ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಫೆಬ್ರವರಿ 09ರಿಂದ ಆರಂಭ
ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳಲಿರುವ ದಿನೇಶ್ ಕಾರ್ತಿಕ್
ಆಸ್ಟ್ರೇಲಿಯಾ ವಿರುದ್ದವೇ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಡಿಕೆ
ನಾಗ್ಪುರ(ಫೆ.02): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭಕ್ಕೆ ಕ್ಷಣಗಣನೆ ಶುರವಾಗಿದೆ. ಫೆಬ್ರವರಿ 09ರಿಂದ ಟೆಸ್ಟ್ ಸರಣಿ ಆರಂಭವಾಗಲಿದ್ದು, ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್, ಇದೀಗ ಮತ್ತೊಮ್ಮೆ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ.
37 ವರ್ಷದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್, ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದಾದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಇದೀಗ ದಿನೇಶ್ ಕಾರ್ತಿಕ್, ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ತಾವು ಟೆಸ್ಟ್ ಕ್ರಿಕೆಟ್‌ಗೆ ಆಸ್ಟ್ರೇಲಿಯಾ ವಿರುದ್ದವೇ ಪಾದಾರ್ಪಣೆ ಮಾಡಿದ ಕ್ಷಣವನ್ನು ಮೆಲುಕು ಹಾಕಿದ್ದಾರೆ. "ನಾನು ಭಾರತದಲ್ಲಿ ಆಸ್ಟ್ರೇಲಿಯಾ ವಿರುದ್ದ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದೆ. ಇದೀಗ ಮತ್ತೊಮ್ಮೆ ಅದೇ ಆಗುತ್ತಿದೆ" ಎಂದು ಒಗಟಾಗಿ ದಿನೇಶ್ ಕಾರ್ತಿಕ್ ಟ್ವೀಟ್ ಮಾಡಿದ್ದಾರೆ.
Made my Test debut in India against Australia...
Well...It's happening again! ☺️
ಕೆಲವು ನೆಟ್ಟಿಗರು ದಿನೇಶ್ ಕಾರ್ತಿಕ್, ಮತ್ತೊಮ್ಮೆ ಟೆಸ್ಟ್ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಲಿದ್ದಾರೆ ಎನ್ನುವಂತೆ ಭಾವಿಸಿ ಟ್ವೀಟ್ ಮಾಡಿದ್ದಾರೆ. ಆದರೆ ಸದ್ಯದ ಪರಿಸ್ಥಿತಿಯಲ್ಲಂತೂ ಇದು ಅಸಾಧ್ಯವೆನಿಸಿದೆ.
rishab pant replacement
— khan (@goodmen761)Congrats DK brother. This time as a commentator. All the best 👌
— Mohan M S (@msmohan_1985)Congratulations for your second innings with Commentary
— Rajesh (@rajp3006)ಅಪಘಾತದಿಂದಾಗಿ ರಿಷಭ್ ಪಂತ್, ಕ್ರಿಕೆಟ್‌ನಿಂದ ಕೆಲಕಾಲ ದೂರವೇ ಉಳಿದಿದ್ದು, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಇದೀಗ ರಿಷಭ್ ಪಂತ್‌ಗೆ ಬದಲಾಗಿ ವಿಕೆಟ್ ಕೀಪರ್ ಬ್ಯಾಟರ್ ರೂಪದಲ್ಲಿ ಇಶಾನ್ ಕಿಶನ್ ಹಾಗೂ ಕೆ ಎಸ್ ಭರತ್ ಅವರನ್ನು ಆಯ್ಕೆ ಮಾಡಲಾಗಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ವೇಳಾಪಟ್ಟಿ ಹೀಗಿದೆ:
ಫೆಬ್ರವರಿ 9-12: ಮೊದಲ ಟೆಸ್ಟ್- ನಾಗ್ಪುರ
ಫೆಬ್ರವರಿ 17-21: ಎರಡನೇ ಟೆಸ್ಟ್- ಡೆಲ್ಲಿ
ಮಾರ್ಚ್ 01-05: ಮೂರನೇ ಟೆಸ್ಟ್ - ಧರ್ಮಶಾಲಾ
ಮಾರ್ಚ್ 09-13: ನಾಲ್ಕನೇ ಟೆಸ್ಟ್ - ಅಹಮದಾಬಾದ್
ಆಸೀಸ್ ಟೆಸ್ಟ್ ಸರಣಿಗೆ ಭಾರತ ತಂಡ ಹೀಗಿದೆ:
ರೋಹಿತ್ ಶರ್ಮಾ, ಕೆ ಎಲ್ ರಾಹುಲ್, ಶುಭ್‌ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ ಎಸ್ ಭರತ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್.