Ind vs Aus: ಉಸ್ಮಾನ್ ಖವಾಜ ಆಕರ್ಷಕ ಶತಕ, ಆಸೀಸ್‌ಗೆ ಮೊದಲ ದಿನದ ಗೌರವ..!

Published : Mar 09, 2023, 04:44 PM IST
Ind vs Aus: ಉಸ್ಮಾನ್ ಖವಾಜ ಆಕರ್ಷಕ ಶತಕ, ಆಸೀಸ್‌ಗೆ ಮೊದಲ ದಿನದ ಗೌರವ..!

ಸಾರಾಂಶ

ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಆರಂಭ ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜ ಅಜೇಯ ಶತಕ ದಿನದಾಟದಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 255 ರನ್ ಗಳಿಸಿದ ಆಸ್ಟ್ರೇಲಿಯಾ

ಅಹಮದಾಬಾದ್‌(ಮಾ.09): ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜ ಬಾರಿಸಿದ ಆಕರ್ಷಕ ಶತಕದ ನೆರವಿನಿಂದ ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತದತ್ತ ದಾಪುಗಾಲಿಡಲಾರಂಭಿಸಿದೆ. ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಟೆಸ್ಟ್‌ ಪಂದ್ಯದ ಮೊದಲ ದಿನದಾಟದಂತ್ಯದ ವೇಳೆಗೆ ಆಸ್ಟ್ರೇಲಿಯಾ 4 ವಿಕೆಟ್ ಕಳೆದುಕೊಂಡು 255 ರನ್‌ ಬಾರಿಸಿದೆ. ಖವಾಜ 104 ಹಾಗೂ ಕ್ಯಾಮರೋನ್ ಗ್ರೀನ್ 49 ರನ್ ಬಾರಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕರಾದ ಟ್ರಾವಿಸ್ ಹೆಡ್ ಹಾಗೂ ಉಸ್ಮಾನ್ ಖವಾಜ ಅರ್ಧಶತಕದ ಜತೆಯಾಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ 15.3 ಓವರ್‌ಗಳಲ್ಲಿ 61 ರನ್ ಗಳಿಸಿದ್ದ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಯಶಸ್ವಿಯಾದರು. ಉಸ್ಮಾನ್ ಖವಾಜ 44 ಎಸೆತಗಳನ್ನು ಎದುರಿಸಿ 7 ಬೌಂಡರಿ ಸಹಿತ 32 ರನ್ ಬಾರಿಸಿ ರವೀಂದ್ರ ಜಡೇಜಾಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇನ್ನು ಇದರ ಬೆನ್ನಲ್ಲೇ ಕೇವಲ 3 ರನ್‌ ಬಾರಿಸಿ ಮಾರ್ನಸ್ ಲಬುಶೇನ್, ವೇಗಿ ಮೊಹಮ್ಮದ್ ಶಮಿ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್‌ ಆಗಿ ಪೆವಿಲಿಯನ್ ಸೇರಿದರು

