ಚೆನ್ನೈ ಟೆಸ್ಟ್: ಅಶ್ವಿನ್ ಶತಕ, ಸವಾಲಿನ ಮೊತ್ತ ಕಲೆಹಾಕಿ ಭಾರತ ಆಲೌಟ್

By Naveen Kodase  |  First Published Sep 20, 2024, 11:04 AM IST

ಬಾಂಗ್ಲಾದೇಶ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ 376 ರನ್‌ಗಳಿಗೆ ಮೊದಲ ಇನಿಂಗ್ಸ್‌ನಲ್ಲಿ ಆಲೌಟ್ ಆಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ


ಚೆನ್ನೈ: ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಪಲ್ಯದ ಹೊರತಾಗಿಯೂ ರವಿಚಂದ್ರನ್ ಅಶ್ವಿನ್ ಆಕರ್ಷಕ ಶತಕ ಹಾಗೂ ರವೀಂದ್ರ ಜಡೇಜಾ ಭರ್ಜರಿ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿದೆ. ಚೆನ್ನೈ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ಮೊದಲ ಇನಿಂಗ್ಸ್‌ನಲ್ಲಿ 376 ರನ್ ಗಳಿಸಿ ಸರ್ವಪತನ ಕಂಡಿದೆ. 

ಮೊದಲ ದಿನದಾಟದಂತ್ಯದ ವೇಳೆಗೆ 6 ವಿಕೆಟ್ ಕಳೆದುಕೊಂಡು 339 ರನ್ ಗಳಿಸಿದ್ದ ಟೀಂ ಇಂಡಿಯಾ, ಎರಡನೇ ದಿನದಾಟದಲ್ಲಿ ತನ್ನ ಖಾತೆಗೆ ಕೇವಲ 37 ರನ್ ಕಲೆಹಾಕಿ ಉಳಿದ 4 ವಿಕೆಟ್ ಕಳೆದುಕೊಂಡಿತು. ಮೊದಲ ದಿನದಾಟದಲ್ಲಿ ಒಂದು ಹಂತದಲ್ಲಿ 144 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿತ್ತು. ಆದರೆ 7ನೇ ವಿಕೆಟ್‌ಗೆ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಆಕರ್ಷಕ 199 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

Latest Videos

undefined

ಎಡಗೈ ಬ್ಯಾಟರ್ ರವೀಂದ್ರ ಜಡೇಜಾ 124 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 86 ರನ್ ಗಳಿಸಿ ಟಸ್ಕಿನ್ ಅಹಮದ್‌ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಭಾರತ ನಾಟಕೀಯ ಕುಸಿತ ಕಂಡಿತು. ಆಕಾಶ್ ದೀಪ್ 30 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 17 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ರವಿಚಂದ್ರನ್ ಅಶ್ವಿನ್ 133 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 113 ರನ್ ಗಳಿಸಿ ಟಸ್ಕಿನ್ ಅಹಮದ್‌ಗೆ ಮೂರನೇ ಬಲಿಯಾದರು. ಇನ್ನು ಬುಮ್ರಾ 7 ರನ್ ಗಳಿಸಿ ಹಸನ್ ಮಹಮೂದ್‌ಗೆ 5ನೇ ಬಲಿಯಾದರು.

ಹಸನ್ ಮೊಹಮೂದ್‌ಗೆ 5 ವಿಕೆಟ್ ಗೊಂಚಲು: ಪಾಕಿಸ್ತಾನ ಎದುರಿನ ಸರಣಿಯ ವೇಳೆಯಲ್ಲೂ 5+ ವಿಕೆಟ್ ಕಬಳಿಸಿ ಬಾಂಗ್ಲಾದೇಶ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ವೇಗಿ ಹಸನ್ ಮೊಹಮೂದ್, ಭಾರತ ಎದುರು 5 ವಿಕೆಟ್ ಗೊಂಚಲು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಹಸನ್ ಮೊಹಮೂದ್ 83 ರನ್ ನೀಡಿ 5 ವಿಕೆಟ್ ತಮ್ಮದಾಗಿಸಿಕೊಂಡರು.

click me!