* ಆತಿಯಾ ಶೆಟ್ಟಿ ಹಾಗೂ ಕೆ.ಎಲ್. ರಾಹುಲ್ ವಿವಾಹಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಸುನಿಲ್ ಶೆಟ್ಟಿ
* ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ ಆತಿಯಾ ಶೆಟ್ಟಿ ಜತೆ ಕೆ ಎಲ್ ರಾಹುಲ್ ಡೇಟಿಂಗ್
* ವರ್ಷಾಂತ್ಯದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವ ಸಾಧ್ಯತೆ
ಮುಂಬೈ(ಮೇ.12): ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಹಾಗೂ ಲಖನೌ ಸೂಪರ್ ಜೈಂಟ್ಸ್ ನಾಯಕ ಕೆ.ಎಲ್ ರಾಹುಲ್ (KL Rahul) ಹಾಗೂ ಆತಿಯಾ ಶೆಟ್ಟಿ (Athiya Shetty) ಕಳೆದ ಕೆಲ ವರ್ಷಗಳಿಂದ ಡೇಟಿಂಗ್ ನಡೆಸುತ್ತಿದ್ದು, ಈ ಸುದ್ದಿ ಸದ್ಯ ಖಾಸಗಿಯಾಗಿಯೇನು ಉಳಿದಿಲ್ಲ. ಈ ಜೋಡಿ ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಹಲವು ಹಲವು ಅನುಮಾನಗಳಿಗೆ ತೆರೆ ಎಳೆದಿದೆ. ಇತ್ತೀಚೆಗಿನ ವರದಿಗಳ ಪ್ರಕಾರ ಈ ತಾರಾ ಜೋಡಿಯು ಈ ವರ್ಷಾಂತ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಇದೆಲ್ಲದರ ನಡುವೆ ಆತಿಯಾ ಶೆಟ್ಟಿಯವರ ತಂದೆ ಬಾಲಿವುಡ್ ನಟ ಸುನಿಲ್ ಶೆಟ್ಟಿ (Suniel Shetty) ಇದೀಗ ಈ ವಿವಾಹಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಆತಿಯಾ ಶೆಟ್ಟಿ ಹಾಗೂ ಕೆ ಎಲ್ ರಾಹುಲ್ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನುವ ಗಾಳಿಸುದ್ದಿಯು ಇಂಗ್ಲೆಂಡ್ ಪ್ರವಾಸದಲ್ಲಿದ್ದಾಗ ಕ್ರಿಕೆಟಿಗ ರಾಹುಲ್ ಜತೆ ಆತಿಯಾ ಕಾಲ ಕಳೆದದ್ದು ಹೆಚ್ಚು ಸುದ್ದಿಯಾಗಿತ್ತು. ಇದಾದ ಬಳಿಕ ಆತಿಯಾ ಶೆಟ್ಟಿ ಸಹೋದರ ಆಹಾನ್ ಶೆಟ್ಟಿ ಚೊಚ್ಚಲ ಅಭಿನಯದ ಚಿತ್ರ 'ತಡಪ್' ಪ್ರೀಮಿಯರ್ ಶೋನಲ್ಲಿ ಆತಿಯಾ ಶೆಟ್ಟಿ ಹಾಗೂ ರಾಹುಲ್ ಮೊದಲ ಬಾರಿಗೆ ಒಟ್ಟಾಗಿ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದರು. ಪಿಂಕ್‌ವಿಲ್ಲಾ ವರದಿಯ ಪ್ರಕಾರ ಈ ಜೋಡಿಯು ಈ ವರ್ಷಾಂತ್ಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಎನ್ನಲಾಗಿದೆ.