ಸ್ಮಿತ್-ಖವಾಜ ಜತೆಯಾಟ: ಕೇವಲ 11 ರನ್ ಅಂತರದಲ್ಲಿ ಎರಡು ವಿಕೆಟ್ ಕಳೆದುಕೊಂಡು ಆತಂಕ್ಕೊಳಗಾಗಿದ್ದ ಆಸ್ಟ್ರೇಲಿಯಾ ತಂಡಕ್ಕೆ ಮೂರನೇ ವಿಕೆಟ್‌ಗೆ ಸ್ಟೀವ್ ಸ್ಮಿತ್ ಹಾಗೂ ಉಸ್ಮಾನ್ ಖವಾಜ ಎಚ್ಚರಿಕೆಯ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಎರಡನೇ ಸೆಷನ್‌ನಲ್ಲಿ ವಿಕೆಟ್ ಕಳೆದುಕೊಳ್ಳದಂತೆ ನೋಡಿಕೊಳ್ಳುವಲ್ಲಿ ಈ ಜೋಡಿ ಯಶಸ್ವಿಯಾಯಿತು. ಮೂರನೇ ವಿಕೆಟ್‌ಗೆ ಈ ಜೋಡಿ 248 ಎಸೆತಗಳನ್ನು ಎದುರಿಸಿ 79 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. 135 ಎಸೆತಗಳನ್ನು ಎದುರಿಸಿ 3 ಬೌಂಡರಿ ಸಹಿತ 38 ರನ್ ಬಾರಿಸಿದ ಸ್ಟೀವ್ ಸ್ಮಿತ್ ಅವರನ್ನು ರವೀಂದ್ರ ಜಡೇಜಾ ಕ್ಲೀನ್‌ ಬೌಲ್ಡ್‌ ಮಾಡಿ ಪೆವಿಲಿಯನ್ನಿಗಟ್ಟಿದರು. ಇನ್ನು ಪೀಟರ್ ಹ್ಯಾಂಡ್ಸ್‌ಕಂಬ್ ಬ್ಯಾಟಿಂಗ್ ಕೇವಲ 17 ರನ್‌ಗಳಿಗೆ ಸೀಮಿತವಾಯಿತು. 

ಉಸ್ಮಾನ್ ಖವಾಜ ಆಕರ್ಷಕ ಶತಕ: ಆಸ್ಟ್ರೇಲಿಯಾ ಪರ ಎರಡು ಹಾಗೂ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ಖವಾಜ, ಇದೀಗ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾದರು. ದಿನದಾಟದುದ್ದಕ್ಕೂ ಎಚ್ಚರಿಕೆ ಬ್ಯಾಟಿಂಗ್ ನಡೆಸಿದ ಉಸ್ಮಾನ್ ಖವಾಜ 246 ಎಸೆತಗಳನ್ನು ಎದುರಿಸಿ 15 ಬೌಂಡರಿ ಸಹಿತ ವೃತ್ತಿಜೀವನದ 14ನೇ ಶತಕ ಸಿಡಿಸಿ ಸಂಭ್ರಮಿಸಿದರು. ಇದು ಖವಾಜ ಭಾರತದಲ್ಲಿ ಬಾರಿಸಿದ ಮೊದಲ ಟೆಸ್ಟ್ ಶತಕ ಎನಿಸಿಕೊಂಡಿತು. 

Ind vs Aus ಆಸೀಸ್‌ ಬ್ಯಾಟರ್ ವಿಕೆಟ್ ಚೆಲ್ಲಾಪಿಲ್ಲಿ ಮಾಡಿದ ಮೊಹಮ್ಮದ್ ಶಮಿ ಮಾರಕ ದಾಳಿ..! ವಿಡಿಯೋ ವೈರಲ್‌

ಇನ್ನು 5ನೇ ವಿಕೆಟ್‌ಗೆ ಉಸ್ಮಾನ್ ಖವಾಜ ಜತೆಯಾದ ಕ್ಯಾಮರೋನ್ ಗ್ರೀನ್ ದಿಟ್ಟ ಬ್ಯಾಟಿಂಗ್ ನಡೆಸುವ ಮೂಲಕ ಆಸೀಸ್ ರನ್ ವೇಗಕ್ಕೆ ಚುರುಕು ಮುಟ್ಟಿಸಿದರು. 5ನೇ ವಿಕೆಟ್‌ಗೆ ಈ ಜೋಡಿ 116 ಎಸೆತಗಳನ್ನು ಎದುರಿಸಿ ಮುರಿಯದ 85 ರನ್‌ಗಳ ಜತೆಯಾಟ ನಿಭಾಯಿಸಿತು. ಕ್ಯಾಮರೋನ್ ಗ್ರೀನ್‌ 64 ಎಸೆತಗಳನ್ನು ಎದುರಿಸಿ 8 ಬೌಂಡರಿ ಸಹಿತ 49 ರನ್ ಬಾರಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?