ವಿರಾಟ್ ಕೊಹ್ಲಿ ಮೇಲೆ ಸ್ವಹಿತಾಸಕ್ತಿ ಆರೋಪ; ಬಿಸಿಸಿಐಗೆ ಪತ್ರ!

Published : Jul 05, 2020, 09:13 PM IST
ವಿರಾಟ್ ಕೊಹ್ಲಿ ಮೇಲೆ ಸ್ವಹಿತಾಸಕ್ತಿ ಆರೋಪ; ಬಿಸಿಸಿಐಗೆ ಪತ್ರ!

ಸಾರಾಂಶ

ಲೋಧ ಸಮಿತಿ ಶಿಫಾರಸಿನ ಬಳಿಕ ಬಿಸಿಸಿಐನಲ್ಲಿ ಸ್ವಹಿತಾಸಕ್ತಿ ಸಂಘರ್ಷ ಆರೋಪದ ಮೇಲೆ ಹಲವು ಮಾಜಿ ಕ್ರಿಕೆಟಿಗರು ಕೆಲ ಹುದ್ದೆ ತೊರೆದಿದ್ದಾರೆ. ಇತ್ತೀಚೆಗೆ ರಾಹುಲ್ ದ್ರಾವಿಡ್ ಮೇಲೂ ಸ್ವಹಿತಾಸಕ್ತಿ ಸಂಘರ್ಷ ಆರೋಪ ಕೇಳಿ ಬಂದಿತ್ತು. ಇದೀಗ ಈ ಆರೋಪ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೇಲೆ ಬಂದಿದೆ. ಈ ಕುರಿತು ಬಿಸಿಸಿಐ ಎಥಿಕ್ಸ್ ಆಫೀಸರ್‌ಗೆ ಪತ್ರ ರವಾನೆಯಾಗಿದೆ.

ಮುಂಬೈ(ಜು.05): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ವಿರಾಟ್ ಕೊಹ್ಲಿ ಮೇಲೆ ಸ್ವಹಿತಾಸಕ್ತಿ ಸಂಘರ್ಷ ಆರೋಪ ಮಾಡಲಾಗಿದೆ. ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆ ಸದಸ್ಯ ಸಂಜೀವ್ ಗುಪ್ತಾ ಬಿಸಿಸಿಐ ಎಥಿಕ್ಸ್ ಆಫೀಸರ್‌ಗೆ ಪತ್ರ ಬರೆದಿದ್ದಾರೆ. ಇದರಲ್ಲಿ ವಿರಾಟ್ ಕೊಹ್ಲಿ ಲೋಧ ಸಮಿತಿ ಶಿಫಾರಸಿನ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

ವಿಡಿಯೋ ಮೂಲಕ ಸಂಚಲನ ಮೂಡಿಸಿದ ರನ್‌ ಮಷಿನ್‌ ವಿರಾಟ್‌ ಕೊಹ್ಲಿ..!..

ಉದ್ಯಮದಲ್ಲಿ ವಿರಾಟ್ ಕೊಹ್ಲಿ ತೊಡಗಿಸಿಕೊಂಡಿದ್ದಾರೆ. ಹಲವು ಕ್ಷೇತ್ರದಲ್ಲಿ ವಿರಾಟ್ ಕೊಹ್ಲಿ ಹಣ ಹೂಡಿಕೆ ಮಾಡಿ ಆದಾಯ ಗಳಿಸುತ್ತಿದ್ದಾರೆ. ಇತ್ತ ಟೀಂ ಇಂಡಿಯಾ ನಾಯಕನಾಗಿ ಬಿಸಿಸಿಐನಿಂದ ಆದಾಯ ಪಡೆಯುತ್ತಿದ್ದಾರೆ. ವಿರಾಟ್ ಕೊಹ್ಲಿ ಬಿಸಿಸಿಐ ನಿಯಮ 38(4)ರ ಉಲ್ಲಂಘನೆ ಮಾಡಿದ್ದಾರೆ. 

ಆಸ್ಟ್ರೇಲಿಯಾ ರಸ್ತೆಗಳಿಗೆ ಕಪಿಲ್ ದೇವ್, ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ ಹೆಸರು..!...

ವಿರಾಟ್ ಕೊಹ್ಲಿ ಸ್ಪೋರ್ಟ್ಸ್ LLP ಕಂಪನಿ, ಕಾರ್ನರ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ವಿರಾಟ್ ಕೊಹ್ಲಿ ಹಣ ಹೂಡಿಕೆ ಮಾಡಿದ್ದಾರೆ. ಇತ್ತೀಚೆಗಷ್ಟೇ ರಾಹುಲ್ ದ್ರಾವಿಡ್ ಮೇಲೂ ಸಂಜೀವ್ ಗುಪ್ತ ಸ್ವಹಿತಾಸಕ್ತಿ ಆರೋಪ ಮಾಡಿದ್ದರು. ಬಳಿಕ ವಿಚಾರಣೆ ಎದುರಿಸಿದ ದ್ರಾವಿಡ್‌ಗೆ ಬಿಸಿಸಿಐ ಕ್ಲೀನ್ ಚಿಟ್ ನೀಡಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?
ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿ ಗೆಲುವಿನ ಬೆನ್ನಲ್ಲೇ ಐಸಿಸಿ ರ್‍ಯಾಂಕಿಂಗ್‌ ಪ್ರಕಟ; ಕೊಹ್ಲಿಗೆ ಜಾಕ್‌ಪಾಟ್!