ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಲಾರ್ಡ್ಸ್‌ನಿಂದ ಸ್ಥಳಾಂತರ?

Kannadaprabha News   | Asianet News
Published : Nov 21, 2020, 09:46 AM IST
ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಲಾರ್ಡ್ಸ್‌ನಿಂದ ಸ್ಥಳಾಂತರ?

ಸಾರಾಂಶ

ಹಲವು ಅಡೆತಡೆಗಳ ನಡುವೆ ನಡೆಯುತ್ತಿರುವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ಆತಿಥ್ಯದ ಮೇಲೆ ಇದೀಗ ಅನುಮಾನದ ತೂಗುಗತ್ತಿ ನೇತಾಡಲಾರಂಭಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ದುಬೈ(ನ.21): ಚೊಚ್ಚಲ ಆವೃತ್ತಿಯ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ಪಂದ್ಯ ಕ್ರಿಕೆಟ್‌ ಕಾಶಿ ಲಾರ್ಡ್ಸ್ ಕ್ರೀಡಾಂಗಣದಿಂದ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. 

ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಹಾಗೂ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ನಡುವಿನ ಹಣಕಾಸಿನ ಒಪ್ಪಂದದ ಸಮಸ್ಯೆಯೇ ಇದಕ್ಕೆ ಕಾರಣ ಎನ್ನಲಾಗಿದೆ. ಪಂದ್ಯ 2021ರ ಜೂ.10ರಿಂದ 14ರ ವರೆಗೂ ನಿಗದಿಯಾಗಿದೆ. ಈ ಬಗ್ಗೆ ಐಸಿಸಿ ಹಾಗೂ ಇಸಿಬಿ ಈ ಬಗ್ಗೆ ಚರ್ಚೆ ನಡೆಸುತ್ತಿದ್ದು, ಯಾವುದೇ ಸಕಾರಾತ್ಮಕ ಬೆಳವಣಿಗೆ ನಡೆಯುತ್ತಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ಪ್ರತಿಷ್ಠಿತ ಮಾಧ್ಯಮವೊಂದು ವರದಿ ಮಾಡಿದೆ. ಒಂದೊಮ್ಮೆ ಪಂದ್ಯ ಲಾರ್ಡ್ಸ್‌ನಿಂದ ಸ್ಥಳಾಂತರಗೊಂಡರೆ ಬೇರೆಲ್ಲಿ ನಡೆಸಬೇಕು ಎನ್ನುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎನ್ನಲಾಗಿದೆ.

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್: 2ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ..!

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಟೂರ್ನಿಗೆ ಈಗಾಗಲೇ ಹಲವು ಅಡ್ಡಿ-ಆತಂಕಗಳು ಎದುರಾಗಿವೆ. ಕೊರೋನಾ ಹೆಮ್ಮಾರಿಯ ಅಟ್ಟಹಾಸದಿಂದಾಗಿ ಹಲವು ದ್ವಿಪಕ್ಷೀಯ ಸರಣಿಗಳು ರದ್ದಾಗಿವೆ. ಇದರ ಬೆನ್ನಲ್ಲೇ ಐಸಿಸಿ ಅಂಕಪಟ್ಟಿಯ ಬದಲಾಗಿ ಪ್ರತಿಶತ ಅಂಕದ ಆಧಾರದಲ್ಲಿ ಮೊದಲೆರಡು ಸ್ಥಾನ ಗಳಿಸಿದ ತಂಡಗಳು ಫೈನಲ್‌ನಲ್ಲಿ ಕಾದಾಡಲಿವೆ ಎಂದು ಖಚಿತಪಡಿಸಿವೆ. ಸದ್ಯದ ಸ್ಥಿತಿಯಲ್ಲಿ ಅಂದರೆ ನವೆಂಬರ್ 21ರ ಅಂತ್ಯದ ವೇಳೆಗೆ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಮೊದಲೆರಡು ಸ್ಥಾನಗಳನ್ನು ಹಂಚಿಕೊಂಡಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆ್ಯಶಸ್ ಸರಣಿ: ಸತತ ಎರಡು ಪಂದ್ಯ ಗೆದ್ದು ಬೀಗಿದ್ದ ಆಸೀಸ್‌ಗೆ ಆಘಾತ, ಸ್ಟಾರ್ ಬೌಲರ್ ಹೊರಕ್ಕೆ!
ಮದ್ಯ ಮಾರಾಟಕ್ಕೆ ಇಳಿದ ಯುವರಾಜ್‌ ಸಿಂಗ್‌, ಒಂದು ತಿಂಗಳ ಸಂಬಳಕ್ಕೆ ಬರುತ್ತೆ ಒಂದು ಬಾಟಲ್‌!