3ನೇ ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ಟಿ20 ಕ್ರಿಕೆಟ್‌ನಲ್ಲಿ ಯಾರೂ ಮಾಡದ ದಾಖಲೆ ಬರೆದ ಶೋಯೆಬ್ ಮಲಿಕ್..!

By Naveen Kodase  |  First Published Jan 21, 2024, 2:10 PM IST

ಪಾಕಿಸ್ತಾನದ ಅನುಭವಿ ಆಲ್ರೌಂಡರ್ ಶೋಯೆಬ್ ಮಲಿಕ್ ಈಗಾಗಲೇ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಆದರೆ ಚುಟುಕು ಕ್ರಿಕೆಟ್ ಮಾದರಿಯಲ್ಲಿ ತಮ್ಮ ಆಟವನ್ನು ಮುಂದುವರೆಸಿದ್ದಾರೆ. ಮುಂಬರುವ ಜೂನ್ ತಿಂಗಳಿನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ ಶೋಯೆಬ್ ಮಲಿಕ್.


ಕರಾಚಿ(ಜ.21): ಪಾಕಿಸ್ತಾನ ಕ್ರಿಕೆಟ್ ತಂಡದ ಆಲ್ರೌಂಡರ್ ಶೋಯೆಬ್ ಮಲಿಕ್ ಕಳೆದೆರಡು ದಿನದಿಂದ ಸುದ್ದಿಯಲ್ಲಿದ್ದಾರೆ. ಭಾರತ ಟೆನಿಸ್ ತಾರೆ ಸಾನಿಯಾ ಮಿರ್ಜಾಗೆ ಕೈಕೊಟ್ಟು ಇದೀಗ ಪಾಕಿಸ್ತಾನದ ನಟಿ ಸನಾ ಜಾವೆದ್ ಕೈ ಹಿಡಿದಿದ್ದಾರೆ. ಮೈದಾನದಾಚೆಗಿನ ಈ ಸುದ್ದಿ ಶನಿವಾರದಿಂದ ಸೋಷಿಯಲ್ ಮೀಡಿಯಾದಲ್ಲಿ ಸಂಚಲನವನ್ನೇ ಹುಟ್ಟುಹಾಕಿದೆ. ಆದರೆ ಮದುವೆಯಾಗಿ ಕೆಲವೇ ಗಂಟೆಗಳ ಅಂತರದಲ್ಲಿ ಶೋಯೆಬ್ ಮಲಿಕ್ ಟಿ20 ಕ್ರಿಕೆಟ್‌ನಲ್ಲಿ ಏಷ್ಯಾದಲ್ಲೇ ಯಾರೂ ಮಾಡದ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

ಹೌದು, 41 ವರ್ಷದ ಶೋಯೆಬ್ ಮಲಿಕ್, ಇದೀಗ ಟಿ20 ಕ್ರಿಕೆಟ್ ಮಾದರಿಯಲ್ಲಿ 13,000 ರನ್ ಬಾರಿಸಿದ ಏಷ್ಯಾದ ಮೊದಲ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಶೋಯೆಬ್ ಮಲಿಕ್, ರಂಗ್‌ಪುರ್ ರೈಡರ್ಸ್ ಪರ ಕಣಕ್ಕಿಳಿದ ಮಲಿಕ್, ಫಾರ್ಚೂನ್ ಬರಿಶಾಲ್ ಎದುರಿನ ಪಂದ್ಯದ ವೇಳೆ ಟಿ20 ಕ್ರಿಕೆಟ್‌ನಲ್ಲಿ 13 ಸಾವಿರ ರನ್ ಗಡಿ ದಾಟಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಮಾದರಿಯಲ್ಲಿ 13 ಸಾವಿರ + ರನ್ ಬಾರಿಸಿದ ಏಷ್ಯಾದ ಮೊದಲ ಹಾಗೂ ಜಗತ್ತಿನ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈಗಾಗಲೇ ಯೂನಿವರ್ಸೆಲ್ ಬಾಸ್ ಖ್ಯಾತಿಯ ಕ್ರಿಸ್‌ ಗೇಲ್ 13 ಸಾವಿರಕ್ಕೂ ಅಧಿಕ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ.

