ಗೆಲ್ಲಲು ಕೇವಲ 138 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಸಿಎಸ್‌ಕೆ ತಂಡವು ಆರಂಭದಲ್ಲೇ ರಚಿನ್ ರವೀಂದ್ರ(15) ವಿಕೆಟ್ ಕಳೆದುಕೊಂಡಿತು. ಆದರೆ ಎರಡನೇ ವಿಕೆಟ್‌ಗೆ ನಾಯಕ ಋತುರಾಜ್ ಗಾಯಕ್ವಾಡ್ ಹಾಗೂ ಡೇರಲ್ ಮಿಚೆಲ್ 70 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಮಿಚೆಲ್ 25 ರನ್ ಬಾರಿಸಿ ಸುನಿಲ್ ನರೈನ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.
ಚೆನ್ನೈ(ಏ.08): ಸತತ ಎರಡು ಪಂದ್ಯಗಳಲ್ಲಿ ಸೋಲಿನ ಶಾಕ್ ಅನುಭವಿಸಿದ್ದ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ. ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ ಮಿಂಚಿನ ಬೌಲಿಂಗ್ ಹಾಗೂ ನಾಯಕ ಋತುರಾಜ್ ಗಾಯಕ್ವಾಡ್ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ ಎದುರು ಚೆನ್ನೈ ಸೂಪರ್ ಕಿಂಗ್ಸ್ 14 ಎಸೆತ ಬಾಕಿ ಇರುವಂತೆಯೇ 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಕೆಕೆಆರ್ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ.
ಗೆಲ್ಲಲು ಕೇವಲ 138 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಸಿಎಸ್‌ಕೆ ತಂಡವು ಆರಂಭದಲ್ಲೇ ರಚಿನ್ ರವೀಂದ್ರ(15) ವಿಕೆಟ್ ಕಳೆದುಕೊಂಡಿತು. ಆದರೆ ಎರಡನೇ ವಿಕೆಟ್‌ಗೆ ನಾಯಕ ಋತುರಾಜ್ ಗಾಯಕ್ವಾಡ್ ಹಾಗೂ ಡೇರಲ್ ಮಿಚೆಲ್ 70 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಮಿಚೆಲ್ 25 ರನ್ ಬಾರಿಸಿ ಸುನಿಲ್ ನರೈನ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.
IPL 2024: ಕೆಕೆಆರ್ ಬ್ಯಾಟಿಂಗ್‌ಗೆ ಕಡಿವಾಣ ಹಾಕಿದ ಚೆನ್ನೈ ಸೂಪರ್ ಕಿಂಗ್ಸ್
ನಾಯಕನಾಟವಾಡಿದ ಗಾಯಕ್ವಾಡ್: ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದ ಸಿಎಸ್‌ಕೆಗೆ ನಾಯಕನ ಮೇಲೆ ಸಾಕಷ್ಟು ಒತ್ತಡವಿತ್ತು. ಇದನ್ನು ಮೆಟ್ಟಿನಿಂತು ದಿಟ್ಟ ಬ್ಯಾಟಿಂಗ್ ನಡೆಸಿದ ಗಾಯಕ್ವಾಡ್ ಕೇವಲ 58 ಎಸೆತಗಳನ್ನು ಎದುರಿಸಿ ಅಜೇಯ 67 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಗಾಯಕ್ವಾಡ್‌ಗೆ ಉತ್ತಮ ಸಾಥ್ ನೀಡಿದ ಶಿವಂ ದುಬೆ ಕೇವಲ 18 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 28 ರನ್ ಬಾರಿಸಿ ಕೊನೆಯಲ್ಲಿ ವಿಕೆಟ್ ಒಪ್ಪಿಸಿದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಸಿಎಸ್‌ಕೆ ಸಂಘಟಿತ ಬೌಲಿಂಗ್ ಎದುರು ತತ್ತರಿಸಿ ಹೋಯಿತು. ಮೊದಲ ಓವರ್‌ನ ಮೊದಲ ಎಸೆತದಲ್ಲೇ ತುಷಾರ್ ದೇಶಪಾಂಡೆ ಕೆಕೆಆರ್ ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್ ಬಲಿ ಪಡೆದರು. ಇನ್ನು ಕಳೆದೆರಡು ಪಂದ್ಯಗಳಲ್ಲಿ ಅಬ್ಬರಿಸಿದ್ದ ಸುನಿಲ್ ನರೈನ್ 27 ರನ್ ಸಿಡಿಸಿದರೆ, ರಘುವಂಶಿ 24 ಹಾಗೂ ನಾಯಕ ಶ್ರೇಯಸ್ ಅಯ್ಯರ್ 34 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
RCB ಸೋಲಿಗೆ ವಿರಾಟ್ ಕೊಹ್ಲಿ ಕಾರಣನಾ..? ಟ್ರೋಲ್ ಮಾಡೋ ಮುನ್ನ ಇಲ್ಲೊಮ್ಮೆ ನೋಡಿ
ಇನ್ನು ವೆಂಕಟೇಶ್ ಅಯ್ಯರ್(3), ರಿಂಕು ಸಿಂಗ್(9), ರಮಣ್‌ದೀಪ್ ಸಿಂಗ್(13) ಹಾಗೂ ಆಂಡ್ರೆ ರಸೆಲ್(10) ಅಲ್ಪಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದು ಕೆಕೆಆರ್ ಪಾಲಿಗೆ ಹಿನ್ನಡೆಯಾಗಿ ಪರಿಣಮಿಸಿತು.
ಚೆನ್ನೈ ಸೂಪರ್ ಕಿಂಗ್ಸ್ ಪರ ತುಷಾರ್ ದೇಶ್‌ಪಾಂಡೆ 33 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ರವೀಂದ್ರ ಜಡೇಜಾ 18 ರನ್ ನೀಡಿ 3 ಬಲಿ ಪಡೆದರು. ಇನ್ನು ಮುಸ್ತಾಫಿಜುರ್ ರೆಹಮಾನ್ 2 ಮತ್ತು ಮಹೀಶ್ ತೀಕ್ಷಣ ತಲಾ ಒಂದು ವಿಕೆಟ್ ಪಡೆದರು.