ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾಗಿರುವ ಹಿನ್ನೆಲೆಯಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ಮುಂಬೈ: ಎರಡನೇ ಮಗುವಿಗೆ ಜನ್ಮ ನೀಡಿದ ಪತ್ನಿ ರಿತಿಕಾ ಸಜ್ದೇ ಜೊತೆ ಇನ್ನಷ್ಟು ದಿನ ಸಮಯ ಕಳೆಯುವ ಉದ್ದೇಶದಿಂದ ಮೊದಲ ಟೆಸ್ಟ್ ಪಂದ್ಯಕ್ಕೆ ಗೈರಾಗುವುದಾಗಿ ರೋಹಿತ್ ಶರ್ಮಾ ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪರ್ತ್ ಟೆಸ್ಟ್‌ಗೆ ರೋಹಿತ್ ಶರ್ಮಾ ಅಲಭ್ಯತೆ ಬಗ್ಗೆ ಹಲವು ದಿನಗಳಿಂದ ಸುದ್ದಿಯಾಗುತ್ತಿತ್ತು. ಈ ನಡುವೆ ರೋಹಿತ್ ಶರ್ಮಾ ಶೀಘ್ರದಲ್ಲೇ ಆಸೀಸ್‌ಗೆ ತೆರಳಿ, ಮೊದಲ ಟೆಸ್ಟ್‌ಗೂ ಮುನ್ನ ತಂಡ ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಸದ್ಯ ಮೊದಲ ಟೆಸ್ಟ್‌ಗೆ ಗೈರಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಗೊತ್ತಾಗಿದೆ.
undefined
ಅವರು ಡಿ.6ರಿಂದ ಆರಂಭಗೊಳ್ಳಲಿರುವ 2ನೇ ಟೆಸ್ಟ್‌ಗೂ ಮುನ್ನ ತಂಡಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಮೊದಲ ಟೆಸ್ಟ್‌ನಲ್ಲಿ ರೋಹಿತ್ ಅನುಪಸ್ಥಿತಿಯಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ. ವೇಗಿ ಬುಮ್ರಾ ಆಸ್ಟ್ರೇಲಿಯಾ ಎದುರಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 5 ಪಂದ್ಯಗಳ ಸರಣಿಗೆ ಉಪನಾಯಕನಾಗಿ ಆಯ್ಕೆಯಾಗಿದ್ದರು.
ಐಪಿಎಲ್ ಹರಾಜಿನಲ್ಲಿ ಈ 4 ಫಾರಿನ್ ಆಟಗಾರರನ್ನು ಖರೀದಿಸಿದ್ರೆ, ಈ ಸಲ ಕಪ್ ಆರ್‌ಸಿಬಿಯದ್ದೇ!
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ನವೆಂಬರ್ 22ರಿಂದ ಪರ್ತ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಪರ್ತ್ ಟೆಸ್ಟ್ ಬಳಿಕ ಡಿಸೆಂಬರ್ 06ರಿಂದ ಅಡಿಲೇಡ್ ಓವಲ್ ಮೈದಾನದಲ್ಲಿ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ನಡೆಯಲಿದೆ. ಇನ್ನು ಡಿಸೆಂಬರ್ 14ರಿಂದ ಗಾಬಾದಲ್ಲಿ ಮೂರನೇ ಟೆಸ್ಟ್ ಪಂದ್ಯವು ನಡೆದರೆ, ಡಿಸೆಂಬರ್ 26ರಿಂದ ಐತಿಹಾಸಿಕ ಮೆಲ್ಬೊರ್ನ್ ಸ್ಟೇಡಿಯಂನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ನಡೆಯಲಿದೆ. ಇನ್ನು ಜನವರಿ 03ರಿಂದ ಸಿಡ್ನಿ ಕ್ರಿಕೆಟ್ ಸ್ಟೇಡಿಯಂನಲ್ಲಿ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವು ನಡೆಯಲಿದೆ.