Tap to resize

Latest Videos

ಸಾನಿಯಾಗೆ ಮಲಿಕ್ ಮದುವೆಯಾಗಲು ಸ್ವಲ್ಪವೂ ಇಷ್ಟವಿರಲಿಲ್ಲ, ಆದ್ರೂ ಪಾಕ್ ಕ್ರಿಕೆಟಿಗನ ಬಲೆಗೆ ಬಿದ್ದಿದ್ದು ಹೇಗೆ?

ಪಾಕಿಸ್ತಾನದ ಅನುಭವಿ ಆಲ್ರೌಂಡರ್ ಶೋಯೆಬ್ ಮಲಿಕ್ ಈಗಾಗಲೇ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಆದರೆ ಚುಟುಕು ಕ್ರಿಕೆಟ್ ಮಾದರಿಯಲ್ಲಿ ತಮ್ಮ ಆಟವನ್ನು ಮುಂದುವರೆಸಿದ್ದಾರೆ. ಮುಂಬರುವ ಜೂನ್ ತಿಂಗಳಿನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ ಶೋಯೆಬ್ ಮಲಿಕ್.

ಜನವರಿ 20ರ ಶನಿವಾರ ಶೋಯೆಬ್ ಮಲಿಕ್, ಪ್ರೇಯಸಿ ಹಾಗೂ ಪಾಕಿಸ್ತಾನದ ಪ್ರಖ್ಯಾತ ನಟಿ ಸನಾ ಜಾವೆದ್ ಅವರನ್ನು ಮದುವೆಯಾಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಇಡೀ ಕ್ರಿಕೆಟ್ ಜಗತ್ತಿಗೆ ಶಾಕ್ ನೀಡಿದ್ದರು. ಕಳೆದೊಂದು ವರ್ಷದಿಂದ ಡೇಟಿಂಗ್ ಮಾಡುತ್ತಿದ್ದ ಈ ಜೋಡಿ ಕೊನೆಗೂ ಒಂದಾಗಿದ್ದಾರೆ.

ಸಾನಿಯಾಗೆ ಕೈಕೊಟ್ಟ ಶೋಯೆಬ್...! ನಾನು ಹೀಗಾಗುತ್ತೆ ಅಂತ ಮೊದಲೇ ಹೇಳಿದ್ದೇ ಅಂದ PK ಸ್ವಾಮೀಜಿ..! ಮೀಮ್ಸ್‌ಗಳು ವೈರಲ್

ಇನ್ನು ಕೆಲವೇ ದಿನಗಳ ಹಿಂದಷ್ಟೇ ಇನ್‌ಸ್ಟಾಗ್ರಾಂನಲ್ಲಿ ಸಾನಿಯಾ ಮಿರ್ಜಾ ಅವರನ್ನು ಅನ್‌ಫಾಲೋ ಮಾಡಿದ್ದ ಶೋಯೆಬ್ ಮಲಿಕ್, ಇದೀಗ ಮೂಗುತಿ ಸುಂದರಿ ಸಾನಿಯಾ ಅವರಿಂದ ಶಾಶ್ವತವಾಗಿ ದೂರವಾಗಿದ್ದಾರೆ. ಸಾನಿಯಾ ಹಾಗೂ ಶೋಯೆಬ್‌ಗೆ 5 ವರ್ಷದ ಇಜಾನ್ ಮಿರ್ಜಾ ಮಲಿಕ್ ಎನ್ನುವ ಮಗ ಕೂಡಾ ಇದ್ದಾನೆ. ಸದ್ಯ ಇಜಾನ್, ಸಾನಿಯಾ ಜತೆ ಇದ್ದಾನೆ.

ಹೈದರಾಬಾದ್ ಮೂಲದ ಸಾನಿಯಾ ಮಿರ್ಜಾ ಹಾಗೂ ಶೋಯೆಬ್ ಮಲಿಕ್ 2010ರ ಏಪ್ರಿಲ್‌ನಲ್ಲಿ ಮದುವೆಯಾಗಿದ್ದರು. ಇಬ್ಬರು ದುಬೈನಲ್ಲಿ ವಾಸವಾಗಿದ್ದರು. ಕಳೆದೊಂದು ವರ್ಷದಿಂದಲೂ ಈ ತಾರಾ ಜೋಡಿಯ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು.

click me!