
ಮುಂಬೈ(ಮಾ.04): ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕನ್ನಡಿಗ ಸುನಿಲ್ ಜೋಶಿ ಹೆಸರು ಅಂತಿಮಗೊಂಡಿದೆ. ಕ್ರಿಕೆಟ್ ಸಲಹಾ ಸಮಿತಿ(CAC) ಸುನಿಲ್ ಜೋಶಿ ಹೆಸರನ್ನು ಅಂತಿಮಗೊಳಿಸಿ ಬಿಸಿಸಿಐಗೆ ಶಿಫಾರಸು ಮಾಡಿದೆ.
ಇದನ್ನೂ ಓದಿ: ಭಾರತಕ್ಕೆ ಬಂದಾಗ ನಿಮ್ಮನ್ನು ನೋಡ್ಕೊತೀನಿ ಎಂದ ವಿರಾಟ್ ಕೊಹ್ಲಿ!
ಇಂದು(ಮಾ.04) ನಡೆದ ಸಂದರ್ಶದಲ್ಲಿ ಕ್ರಿಕೆಟ್ ಸಲಹಾ ಸಮಿತಿ, ಕನ್ನಡಿಗ ಸುನಿಲ್ ಜೋಶಿ, ವೆಂಕಟೇಶ್ ಪ್ರಸಾದ್, ಎಲ್ ಶಿವರಾಮಕೃಷ್ಣನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಒಟ್ಟು 44 ಮಾಜಿ ಹಾಗೂ ದಿಗ್ಗಜ ಕ್ರಿಕೆಟಿಗರು ಅರ್ಜಿ ಸಲ್ಲಿಸಿದ್ದರು. ಇದರಲ್ಲಿ ಸುನಿಲ್ ಜೋಶಿ ಹೆಸರನ್ನು CAC ಅಂತಿಮಗೊಳಿಸಿದೆ.
1997ರಿಂದ 2001ರ ವರೆಗೆ ಟೀಂ ಇಂಡಿಯಾ ಪರ ಆಡಿದ್ದ ಹರ್ವಿಂದರ್ ಸಿಂಗ್ ಆಯ್ಕೆ ಸಮಿತಿ ಸದಸ್ಯ ಸ್ಥಾನಕ್ಕೆ ಕ್ರಿಕೆಟ್ ಸಲಹಾ ಸಮಿತಿ ಅಂತಿಮಗೊಳಿಸಿದೆ. CAC ಅಂತಿಮ ಪಟ್ಟಿಯನ್ನು ಬಿಸಿಸಿಐಗೆ ರವಾನಿಸಿದೆ. ಇದೀಗ ಬಿಸಿಸಿಐ ಶೀಘ್ರದಲ್ಲೇ ಅಧೀಕೃತ ಪ್ರಕಟಣೆ ಹೊರಡಿಸಲಿದೆ.
"
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.