
ಮೆಲ್ಬರ್ನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ವಿಶಾಖಪಟ್ಟಣಂ ಮೂಲದ 21 ವರ್ಷದ ಪ್ರತಿಭಾನ್ವಿತ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಚೊಚ್ಚಲ ಟೆಸ್ಟ್ ಶತಕ ಸಿಡಿಸಿ ಮಿಂಚಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ಪರ್ತ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ನಿತೀಶ್ ಕುಮಾರ್ ರೆಡ್ಡಿ 171 ಎಸೆತಗಳನ್ನು ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಿತೀಶ್ ಕುಮಾರ್ ರೆಡ್ಡಿ ಇದೀಗ ಆಸ್ಟ್ರೇಲಿಯಾ ನೆಲದಲ್ಲಿ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿದು ಶತಕ ಸಿಡಿಸಿದ ಭಾರತದ ಮೊದಲ ಬ್ಯಾಟರ್ ಎನ್ನುವ ಅಪರೂಪದ ದಾಖಲೆ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ಅನಿಲ್ ಕುಂಬ್ಳೆ 2008ರ ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ 8ನೇ ಕ್ರಮಾಂಖದಲ್ಲಿ ಬ್ಯಾಟಿಂಗ್ ಮಾಡಲಿಳಿದು 87 ರನ್ ಬಾರಿಸಿದ್ದು, ಇಲ್ಲಿಯವರೆಗಿನ ದಾಖಲೆಯಾಗಿತ್ತು. ಇದೀಗ ನಿತೀಶ್ ರೆಡ್ಡಿ, ಕುಂಬ್ಳೆ ರೆಕಾರ್ಡ್ ಬ್ರೇಕ್ ಮಾಡುವುದರ ಜತೆಗೆ ಶತಕ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.
ನಿತೀಶ್ ರೆಡ್ಡಿ ಅಡಿಲೇಡ್ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ನಲ್ಲಿ 42 ರನ್ ಬಾರಿಸಿದ್ದರು. ಆದರೆ ಇದೀಗ ಐತಿಹಾಸಿಕ ಮೆಲ್ಬರ್ನ್ ಟೆಸ್ಟ್‌ನಲ್ಲಿ 81 ಎಸೆತಗಳನ್ನು ಎದುರಿಸಿ ಚೊಚ್ಚಲ ಅರ್ಧಶತಕ ಪೂರೈಸಿದರು. ಇದಾದ ಬಳಿಕ ವಾಷಿಂಗ್ಟನ್ ಸುಂದರ್ ಜತೆಗೂಡಿ ತಂಡವನ್ನು ಫಾಲೋಆನ್ ಭೀತಿಯಿಂದ ಪಾರು ಮಾಡಿದ ನಿತೀಶ್ ರೆಡ್ಡಿ ಆ ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್ ಮೂಲಕ ತಂಡಕ್ಕೆ ಆಸರೆಯಾದರು. ಅಂತಿಮವಾಗಿ 171 ಎಸೆತಗಳನ್ನು ಎದುರಿಸಿ ಟೆಸ್ಟ್ ಕ್ರಿಕೆಟ್‌ನಲ್ಲಿ ಚೊಚ್ಚಲ ಬಾರಿಗೆ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.