ಆಸೀಸ್‌ನಿಂದ ತವರಿಗೆ ವಾಪಸ್ ಬಂದ ಸಾಯ್ ಸುದರ್ಶನ್, ಋತುರಾಜ್
ನವದೆಹಲಿ: ಆಸ್ಟ್ರೇಲಿಯಾ ‘ಎ’ ತಂಡದ ವಿರುದ್ಧ 2 ಅಭ್ಯಾಸ ಪಂದ್ಯಗಳನ್ನಾಡಿದ ಭಾರತ ‘ಎ’ ತಂಡದ ಬಹುತೇಕ ಆಟಗಾರರು ತವರಿಗೆ ಹಿಂದಿರುಗಿದ್ದಾರೆ. ಭಾನುವಾರ ಋತುರಾಜ್ ಗಾಯಕ್ವಾಡ್, ಸಾಯ್ ಸುದರ್ಶನ್ ಸೇರಿ ಪ್ರಮುಖರು ಆಸೀಸ್‌ನಿಂದ ಭಾರತದ ವಿಮಾನವೇರಿದರು.
ಋತುರಾಜ್ ಹಾಗೂ ಸುದರ್ಶನ್ ಆಸ್ಟ್ರೇಲಿಯಾ ವಿರುದ್ಧ ಸರಣಿಗಾಗಿ ಭಾರತ ಹಿರಿಯರ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ದೇವದತ್ ಪಡಿಕ್ಕಲ್ ಹೊರತುಪಡಿಸಿ ಇತರ ಆಟಗಾರರು ತವರಿಗೆ ಹಿಂದಿರುಗಿದ್ದಾರೆ. ಇತ್ತೀಚೆಗೆ ಮಕಾಯ್ ಹಾಗೂ ಮೆಲ್ಬರ್ನ್ ಕ್ರೀಡಾಂಗಣಗಳಲ್ಲಿ ನಡೆದ ಆಸೀಸ್ ‘ಎ’ ವಿರುದ್ಧ ಅನಧಿಕೃತ ಟೆಸ್ಟ್ ಪಂದ್ಯಗಳಲ್ಲಿ ಭಾರತ ‘ಎ’ ತಂಡ ಸೋಲನುಭವಿಸಿತ್ತು.
ಟೀಂ ಇಂಡಿಯಾಗೆ ಮತ್ತೊಂದು ಶಾಕ್, ಸ್ಟಾರ್ ಆಟಗಾರನ ಎಡಗೈ ಬೆರಳು ಮುರಿತ: ಪರ್ತ್ ಟೆಸ್ಟ್‌ನಿಂದ ಔಟ್?
ಟಿ20: ಇಂಗ್ಲೆಂಡ್ ವಿರುದ್ಧ ವೆಸ್ಟ್‌ಇಂಡೀಸ್‌ಗೆ ಗೆಲುವು
ಗ್ರಾಸ್ ಐಲೆಟ್(ಸೇಂಟ್ ಲೂಸಿಯಾ): ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯದಲ್ಲಿ ಆತಿಥೇಯ ವೆಸ್ಟ್‌ಇಂಡೀಸ್ 5 ವಿಕೆಟ್ ಗೆಲುವು ಸಾಧಿಸಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ತಂಡ ಮೊದಲ ಗೆಲುವು ಸಾಧಿಸಿದ್ದು, ಹಿನ್ನಡೆಯನ್ನು 1-3ಕ್ಕೆ ತಗ್ಗಿಸಿ ಕ್ಲೀನ್‌ಸ್ವೀಪ್‌ನಿಂದ ಪಾರಾಗಿದೆ. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 5 ವಿಕೆಟ್‌ಗೆ 218 ರನ್ ಕಲೆಹಾಕಿತು. ಫಿಲ್ ಸಾಲ್ಟ್ 55, ಜೇಕಬ್ ಬೆಥೆಲ್ 32 ಎಸೆತದಲ್ಲಿ ಔಟಾಗದೆ 62 ರನ್ ಸಿಡಿಸಿದರು. ದೊಡ್ಡ ಗುರಿ ಬೆನ್ನತ್ತಿದ ವಿಂಡೀಸ್ 19 ಓವರ್‌ಗಳಲ್ಲೇ ಗೆಲುವು ತನ್ನದಾಗಿಸಿಕೊಂಡಿತು. ಎವಿನ್ ಲೆವಿಸ್ 31 ಎಸೆತದಲ್ಲಿ 68, ಶಾಯ್ ಹೋಪ್ 24 ಎಸೆತಗಳಲ್ಲಿ 54 ರನ್ ಸಿಡಿಸಿ ತಂಡವನ್ನು ಗೆಲ್ಲಿಸಿದರು.