ಬುಮ್ರಾ ಬೆಂಕಿ ದಾಳಿಗೆ ಕಾಂಗರೂ ಧೂಳೀಪಟ; ಪರ್ತ್ ಟೆಸ್ಟ್‌ನಲ್ಲಿ ಮೊದಲ ಇನ್ನಿಂಗ್ಸ್ ಮುನ್ನಡೆ

By Naveen Kodase  |  First Published Nov 23, 2024, 10:01 AM IST

ಪರ್ತ್ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವು 104 ರನ್‌ಗಳಿಗೆ ಸರ್ವಪತನ ಕಂಡಿದೆ. ಬುಮ್ರಾ 5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು.


ಪರ್ತ್: ನಾಯಕ ಜಸ್ಪ್ರೀತ್ ಬುಮ್ರಾ 5 ವಿಕೆಟ್ ಗೊಂಚಲು ಪಡೆಯುವ ಮೂಲಕ ಪರ್ತ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 46 ರನ್ ಅಂತರದ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆಸ್ಟ್ರೇಲಿಯಾ ತಂಡವು ಕೇವಲ 104 ರನ್‌ಗಳಿಗೆ ಮೊದಲ ಇನ್ನಿಂಗ್ಸ್‌ ಸರ್ವಪತನ ಕಂಡಿದೆ. ಬುಮ್ರಾ 5 ವಿಕೆಟ್ ಪಡೆದರೆ, ಹರ್ಷಿತ್ ರಾಣಾ 3 ಹಾಗೂ ಮೊಹಮ್ಮದ್ ಸಿರಾಜ್ 2 ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.

ಇಲ್ಲಿನ ಪರ್ತ್ ಕ್ರಿಕೆಟ್ ಸ್ಟೆಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಕೇವಲ 150 ರನ್‌ಗಳಿಗೆ ಕಟ್ಟಿಹಾಕಿ ಮೊದಲ ಇನ್ನಿಂಗ್ಸ್‌ ಆರಂಭಿಸಿದ್ದ ಆತಿಥೇಯ ಆಸ್ಟ್ರೇಲಿಯಾ ತಂಡವು ಮೊದಲ ದಿನದಾಟದಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು ಕೇವಲ 67 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಎರಡನೇ ದಿನದಾಟದಲ್ಲಿ ಕಾಂಗರೂ ಪಡೆಯನ್ನು ನೂರು ರನ್‌ಗಳೊಂದಿಗೆ ಕಟ್ಟಿಹಾಕುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯಿತು. 

Latest Videos

undefined

ಬೆಂಗಳೂರಿನ ಕ್ರಿಕೆಟ್ ಸ್ಟೇಡಿಯಂಗೆ ಎಂ ಚಿನ್ನಸ್ವಾಮಿ ಹೆಸರು ಬಂದಿದ್ದು ಹೇಗೆ?

India overcome Australia fightback to take a handy first-innings lead. | 📝: https://t.co/j30yIgik8j pic.twitter.com/P9phbyyPKo

— ICC (@ICC)

ಬುಮ್ರಾ ತಾವೆಸೆದ ಮೊದಲ ಎಸೆತದಲ್ಲೇ ಅಲೆಕ್ಸ್ ಕ್ಯಾರಿಯನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಕ್ಯಾರಿ 21 ರನ್ ಗಳಿಸಿ ವಿಕೆಟ್ ಕೀಪರ್ ರಿಷಭ್ ಪಂತ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇದರ ಬೆನ್ನಲ್ಲೇ ನೇಥನ್ ಲಯನ್ 5 ರನ್ ಗಳಿಸಿ ಹರ್ಷಿತ್‌ ರಾಣಾಗೆ ವಿಕೆಟ್ ಒಪ್ಪಿಸಿದರು. ಇನ್ನು ಕೊನೆಯಲ್ಲಿ ಮಿಚೆಲ್ ಸ್ಟಾರ್ಕ್ 112 ಎಸೆತಗಳನ್ನು ಎದುರಿಸಿ 26 ರನ್ ಗಳಿಸಿ ಕೊನೆಯವರಾಗಿ ವಿಕೆಟ್ ಒಪ್ಪಿಸಿದರು. ಪರ್ತ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಸ್ಟಾರ್ಕ್ ಗಳಿಸಿದ 26 ರನ್ ಆಸೀಸ್ ಪರ ದಾಖಲಾದ ವೈಯುಕ್ತಿಕ ಗರಿಷ್ಠ ಸ್ಕೋರ್ ಎನಿಸಿಕೊಂಡಿತು.

ಬುಮ್ರಾ ಬ್ರಹ್ಮಾಸ್ತ್ರಕ್ಕೆ ಕಾಂಗರೂ ಪಡೆ ಕಂಗಾಲು; ಪರ್ತ್ ಟೆಸ್ಟ್‌ನ ಮೊದಲ ದಿನವೇ 17 ವಿಕೆಟ್ ಪತನ!

SENA ದೇಶಗಳಲ್ಲಿ 7 ಬಾರಿ 5+ ವಿಕೆಟ್: ಸೆನಾ ದೇಶಗಳಲ್ಲಿ ಜಸ್ಪ್ರೀತ್ ಬುಮ್ರಾ 7ನೇ ಬಾರಿಗೆ 5+ ವಿಕೆಟ್ ಕಬಳಿಸುವ ಮೂಲಕ ಭಾರತ ಪರ ಅತಿಹೆಚ್ಚು ಬಾರಿ ಸೆನಾ ರಾಷ್ಟ್ರಗಳಲ್ಲಿ 5+ ವಿಕೆಟ್ ಕಬಳಿಸಿದ ಕಪಿಲ್ ದೇವ್ ದಾಖಲೆಯನ್ನು ಬುಮ್ರಾ ಸರಿಗಟ್ಟಿದ್ದಾರೆ. ಬುಮ್ರಾ ಟೆಸ್ಟ್ ಜೀವನದಲ್ಲಿ 11ನೇ ಬಾರಿಗೆ 5+ ವಿಕೆಟ್ ಸಾಧನೆ ಮಾಡಿದ್ದಾರೆ. ಈ ಪೈಕಿ ವಿದೇಶಿ ನೆಲದಲ್ಲಿ ಅದರಲ್ಲೂ ಸೆನಾ ದೇಶಗಳಲ್ಲೇ 7 ಬಾರಿ 5+ ವಿಕೆಟ್ ಸಾಧನೆ ಮಾಡಿರುವುದು ವಿಶೇಷ.

SENA ದೇಶಗಳೆಂದರೆ: ಸೌಥ್ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ.

click me!