೆಕ್ ನೀಡಲಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಅಧ್ಯಕ್ಷ, ಮಾಜಿ ಕ್ರಿಕೆಟಿಗ ರಮೀಜ್ ರಾಜಾ (Ramiz Raja) ಹೇಳಿದ್ದಾರೆ.
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದೆದುರು ನೆರೆಯ ಪಾಕಿಸ್ತಾನ ಒಮ್ಮೆಯೂ ಗೆಲುವಿನ ನಗೆ ಬೀರಿಲ್ಲ. ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಸಾಕಷ್ಟು ಹೈವೋಲ್ಟೇಜ್‌ನಿಂದ ಕೂಡಿರುತ್ತದೆ. 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ (Team India) ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ರೋಚಕವಾಗಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 2007ರಿಂದೀಚಗೆ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ (Pakistan Cricket) ತಂಡಗಳು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 5 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ 5 ಪಂದ್ಯಗಳಲ್ಲೂ ಟೀಂ ಇಂಡಿಯಾ ಗೆಲುವಿನ ನಗೆ ಬೀರಿದೆ. ಇದುವರೆಗೂ ವಿಶ್ವಕಪ್ ಟೂರ್ನಿಗಳಲ್ಲಿ ಒಮ್ಮೆಯೂ ಭಾರತ ತಂಡವನ್ನು ಸೋಲಿಸಲು ಪಾಕಿಸ್ತಾನಕ್ಕೆ ಸಾಧ್ಯವಾಗಿಲ್ಲ.
ಭಾರತದ ಪ್ರಧಾನಿ ಮನಸ್ಸು ಮಾಡಿದರೇ, ಪಾಕ್ ಕ್ರಿಕೆಟ್ ಮಂಡಳಿ ಬೀದಿಪಾಲು..!
‘ಪಿಸಿಬಿಗೆ ಶೇ.50ರಷ್ಟು ಆರ್ಥಿಕ ನೆರವು ಐಸಿಸಿಯಿಂದ ಬರಲಿದೆ. ಐಸಿಸಿಗೆ ಹರಿದು ಬರುವ ಒಟ್ಟು ಹಣದಲ್ಲಿ ಶೇ.90ರಷ್ಟು ಭಾರತ ಕೊಡುಗೆ ಆಗಿದೆ. ಹೀಗಾಗಿ ಪರೋಕ್ಷವಾಗಿ ಭಾರತವೇ(ಬಿಸಿಸಿಐ) ನಮಗೆ ನೆರವು ನೀಡುತ್ತಿದೆ. ವಿಶ್ವ ಕ್ರಿಕೆಟ್‌ನಲ್ಲಿ ನಮಗೆ ಹೆಚ್ಚು ಗೌರವ ಸಿಗಬೇಕು ಎಂದರೆ ನಾವು ಸ್ವಾವಲಂಬಿಯಾಗಬೇಕು. ಅದಕ್ಕೆ ನಾವೇ ಹೂಡಿಕೆದಾರರು, ಪ್ರಾಯೋಜಕರನ್ನು ಹುಡುಕಿಕೊಳ್ಳಬೇಕು. ಸದ್ಯ ಟಿ20 ವಿಶ್ವಕಪ್‌ನಲ್ಲಿ ನಾವು ಭಾರತವನ್ನು ಸೋಲಿಸಿದರೆ ದೊಡ್ಡ ಮಟ್ಟದ ಹಣದ ನೆರವು ನೀಡುವುದಾಗಿ ಉದ್ಯಮಿಯೊಬ್ಬರು ಭರವಸೆ ನೀಡಿದ್ದಾರೆ. ಹೀಗಾಗಿ ನಾವು ಶತಾಯಗತಾಯ ಗೆಲ್ಲಲೇಬೇಕು’ ಎಂದು ರಾಜಾ ತಮ್ಮ ತಂಡದ ಆಟಗಾರರಿಗೆ ಕರೆ ನೀಡಿದ್ದಾರೆ.
REALITY CHECK!
Pakistan cricket board chairman speaking at his nation’s Senate Standing Committee meeting: Pak cricket board () is funded 50% by that is funded 90% by , or in a way, the indian businesses. If India wants, our board will collapse. pic.twitter.com/q6MQzBCbO5
ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯು ಅಕ್ಟೋಬರ್ 17ರಿಂದ ಆರಂಭವಾಗಲಿದೆ. ಮೊದಲಿಗೆ ಅರ್ಹತಾ ಸುತ್ತಿನ ಪಂದ್ಯಗಳು ಜರುಗಲಿದ್ದು, ಎರಡು ಗುಂಪಿನಲ್ಲಿ 8 ತಂಡಗಳು 4 ಸ್ಥಾನಗಳಿಗಾಗಿ ಪೈಪೋಟಿ ನಡೆಸಲಿವೆ. ಪ್ರತಿಗುಂಪಿನಲ್ಲಿ ಅಗ್ರ 2 ಸ್ಥಾನ ಗಳಿಸುವ ತಂಡಗಳು ಸೂಪರ್ 12 ಹಂತಕ್ಕೆ ಲಗ್ಗೆಯಿಡಲಿವೆ. ಸೂಪರ್ 12 ಹಂತದ ಪಂದ್ಯಗಳು ಅಕ್ಟೋಬರ್ 23 ರಿಂದ ಆರಂಭವಾಗಲಿದ್ದು, ಅಕ್ಟೋಬರ್ 24ರಂದು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.