T20 World Cup ಸೆಮೀಸ್‌ನಲ್ಲಿ ಕಾರ್ತಿಕ್-ಪಂತ್ ಇಬ್ಬರಿಗೂ ಚಾನ್ಸ್: ಕ್ಯಾಪ್ಟನ್ ರೋಹಿತ್ ಶರ್ಮಾ ಸುಳಿವು

Published : Nov 09, 2022, 04:36 PM IST
T20 World Cup ಸೆಮೀಸ್‌ನಲ್ಲಿ ಕಾರ್ತಿಕ್-ಪಂತ್ ಇಬ್ಬರಿಗೂ ಚಾನ್ಸ್: ಕ್ಯಾಪ್ಟನ್ ರೋಹಿತ್ ಶರ್ಮಾ ಸುಳಿವು

ಸಾರಾಂಶ

ಭಾರತ-ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಪಂದ್ಯಕ್ಕೆ ಕ್ಷಣಗಣನೆ ಅಡಿಲೇಡ್ ಓವಲ್‌ನಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯ ಸೆಮೀಸ್‌ ಪಂದ್ಯಕ್ಕೆ ಪಂತ್-ಕಾರ್ತಿಕ್ ಇಬ್ಬರೂ ಆಯ್ಕೆಗೆ ಲಭ್ಯ

ಅಡಿಲೇಡ್‌(ನ.09): ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದು, ಗುರುವಾರ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ದ ಕಾದಾಡಲಿದೆ. ಸದ್ಯ ಭಾರತ ಕ್ರಿಕೆಟ್ ತಂಡವು ಸೂಪರ್ 12 ಹಂತದ ಗ್ರೂಪ್ 2ನಲ್ಲಿ 5 ಪಂದ್ಯಗಳನ್ನಾಡಿ 4 ಗೆಲುವು ಒಂದು ಸೋಲಿನೊಂದಿಗೆ 8 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶಿಸಿದೆ. ಇದೀಗ ಸೆಮಿಫೈನಲ್‌ನಲ್ಲಿ ಭಾರತ ಯಾವ ಕಾಂಬಿನೇಷನ್‌ನೊಂದಿಗೆ ಕಣಕ್ಕಿಳಿಯಲಿದೆ ಎನ್ನುವ ಕುತೂಹಲ ಜೋರಾಗಿದೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ನಾಯಕ ಅಚ್ಚರಿಯ ಸುಳಿವೊಂದನ್ನು ನೀಡಿದ್ದಾರೆ.

ಸೂಪರ್ 12 ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ, ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್‌ಗೆ ಭಾರತ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗಿತ್ತು. ದಿನೇಶ್ ಕಾರ್ತಿಕ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿದಿದ್ದ ಪಂತ್ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲವಾಗಿದ್ದರು. ಪಂತ್ 5 ಎಸೆತಗಳನ್ನು ಎದುರಿಸಿ ಕೇವಲ 3 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದ್ದರು. 

ದಿನೇಶ್ ಕಾರ್ತಿಕ್ ಹಾಗೂ ರಿಷಭ್ ಪಂತ್ ಇಬ್ಬರಲ್ಲಿ ಈ ಪ್ರವಾಸದಲ್ಲಿ ಎರಡು ಅಭ್ಯಾಸ ಪಂದ್ಯಗಳನ್ನು ಹೊರತುಪಡಿಸಿ ಪಂತ್‌ಗೆ ಆಡಲು ಹೆಚ್ಚು ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಅವರಿಗೆ ಸೂಪರ್ 12 ಹಂತದ ಕೊನೆಯ ಪಂದ್ಯದಲ್ಲಿ ಅವಕಾಶ ನೀಡಲಾಗಿತ್ತು. ಇದರಿಂದ ಮುಂಬರುವ ಸೆಮಿಫೈನಲ್ ಹಾಗೂ ಫೈನಲ್‌ನಲ್ಲಿ ಬದಲಾವಣೆ ಮಾಡಲು ಸಾಧ್ಯವಾಗಲಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. 

ಆಸ್ಟ್ರೇಲಿಯಾಗೆ ಕರೆತಂದು ಒಂದೇ ಒಂದು ಪಂದ್ಯವನ್ನಾಡಲು ಅವಕಾಶ ನೀಡದೇ ಹೋದರೆ ಅನ್ಯಾಯ ಮಾಡಿದಂತಾಗುತ್ತದೆ. ನಾವು ಪ್ರತಿಯೊಬ್ಬ ಅಟಗಾರರಿಗೂ ಸಿದ್ದರಿರುವಂತೆ ಸೂಚಿಸಿದ್ದೇವೆ. ಅದು ಲೀಗ್ ಆಗಿರಲಿ ಅಥವಾ ಸೆಮೀಸ್ ಆಗಿರಲಿ. ತಾಂತ್ರಿಕವಾಗಿ ಯಾರು ಹೊಂದಿಕೊಳ್ಳುತ್ತಾರೋ ಅವರಿಗೆ ಅವಕಾಶ ನೀಡಲಾಗುತ್ತದೆ. ಎಡಗೈ ಬ್ಯಾಟರ್‌ಗಳು ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳನ್ನು ಎದುರಿಸುವುದು ಸುಲಭವಾಗಲಿದೆ. ಆದರೆ ನಾಳೆ ಏನಾಗಲಿದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ನಾಳೆ ಯಾರು ಕಣಕ್ಕಿಳಿಯುತ್ತಾರೆ ಎಂದು ನಾನೀಗಲೇ ಹೇಳುವುದಿಲ್ಲ, ಆದರೆ ಒಂದಂತೂ ಸತ್ಯ ದಿನೇಶ್ ಕಾರ್ತಿಕ್ ಹಾಗೂ ರಿಷಭ್ ಪಂತ್ ಇಬ್ಬರೂ ಆಯ್ಕೆಗೆ ಲಭ್ಯರಿದ್ದಾರೆ ಎಂದು ರೋಹಿತ್‌ ಶರ್ಮಾ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!