ಏಕದಿನ ಸರಣಿ ಸೋಲಿನ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದ ಕೊಹ್ಲಿ..!

By Suvarna News  |  First Published Feb 8, 2020, 6:31 PM IST

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಏಕದಿನ ಸರಣಿ ಸೋಲಿನ ಬಗ್ಗೆ ತುಟಿಬಿಚ್ಚಿದ್ದಾರೆ. ಅಲ್ಲದೇ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಅಷ್ಟಕ್ಕೂ ಕೊಹ್ಲಿ ಏನಂದ್ರು, ನೀವೇ ನೋಡಿ...


ಆಕ್ಲೆಂಡ್(ಫೆ.08): ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ವೈಟ್‌ವಾಷ್ ಮಾಡಿ ಬೀಗುತ್ತಿದ್ದ ಭಾರತ ತಂಡಕ್ಕೆ ಮುಖಭಂಗ ಎದುರಾಗಿದೆ. 3 ಪಂದ್ಯಗಳ ಏಕದಿನ ಸರಣಿಯಲ್ಲಿ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಕಿವೀಸ್ ತಂಡ ಸರಣಿ ಕೈವಶ ಮಾಡಿಕೊಂಡಿದೆ. ರವೀಂದ್ರ ಜಡೇಜಾ, ನವದೀಪ್ ಸೈನಿ ಹಾಗೂ ಶ್ರೇಯಸ್ ಅಯ್ಯರ್ ಕೆಚ್ಚೆದೆಯ ಹೋರಾಟದ ಹೊರತಾಗಿಯೂ ಟೀಂ ಇಂಡಿಯಾ 22 ರನ್‌ಗಳಿಂದ ನ್ಯೂಜಿಲೆಂಡ್‌ಗೆ ಶರಣಾಗಿದೆ. 

ಮೈದಾನಕ್ಕಿಳಿದ ನ್ಯೂಜಿಲೆಂಡ್ ಫೀಲ್ಡಿಂಗ್ ಕೋಚ್..!

Latest Videos

273 ರನ್‌ಗಳ ಗುರಿ ಪಡೆದ ಭಾರತ ಆರಂಭಿಕ ಆಘಾತದಿಂದ ಕಂಗೆಟ್ಟಿತು. ನ್ಯೂಜಿಲೆಂಡ್ ತಂಡದ ಶಿಸ್ತುಬದ್ಧ ದಾಳಿಗೆ ತತ್ತರಿಸಿದ ಭಾರತ ಕೇವಲ 251 ರನ್‌ಗಳಿಗೆ ಸರ್ವಪತನ ಕಂಡಿತು. ಇದರೊಂದಿಗೆ ನ್ಯೂಜಿಲೆಂಡ್ ತಂಡವು 2014ರ ಬಳಿಕ ಮೊದಲ ಬಾರಿಗೆ ಭಾರತ ವಿರುದ್ಧ ಏಕದಿನ ಸರಣಿ ಜಯಿಸಿದ ಸಾಧನೆ ಮಾಡಿದೆ. 

ಸೋಲಿನ ಬಳಿಕ ಮಾತನಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕ್ಯಾಲೆಂಡರ್ ವರ್ಷದಲ್ಲಿ ಟೆಸ್ಟ್ ಹಾಗೂ ಟಿ20 ಪಂದ್ಯಗಳಿಗೆ ಹೋಲಿಸಿದರೆ ಏಕದಿನ ಕ್ರಿಕೆಟ್ ಫಲಿತಾಂಶ ಅಷ್ಟೇನು ಸಮಯೋಚಿತವಲ್ಲ ಎಂದಿದ್ದಾರೆ. ಏಕದಿನ ಕ್ರಿಕೆಟ್ ಸರಣಿ ಸೋಲಿನ ಬಗ್ಗೆ ಅಷ್ಟೇನು ತಲೆಕೆಡಿಸಿಕೊಳ್ಳುವುದಿಲ್ಲ ಎಂಬರ್ಥದಲ್ಲಿ ಮಾತನಾಡಿದ ಅವರು, ಒತ್ತಡದ ಪರಿಸ್ಥಿತಿಯಲ್ಲೂ ಕೆಲ ಆಟಗಾರರು ದಿಟ್ಟ ಪ್ರದರ್ಶನ ತೋರಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ ಎಂದು ಕೊಹ್ಲಿ ಹೇಳಿದ್ದಾರೆ.

ಸೈನಿ-ಜಡೇಜಾ ಹೋರಾಟ, ದಡ ಸೇರಲಿಲ್ಲ ಭಾರತ; ನ್ಯೂಜಿಲೆಂಡ್‌ಗೆ ಏಕದಿನ ಕಿರೀಟ!

ಇನ್ನು ಫೆಬ್ರವರಿ 11ರಂದು ಬೇ ಓವಲ್ ಮೈದಾನದಲ್ಲಿ ನಡೆಯಲಿರುವ ಕೊನೆಯ ಏಕದಿನ ಪಂದ್ಯದಲ್ಲಿ ನಾಯಕ ಕೊಹ್ಲಿ ಕೆಲ ಬದಲಾವಣೆ ಮಾಡುವ ಮುನ್ಸೂಚನೆ ನೀಡಿದ್ದಾರೆ. ಕೊನೆಯ ಪಂದ್ಯದಲ್ಲಿ ಕೆಲವು ಬದಲಾವಣೆ ಮಾಡಲು ಯೋಚಿಸುತ್ತಿದ್ದೇನೆ. ಈಗ ನಾವೇನು ಕಳೆದುಕೊಳ್ಳುವಂತದ್ದು ಏನೂ ಇಲ್ಲ. ಫಲಿತಾಂಶದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
 

click me!