
ಸಿಡ್ನಿ(ಜ.05): ಭಾರತ ತಂಡ 4ನೇ ಟೆಸ್ಟ್ ಪಂದ್ಯವನ್ನು ಬ್ರಿಸ್ಬೇನ್‌ನಿಂದ ಸ್ಥಳಾಂತರಿಸುವಂತೆ ಕೇಳಿಲ್ಲ, ಪಂದ್ಯ ಬ್ರಿಸ್ಬೇನ್‌ನಲ್ಲೇ ನಡೆಯಲಿದೆ ಎಂದು ಕ್ರಿಕೆಟ್ ಆಸ್ಪ್ರೇಲಿಯಾದ ಪ್ರಧಾನ ವ್ಯವಸ್ಥಾಪಕ ನಿಕ್ ಹಾಕ್ಲೆ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಭಾರತ ತಂಡ ಬ್ರಿಸ್ಬೇನ್‌ನಲ್ಲಿ ಕ್ವಾರಂಟೈನ್‌ನಲ್ಲಿರಲು ಒಪ್ಪುತ್ತಿಲ್ಲ ಎಂದು ಆಸ್ಪ್ರೇಲಿಯಾದ ಮಾಧ್ಯಮಗಳು ವರದಿ ಮಾಡಿದ್ದವು. ಈ ಬಗ್ಗೆ ಸ್ಪಷ್ಟಪಡಿಸಿರುವ ಹಾಕ್ಲೆ, ‘ಬಿಸಿಸಿಐನೊಂದಿಗೆ ನಾವು ಪ್ರತಿ ನಿತ್ಯ ಮಾತುಕತೆ ನಡೆಸುತ್ತಿದ್ದೇವೆ. ನಿಗದಿತ ವೇಳಾಪಟ್ಟಿಯಂತೆ ಪಂದ್ಯಗಳನ್ನಾಡಲು ಎರಡೂ ತಂಡಗಳು ಒಪ್ಪಿವೆ’ ಎಂದು ಹಾಕ್ಲೆ ಹೇಳಿದ್ದಾರೆ.
ಟೀಂ ಇಂಡಿಯಾಗೆ ಮತ್ತೊಂದು ಶಾಕ್: ಟೆಸ್ಟ್ ಸರಣಿಯಿಂದ ಹೊರಬಿದ್ದ ರಾಹುಲ್
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಮುಕ್ತಾಯವಾಗಿದ್ದು ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ತಲಾ ಒಂದೊಂದು ಪಂದ್ಯವನ್ನು ಜಯಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ. ಮೂರನೇ ಟೆಸ್ಟ್ ಪಂದ್ಯಕ್ಕೆ ಸಿಡ್ನಿ ಆತಿಥ್ಯವನ್ನು ವಹಿಸಿದ್ದು, ಜನವರಿ 07ರಿಂದ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಇನ್ನು ನಾಲ್ಕನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಾಬಾ ಮೈದಾನ ಆತಿಥ್ಯ ವಹಿಸಿದೆ. ಕೊನೆಯ ಎರಡು ಪಂದ್ಯಗಳಲ್ಲಿ ಉಭಯ ತಂಡಗಳ ನಡುವಿನ ಕಾದಾಟ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.