
ಮುಂಬೈ(ಅ.16): ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೇರಲಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಸಚಿನ್ ತೆಂಡುಲ್ಕರ್, ವೀರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್, ಮೊಹಮ್ಮದ್ ಕೈಫ್, ಬ್ರಾಡ್ ಹಾಡ್ಜ್, ಮೊಹಮ್ಮದ್ ಶಮಿ ಸೇರಿದಂತೆ ಅನೇಕರು ಗಂಗೂಲಿಯನ್ನು ಅಭಿನಂದಿಸಿದ್ದಾರೆ. ಇನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮನತಾ ಬ್ಯಾನರ್ಜಿ ಅಭಿನಂದನೆ ಸಲ್ಲಿಸಿದ್ದಾರೆ. ಗಂಗೂಲಿ ಅಧ್ಯಕ್ಷರಾಗೋ ಮೂಲಕ ಬಂಗಾಳವೇ ಹೆಮ್ಮೆ ಪಡುವಂತೆ ಮಾಡಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: BCCIಗೆ ಗಂಗೂಲಿ ಬಿಗ್ ಬಾಸ್; ವಿಶೇಷ ರೀತಿಯಲ್ಲಿ ಶುಭಕೋರಿದ ಸೆಹ್ವಾಗ್!
‘ತಡವಾದರೂ ಭಾರತೀಯ ಕ್ರಿಕೆಟ್‌ಗೆ ಒಳ್ಳೆಯ ಭವಿಷ್ಯವಿದೆ. ಕ್ರಿಕೆಟ್‌ಗೆ ನಿಮ್ಮ ಕೊಡುಗೆ ಮುಂದುವರಿಯಲಿ’ ಎಂದು ಸೆಹ್ವಾಗ್ ಟ್ವೀಟರ್‌ನಲ್ಲಿ ಹಾರೈಸಿದ್ದಾರೆ. ‘ನಿಮ್ಮ ನೇತೃತ್ವದಲ್ಲಿ ಕ್ರಿಕೆಟ್ ಅಭಿವೃದ್ಧಿ ಆಗುವುದರಲ್ಲಿ ಯಾವುದೇ ಸಂದೇಹ ಇಲ್ಲ’ ಎಂದು ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ. ‘ಬಿಸಿಸಿಐ ಅಧ್ಯಕ್ಷರಾಗುವ ನಿಮಗೆ ಅಭಿನಂದನೆಗಳು, ಈ ಹಿಂದಿನಂತೆಯೇ ನಿಮ್ಮ ಕೊಡುಗೆ ನೀಡುವಿರೆಂಬ ನಂಬಿಕೆ ನನಗಿದೆ’ ಎಂದು ತೆಂಡುಲ್ಕರ್ ಟ್ವೀಟಿಸಿದ್ದಾರೆ.
ಇದನ್ನೂ ಓದಿ: ದಾದಾಗೆ BCCI ಅಧ್ಯಕ್ಷ ಗಾದಿ: ಗಂಗೂಲಿ ಮುಂದಿರುವ ಸವಾಲುಗಳೇನು?
ರಾಜಕೀಯ ನಾಯಕರು, ಸಾವಿರಾರು ಕ್ರಿಕೆಟ್ ಅಭಿಮಾನಿಗಳು ಸಹ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.