ಟೆಸ್ಟ್ ವಿಶ್ವಕಪ್ ಫೈನಲ್ ಸ್ಥಾನಕ್ಕೆ ದಕ್ಷಿಣ ಆಫ್ರಿಕಾ ಸೆಣಸು!

By Naveen Kodase  |  First Published Dec 26, 2024, 7:57 AM IST

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸಲು ದಕ್ಷಿಣ ಆಫ್ರಿಕಾ ಕಾತರಿಸುತ್ತಿದೆ. ತವರಿನಲ್ಲಿ ಪಾಕಿಸ್ತಾನ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಗೆಲುವು ದಾಖಲಿಸಿದರೆ, ದಕ್ಷಿಣ ಆಫ್ರಿಕಾ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಪಾಕಿಸ್ತಾನ ತಂಡವು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ.


ಸೆಂಚೂರಿಯನ್: ಚೊಚ್ಚಲ ಬಾರಿಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸಲು ಕಾತರಿಸುತ್ತಿರುವ ದಕ್ಷಿಣ ಆಫ್ರಿಕಾ, ಗುರುವಾರದಿಂದ ತನ್ನ ತವರಿನಲ್ಲಿ ಪಾಕಿಸ್ತಾನ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಮೊದಲ ಪಂದ್ಯಕ್ಕೆ ಸೆಂಚೂರಿಯನ್ ಆತಿಥ್ಯ ವಹಿಸಲಿದೆ.

ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ದಕ್ಷಿಣ ಆಫ್ರಿಕಾಕ್ಕೆ 2 ಪಂದ್ಯ ಬಾಕಿ ಇದ್ದು, ಈ ಎರಡರಲ್ಲಿ ಒಂದರಲ್ಲಿ ಗೆದ್ದರೂ ಸಾಕು, 2025ರ ಜೂನ್‌ನಲ್ಲಿ ಲಂಡನ್‌ನ ದಿ ಲಾರ್ಡ್ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ಗೆ ಅಧಿಕೃತ ಪ್ರವೇಶ ದೊರೆಯಲಿದೆ. ಇತ್ತೀಚೆಗೆ ಮುಕ್ತಾಯಗೊಂಡ ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಕಿಸ್ತಾನ ವಿರುದ್ಧ 0-3ರಲ್ಲಿ ಸೋತಿದ್ದ ದ.ಆಫ್ರಿಕಾ, ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ. ಪಾಕಿಸ್ತಾನ ಐತಿಹಾಸಿಕ ಗೆಲುವಿನ ನಿರೀಕ್ಷೆ ಹೊಂದಿದೆ.

Tap to resize

Latest Videos

undefined

ಪಾಕಿಸ್ತಾನ ತಂಡವು ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ರೇಸ್‌ನಿಂದ ಹೊರಬಿದ್ದಿದ್ದು, ಇದೀಗ ದಕ್ಷಿಣ ಆಫ್ರಿಕಾ ಎದುರು ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ಹರಿಣಗಳಿಗೆ ಶಾಕ್ ನೀಡಲು ಎದುರು ನೋಡುತ್ತಿದೆ. ಆದರೆ ಮೇಲ್ನೋಟಕ್ಕೆ ತೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡವು ಭರ್ಜರಿ ಲಯದಲ್ಲಿದ್ದು, ಪಾಕಿಸ್ತಾನವನ್ನು ಬಗ್ಗುಬಡಿಯುವ ಮೂಲಕ ಮೊದಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವನ್ನಾಡುವ ಕನವರಿಕೆಯಲ್ಲಿದೆ.

ವಿಜಯ್‌ ಹಜಾರೆ ಟ್ರೋಫಿ: ಕರ್ನಾಟಕಕ್ಕಿಂದು ಪಂಜಾಬ್‌ ಚಾಲೆಂಜ್‌! ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣು

ಏಕದಿನ: ದ.ಆಫ್ರಿಕಾ ವಿರುದ್ಧ ಪಾಕಿಸ್ತಾನ 3-0 ಕ್ಲೀನ್‌ಸ್ವೀಪ್‌

ಜೋಹಾನ್ಸಬರ್ಗ್‌: ದ.ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಕಿಸ್ತಾನ 3-0 ಅಂತರದಲ್ಲಿ ಕ್ಲೀನ್‌ಸ್ವೀಪ್‌ ಮಾಡಿಕೊಂಡಿದೆ. 3ನೇ ಪಂದ್ಯದಲ್ಲಿ ಪಾಕ್‌ ಡಕ್ವರ್ತ್‌ ಲೂಯಿಸ್‌ ನಿಯಮದನ್ವಯ 36 ರನ್ ಜಯಗಳಿಸಿತು. ಸೈಮ್‌ ಅಯೂಬ್‌ ಮತ್ತೆ ಶತಕ ಬಾರಿಸಿದರು. ಹೀಗಾಗಿ ಪಾಕ್‌ 47 ಓವರಲ್ಲಿ 9 ವಿಕೆಟ್‌ಗೆ 308 ರನ್‌ ಕಲೆಹಾಕಿತು. ದೊಡ್ಡ ಗುರಿ ಬೆನ್ನತ್ತಿದ ದ.ಆಫ್ರಿಕಾ 42 ಓವರಲ್ಲಿ 271 ರನ್‌ಗೆ ಆಲೌಟಾಯಿತು.

ಬಾಕ್ಸಿಂಗ್ ಡೇ ಟೆಸ್ಟ್ ಸೋತರೆ WTC ಫೈನಲ್‌ನಿಂದ ಟೀಂ ಇಂಡಿಯಾ ಔಟ್‌?

ಕ್ರಿಕೆಟಿಗ ಚಹಲ್- ಧನಶ್ರೀ ವಿಚ್ಛೇದನ?

ನವದೆಹಲಿ: ಭಾರತದ ತಾರಾ ಕ್ರಿಕೆಟಿಗ ಯಜುವೇಂದ್ರ ಚಹಲ್‌ ಹಾಗೂ ನಟಿ, ಡ್ಯಾನ್ಸರ್‌ ಧನಶ್ರೀ ವರ್ಮಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದ್ದು, ಪರಸ್ಪರ ವಿಚ್ಛೇದನ ಪಡೆಯಲಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಇವರಿಬ್ಬರೂ 2020ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಆದರೆ ಕಳೆದೊಂದು ವರ್ಷದಿಂದ ಇಬ್ಬರ ದಾಂಪತ್ಯದಲ್ಲಿ ಬಿರುಕು ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ಕೆಲ ದಿನಗಳಿಂದ ಚಹಲ್‌ ಸಾಮಾಜಿಕ ತಾಣಗಳಲ್ಲಿ ನಿಗೂಢ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದು, ವಿಚ್ಛೇದನ ಸುದ್ದಿಗೆ ಮತ್ತಷ್ಟು ಪುಷ್ಠಿ ನೀಡಿದೆ.

 

click me!