IPL 2022: ಸದ್ಯದ ಮಟ್ಟಿಗೆ ಈತನೇ ಬೆಸ್ಟ್ ಕ್ಯಾಪ್ಟನ್ ಎಂದ ಆಸೀಸ್ ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್..!

Published : Apr 22, 2022, 10:54 PM IST
IPL 2022: ಸದ್ಯದ ಮಟ್ಟಿಗೆ ಈತನೇ ಬೆಸ್ಟ್ ಕ್ಯಾಪ್ಟನ್ ಎಂದ ಆಸೀಸ್ ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್..!

ಸಾರಾಂಶ

* 15ನೇ ಆವೃತ್ತಿಯ ಐಪಿಎಲ್‌ನಲ್ಲಿ ಮಿಂಚಿನ ಪ್ರದರ್ಶನ ತೋರುತ್ತಿರುವ ಹಾರ್ದಿಕ್‌ ಪಾಂಡ್ಯ * ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಗುಜರಾತ್ ಟೈಟಾನ್ಸ್ * ಪಾಂಡ್ಯ ಭವಿಷ್ಯದ ಟೀಂ ಇಂಡಿಯಾ ನಾಯಕರಾಗಬಹುದು ಎಂದ ಆಸೀಸ್ ಮಾಜಿ ಕ್ರಿಕೆಟಿಗ

ಬೆಂಗಳೂರು(ಏ.22): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿನ (Indian Premier League) ಸದ್ಯದ ತಂಡಗಳ ಪ್ರದರ್ಶನವನ್ನು ಗಮನಿಸಿದರೆ, ಹಾರ್ದಿಕ್ ಪಾಂಡ್ಯ ಟೂರ್ನಿಯಲ್ಲಿ ಅತ್ಯುತ್ತಮ ನಾಯಕನಾಗಿ ಹೊರಹೊಮ್ಮಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್ (Brad Hogg) ಅಭಿಪ್ರಾಯಪಟ್ಟಿದ್ದಾರೆ. ಹಾರ್ದಿಕ್ ಪಾಂಡ್ಯ (Hardik Pandya) ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಐಪಿಎಲ್‌ನ 33ನೇ ಪಂದ್ಯ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮೊದಲ ಪಂದ್ಯದಲ್ಲೇ ಲಖನೌ ಸೂಪರ್‌ ಜೈಂಟ್ಸ್ (Lucknow Super Giants) ಎದುರು ಗುಜರಾತ್ ಟೈಟಾನ್ಸ್ ತಂಡವು ರೋಚಕ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಇನ್ನು ಕಳೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲೂ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಎದುರು ಗುಜರಾತ್ ಟೈಟಾನ್ಸ್ ತಂಡವು 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತ್ತು.

ಇದೀಗ ಹಾರ್ದಿಕ್ ಪಾಂಡ್ಯ ನಾಯಕತ್ವದ ಕೌಶಲ್ಯದ ಬಗ್ಗೆ ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಬ್ರಾಡ್ ಹಾಗ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂಬರುವ ದಿನಗಳಲ್ಲಿ ಭಾರತ ಸೀಮಿತ ಓವರ್‌ಗಳ ತಂಡವನ್ನು ಮುನ್ನಡೆಸುವ ಸಾಮರ್ಥ್ಯ ಪಾಂಡ್ಯ ಅವರಲ್ಲಿದೆ ಎಂದು ಯೂಟೂಬ್‌ ಚಾನೆಲ್‌ನಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ನಿಮ್ಮ ತಂಡದಲ್ಲಿ ಬಲಿಷ್ಠ ಬೌಲಿಂಗ್ ಪಡೆ ಹೊಂದಿದ್ದರೆ, ತಂಡ ಮತ್ತಷ್ಟು ಸಮತೋಲನದಿಂದ ಕೂಡಿರಲಿದೆ. ಗುಜರಾತ್ ಟೈಟಾನ್ಸ್ (Gujarat Titans) ತಂಡವನ್ನು ಹಾರ್ದಿಕ್ ಪಾಂಡ್ಯ ಇಲ್ಲಿಯವರೆಗೆ ಅತ್ಯುತ್ತಮವಾಗಿ ಮುನ್ನಡೆಸಿದ್ದಾರೆ. ಸದ್ಯದ ಮಟ್ಟಿಗೆ ಹೇಳುವುದಾದರೇ ಪ್ರಸಕ್ತ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಉತ್ತಮ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಬ್ರಾಡ್ ಹಾಗ್ ಹೇಳಿದ್ದಾರೆ.

