ಮಳೆಯ ಅಡಚಣೆಯ ನಡುವೆಯೂ ಮೊದಲ ದಿನದಾಟದಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 208 ರನ್ ಬಾರಿಸಿದ್ದ ಟೀಂ ಇಂಡಿಯಾ ಆರಂಭದಲ್ಲೇ ಮೊಹಮ್ಮದ್ ಸಿರಾಜ್ ವಿಕೆಟ್ ಕಳೆದುಕೊಂಡಿತು.
ಸೆಂಚೂರಿಯನ್(ಡಿ.27): ಕನ್ನಡಿಗ ಕೆ ಎಲ್ ರಾಹುಲ್ ಬಾರಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಎದುರು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್‌ನಲ್ಲಿ 245 ರನ್ ಬಾರಿಸಿ ಸರ್ವಪತನ ಕಂಡಿದೆ. ಕಠಿಣ ಪಿಚ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ಕೆ ಎಲ್ ರಾಹುಲ್ ಟೆಸ್ಟ್ ವೃತ್ತಿಜೀವನದ 8ನೇ ಶತಕ ಸಿಡಿಸಿ ಸಂಭ್ರಮಿಸಿದರು.
ಮಳೆಯ ಅಡಚಣೆಯ ನಡುವೆಯೂ ಮೊದಲ ದಿನದಾಟದಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 208 ರನ್ ಬಾರಿಸಿದ್ದ ಟೀಂ ಇಂಡಿಯಾ ಆರಂಭದಲ್ಲೇ ಮೊಹಮ್ಮದ್ ಸಿರಾಜ್ ವಿಕೆಟ್ ಕಳೆದುಕೊಂಡಿತು. ಆದರೆ ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಕೆ ಎಲ್ ರಾಹುಲ್ 133 ಎಸೆತಗಳನ್ನು ಎದುರಿಸಿ 14 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 101 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
📸📸💯 🙌🙌 pic.twitter.com/lBEC4UisFa
— BCCI (@BCCI)
undefined
ಭಾರತ ತಂಡವು ಒಂದು ಹಂತದಲ್ಲಿ ಕೇವಲ 107 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಾಗ ಕ್ರೀಸ್‌ಗಿಳಿದ ಕೆ ಎಲ್ ರಾಹುಲ್, ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು.
ಇನ್ನು ದಕ್ಷಿಣ ಆಫ್ರಿಕಾ ಪರ ಮಾರಕ ದಾಳಿ ನಡೆಸಿದ ಕಗಿಸೋ ರಬಾಡ 59 ರನ್ ನೀಡಿ 5 ವಿಕೆಟ್ ಕಬಳಿಸಿದರು. ಇನ್ನು ನಂದ್ರೆ ಬರ್ಗರ್ 3 ಹಾಗೂ ಮಾರ್ಕೊ ಯಾನ್ಸೆನ್ ಮತ್ತು ಗೆರಾಲ್ಡ್ ಕೋಟ್ಜಿ ತಲಾ ಒಂದೊಂದು ವಿಕೆಟ್ ಪಡೆದರು.