ಗೆಲ್ಲಲು ಕೇವಲ 142 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ಎಚ್ಚರಿಕೆಯ ಆರಂಭವನ್ನೇ ಪಡೆಯಿತು. ರಚಿನ್ ರವೀಂದ್ರ 18 ಎಸೆತಗಳಲ್ಲಿ 27 ರನ್ ಬಾರಿಸಿ ಅಶ್ವಿನ್‌ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ನಾಯಕ ಋತುರಾಜ್ ಗಾಯಕ್ವಾಡ್ ಹಾಗೂ ಡೇರಲ್ ಮಿಚೆಲ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಮಿಚೆಲ್ ಕೇವಲ 13 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 22 ರನ್ ಬಾರಿಸಿ ಚಹಲ್ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು.
ಚೆನ್ನೈ(ಮೇ.12): ಬೌಲರ್‌ಗಳ ಸಂಘಟಿತ ಪ್ರದರ್ಶನ ಹಾಗೂ ನಾಯಕ ಋತುರಾಜ್ ಗಾಯಕ್ವಾಡ್ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ ರಾಯಲ್ಸ್ ಎದುರು ಚೆನ್ನೈ ಸೈಪರ್ ಕಿಂಗ್ಸ್ ತಂಡವು 5 ವಿಕೆಟ್ ಭರ್ಜರಿ ಜಯ ಸಾಧಿಸಿದೆ. 142 ರನ್ ಗುರಿ ಬೆನ್ನತ್ತಿದ ಚೆನ್ನೈ 10 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿದೆ. ಈ ಮೂಲಕ ಪ್ಲೇ ಆಫ್‌ಗೆ ಮತ್ತಷ್ಟು ಹತ್ತಿರವಾಗಿದೆ
ಗೆಲ್ಲಲು ಕೇವಲ 142 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ಎಚ್ಚರಿಕೆಯ ಆರಂಭವನ್ನೇ ಪಡೆಯಿತು. ರಚಿನ್ ರವೀಂದ್ರ 18 ಎಸೆತಗಳಲ್ಲಿ 27 ರನ್ ಬಾರಿಸಿ ಅಶ್ವಿನ್‌ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ನಾಯಕ ಋತುರಾಜ್ ಗಾಯಕ್ವಾಡ್ ಹಾಗೂ ಡೇರಲ್ ಮಿಚೆಲ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಮಿಚೆಲ್ ಕೇವಲ 13 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 22 ರನ್ ಬಾರಿಸಿ ಚಹಲ್ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು.
Significant win for the men in yellow 💛
That moves the to 3️⃣rd in the Points Table 🙌
Scorecard ▶️ https://t.co/1JsX9W2grC | pic.twitter.com/LkpwyKjEl9
undefined
ಇನ್ನು ಮೋಯಿನ್ ಅಲಿ 10 ರನ್ ಬಾರಿಸಿ ಪೆವಿಲಿಯನ್‌ಗೆ ವಾಪಾಸ್ಸಾದರೇ, ಶಿವಂ ದುಬೆ 18 ರನ್ ಗಳಿಸಿ ಅಶ್ವಿನ್‌ಗೆ ವಿಕೆಟ್ ಒಪ್ಪಿಸಿದರು. ಜಡೇಜಾ ಕೇವಲ 5 ರನ್ ಗಳಿಸಿ ವಿವಾದಾತ್ಮಕ ರೀತಿಯಲ್ಲಿ ರನೌಟ್ ಆಗಿ ಪೆವಿಲಿಯನ್ ಸೇರಿದರು.
ಬೆಂಗಳೂರಿನಲ್ಲಿ ಟಾಸ್ ಗೆದ್ದ ಡೆಲ್ಲಿ, ಪ್ಲೇ ಅಫ್ ಆಸೆ ಜೀವಂತವಾಗಿರಿಸಲು ಸಜ್ಜಾದ ಆರ್‌ಸಿಬಿ!
ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ನಾಯಕನಾಗಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಋತುರಾಜ್ ಗಾಯಕ್ವಾಡ್ 41 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 42 ರನ್ ಬಾರಿಸಿದರು. ಇನ್ನು ಸಮೀರ್ ರಿಜ್ವಿ ಅಜೇಯ 15 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಇನ್ನು ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ ರಾಯಲ್ಸ್ ನಿಧಾನಗತಿಯಲ್ಲಿ ರನ್ ಗಳಿಸಿತು. ಮೊದಲ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ 6.2 ಓವರ್‌ಗಳಲ್ಲಿ 43 ರನ್‌ಗಳ ಜತೆಯಾಟವಾಡಿದರು. ಜೈಸ್ವಾಲ್ 24 ರನ್ ಗಳಿಸಿದರೆ, ಬಟ್ಲರ್ 21 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ನಾಯಕ ಸಂಜು ಸ್ಯಾಮ್ಸನ್ 19 ಎಸೆತಗಳನ್ನು ಎದುರಿಸಿ 15 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಏನೋ ವಿಶೇಷತೆ ನಿಮಗಾಗಿ ಕಾದಿದೆ, ಮ್ಯಾಚ್ ಮುಗಿದ ಮೇಲೆ ಮೈದಾನದಲ್ಲೇ ಇರಿ: ಚೆನ್ನೈ ಫ್ರಾಂಚೈಸಿ ಮಾತಿನ ಮರ್ಮವೇನು?
ಇನ್ನು ರಿಯಾನ್ ಪರಾಗ್ 35 ಎಸೆತಗಳನ್ನು ಎದುರಿಸಿ ಅಜೇಯ 47 ರನ್ ಬಾರಿಸಿದರೆ, ಧೃವ್ ಜುರೆಲ್ 18 ಎಸೆತಗಳಲ್ಲಿ 28 ರನ್ ಬಾರಿಸಿ ತುಷಾರ್ ದೇಶಪಾಂಡೆಗೆ ವಿಕೆಟ್ ಒಪ್ಪಿಸಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ಶಿಸ್ತುಬದ್ದ ದಾಳಿ ನಡೆಸಿದ ಸಿಮ್ರನ್‌ಜೀತ್ ಸಿಂಗ್ 26 ರನ್ ನೀಡಿ 3 ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ 2 ವಿಕೆಟ್ ಕಬಳಿಸಿದರು.