ಇನ್ನು ಮುಂದಿನ ಎರಡು ವರ್ಷಗಳೊಳಗಾಗಿ ಹಾರ್ದಿಕ್ ಪಾಂಡ್ಯ ಭಾರತ ಸೀಮಿತ ಓವರ್‌ಗಳ ತಂಡದ ನಾಯಕನಾಗಿ (Indian Limited Over Cricket Captain) ಆಯ್ಕೆಯಾದರೂ ನಾನು ಅಚ್ಚರಿಪಡುವುದಿಲ್ಲ. ಅವರೊಬ್ಬ ಉತ್ತಮ ನಾಯಕ. ಒತ್ತಡದ ಸಂದರ್ಭದಲ್ಲೇ ಹಾರ್ದಿಕ್ ಪಾಂಡ್ಯ ಅವರಿಂದ ಅತ್ಯುತ್ತಮ ಪ್ರದರ್ಶನ ಮೂಡಿ ಬರುತ್ತದೆ ಎಂದು ಬ್ರಾಡ್ ಹಾಗ್ ಅಭಿಪ್ರಾಯಪಟ್ಟಿದ್ದಾರೆ. ಪ್ರಸಕ್ತ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ತಮ್ಮ ಆಲ್ರೌಂಡ್ ಪ್ರದರ್ಶನ ತೋರುವ ಮೂಲಕ ಗಮನ ಸೆಳೆದಿದ್ದಾರೆ. ಬ್ಯಾಟಿಂಗ್ ನಲ್ಲಿ ಗುಜರಾತ್ ತಂಡದ ಪರ ನಾಲ್ಕನೇ ಕ್ರಮಾಂಕದಲ್ಲಿ ಬಡ್ತಿ ಪಡೆದು ಕಣಕ್ಕಿಳಿಯುತ್ತಿದ್ದು, 5 ಪಂದ್ಯಗಳಿಂದ 228 ರನ್ ಬಾರಿಸಿದ್ದಾರೆ. ಇನ್ನು ಬೌಲಿಂಗ್‌ನಲ್ಲೂ ತಮ್ಮ ಕೋಟಾದ ಬೌಲಿಂಗ್ ಪೂರ್ತಿಗೊಳಿಸುತ್ತಿದ್ದು, ಈಗಾಗಲೇ 4 ವಿಕೆಟ್ ಪಡೆದಿದ್ದಾರೆ.

IPL 2022: ಹರಾಜಿನಲ್ಲಿ ಈ ಐವರು ಆಟಗಾರರನ್ನು ಖರೀದಿಸಿ ಕೈಸುಟ್ಟುಕೊಂಡ ಫ್ರಾಂಚೈಸಿಗಳು..!

ಗುಜರಾತ್ ಟೈಟಾನ್ಸ್ ತಂಡದ ನೂತನ ನಾಯಕ ಹಾರ್ದಿಕ್ ಪಾಂಡ್ಯ ಹೊಸ ಚೆಂಡಿನಲ್ಲಿ ಬೌಲಿಂಗ್ ಮಾಡುವ ಮೂಲಕ ಜವಾಬ್ದಾರಿಯುತ ಪ್ರದರ್ಶನ ತೋರುತ್ತಿದ್ದಾರೆ. ಚುಟುಕು ಕ್ರಿಕೆಟ್‌ನಲ್ಲಿ ಕೇವಲ 7.57ರ ಎಕಾನಮಿಯಲ್ಲಿ ರನ್‌ ನೀಡಿ 4 ವಿಕೆಟ್ ಕಬಳಿಸಿದ್ದಾರೆ. ಹೊಸ ಚೆಂಡಿನೊಂದಿಗೆ ಈ ಎಕಾನಮಿಯಲ್ಲಿ ಬೌಲಿಂಗ್ ಮಾಡುವುದು ಸುಲಭವಲ್ಲ ಎಂದು ಬ್ರಾಡ್ ಹಾಗ್ ಅಭಿಪ್ರಾಯಪಟ್ಟಿದ್ದಾರೆ.

ತಂಡಕ್ಕೆ ಅಗತ್ಯವಿದ್ದಾಗಲೆಲ್ಲಾ ಬಲಿಷ್ಠ ಎದುರಾಳಿ ಬ್ಯಾಟರ್‌ಗಳೆದುರು ಉತ್ತಮ ಪ್ರದರ್ಶನ ತೋರಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದಲ್ಲಿ ಮೊಹಮ್ಮದ್ ಶಮಿ, ಲಾಕಿ ಫರ್ಗ್ಯೂಸನ್, ಅಲ್ಜೆರಿ ಜೋಸೆಫ್ ಅವರಂತಹ ಬೌಲರ್‌ಗಳಿದ್ದರೂ ಸಹಾ, ಹಾರ್ದಿಕ್ ಪಾಂಡ್ಯ ಉತ್ತಮ ಬೌಲಿಂಗ್ ದಾಳಿ ನಡೆಸುವ ಮೂಲಕ ತಂಡಕ್ಕೆ ಆಸರೆಯಾಗುತ್ತಿದ್ದಾರೆ ಎಂದು ಬ್ರಾಡ್ ಹಾಗ್ ಅಭಿಪ್ರಾಯಪಟ್ಟಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?