ಈ ವಿಚಾರವಾಗಿ, ಖ್ಯಾತ ಬಾಲಿವುಡ್ ನಟ ಹಾಗೂ ಆತಿಯಾ ಶೆಟ್ಟಿ ತಂದೆ ಸುನಿಲ್ ಶೆಟ್ಟಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಈಗ ಸಾಕಷ್ಟು ಸಮಯ ಕಳೆದಿದ್ದು, ಅವರು ಏನು ಮಾಡಬೇಕು ಎನ್ನುವುದು ಅವರಿಗೆ ತಿಳಿದಿದೆ. ನನ್ನ ಮಗಳು ಹಾಗೂ ಮಗ ಈಗಾಗಲೇ ಸಾಕಷ್ಟು ಜವಾಬ್ದಾರಿಯನ್ನು ಹೊಂದಿದ್ದಾರೆ. ಅವರು ಸ್ವತಂತ್ರವಾದ ನಿರ್ಧಾರ ತೆಗೆದುಕೊಳ್ಳಲು ನಾನು ಇಷ್ಟಪಡುತ್ತೇನೆ. ನನ್ನ ಆಶೀರ್ವಾದ ಅವರಿಬ್ಬರ ಮೇಲಿರಲಿದೆ ಎಂದು ಎಕಾನಮಿಕ್ ಟೈಮ್ಸ್ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.
IPL 2022: ಎಬಿ ಡಿವಿಲಿಯರ್ಸ್ ಕುರಿತಂತೆ ಗುಡ್ ನ್ಯೂಸ್ ನೀಡಿದ ವಿರಾಟ್ ಕೊಹ್ಲಿ..!
ಕಳೆದ ಮಾರ್ಚ್ 15ರಂದು ಮುಂಬೈ ಏರ್ಪೋರ್ಟ್‌ನಲ್ಲಿ ಕೆ.ಎಲ್. ರಾಹುಲ್ ಹಾಗೂ ಆತಿಯಾ ಶೆಟ್ಟಿ ಒಟ್ಟಾಗಿಯೇ ಕಾಣಿಸಿಕೊಂಡಿದ್ದರು. 15ನೇ ಆವೃತ್ತಿಯ ಐಪಿಎಲ್ ಟೂರ್ನಿ ಆಡಲು ಮುಂಬೈಗೆ ಬಂದಿಳಿದ ಕೆ.ಎಲ್. ರಾಹುಲ್ ಅವರನ್ನು ಪಿಕ್ ಅಪ್ ಮಾಡಲು ಆತಿಯಾ ಶೆಟ್ಟಿ ಏರ್ಪೋರ್ಟ್‌ಗೆ ಬಂದಿದ್ದರು. ಇದೀಗ ಬಾಲಿವುಡ್ ಹಾಗೂ ಕ್ರಿಕೆಟ್ ಅಭಿಮಾನಿಗಳು ಈ ತಾರಾ ಜೋಡಿಯನ್ನು ಒಂದಾಗಿ ಕಂಡು ಖುಷಿ ಪಟ್ಟಿದ್ದಾರೆ.
ಇನ್ನು ಐಪಿಎಲ್ ವಿಚಾರಕ್ಕೆ ಬರುವುದಾದರೇ ಕೆ.ಎಲ್. ರಾಹುಲ್ ನೇತೃತ್ವದ ನೂತನ ತಂಡವಾದ ಲಖನೌ ಸೂಪರ್ ಜೈಂಟ್ಸ್ ತಂಡವು ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಡಾ. ಸಂಜೀವ್ ಗೋಯೆಂಕಾ ಒಡೆತನದ ಲಖನೌ ಸೂಪರ್ ಜೈಂಟ್ಸ್ ತಂಡವು ಇದುವರೆಗೂ 12 ಪಂದ್ಯಗಳನ್ನಾಡಿ 8 ಗೆಲುವು ಹಾಗೂ 4 ಸೋಲುಗಳೊಂದಿಗೆ 16 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಎರಡೇ ಸ್ಥಾನದಲ್ಲಿದ್ದು, ಇನ್ನೊಂದು ಗೆಲುವು ಲಖನೌ ತಂಡದ ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಲಿದೆ.