ಕೊರೋನಾ ವೈರಸ್ ಹಾಗೂ ಲಾಕ್‌ಡೌನ್‌ನಿಂದ ಸಂಕಷ್ಟ ಸಿಲುಕಿರುವವರಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಪ್ರಧಾನಿ ಪರಿಹಾರ ನಿಧಿಗೆ ದೇಣಿ ನೀಡೋ ಮೂಲಕ ನೆರವಾಗಿದ್ದಾರೆ. ಇದೀಗ ಕೊರೋನಾ ವಾರಿಯರ್ಸ್ ನೆರವಿಗೆ ನಿಂತಿದ್ದಾರೆ. ಮುಂಬೈ ಪೊಲೀಸರಿಗೆ ವಿರುಷ್ಕಾ ಜೋಡಿ ಆರ್ಥಿಕ ನೆರವು ನೀಡಿದ್ದಾರೆ.
ಮುಂಬೈ(ಮೇ.09): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣದ ಮೂಲಕ ಕೊರೋನಾ ವೈರಸ್ ವಿರುದ್ಧದ ಹೋರಾಟ ಹಾಗೂ ಜಾಗೃತಿ ಕುರಿತು ಅರಿವು ಮೂಡಿಸುತ್ತಿದ್ದಾರೆ. ಇದರ ಜೊತೆಯಲ್ಲೇ ಸಂಕಷ್ಟದಲ್ಲಿದ್ದವರಿಗೂ ನೆರವಾಗಿದ್ದಾರೆ. ಇದೀಗ ಕೊರೋನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿರುವ ಮುಂಬೈ ಪೊಲೀಸರಿಗೆ ದೇಣಿಗೆ ನೀಡಿದ್ದಾರೆ.
#PMCARES ಫಂಡ್‌ಗೆ ದೇಣಿಗೆ ನೀಡಿದ ವಿರುಷ್ಕಾ ಜೋಡಿ.
undefined
ಕೊರೋನಾ ವಿರುದ್ದ ಹೋರಾಡುತ್ತಿರುವ ಮುಂಬೈ ಪೊಲೀಸರಿಗೆ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಲಾ ಐದೈದು ಲಕ್ಷ ರೂಪಾಯಿ ನೀಡಿದ್ದಾರೆ. ಮುಂಬೈ ಪೊಲೀಸ್ ಫೌಂಡೇಶನ್‌ಗೆ ಹಣ ವರ್ಗಾವಣೆ ಮಾಡಿದ್ದಾರೆ. ಈ ಕುರಿತು ಮುಂಬೈ ಪೊಲೀಸ್ ಕಮೀಷನರ್ ಪರಂ ಬೀರ್ ಸಿಂಗ್ ಟ್ವಿಟರ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
Thank you, and for contributing Rs. 5 lacs each towards the welfare of Mumbai Police personnel.
Your contribution will safeguard those at the frontline in the fight against Coronavirus.
ಕೊರೋನಾ ವಿರುದ್ಧ ಹೋರಾಡುತ್ತಿರುವ ಮುಂಬೈ ಪೊಲೀಸರಿಗೆ ಆರ್ಥಿಕ ನೆರವು ನೀಡಿದ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾಗೆ ಧನ್ಯವಾದ. ಮುಂಬೈ ಪೊಲೀಸ್ ಫೌಂಡೇಷನ್‌ಗೆ ಹಣ ನೀಡಿದ್ದಾರೆ. ಈ ಹಣವನ್ನು ಕೊರೋನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಪೊಲೀಸರ ನೆರವಿಗೆ ಸಹಾಯವಾಗಲಿದೆ ಎಂದು ಪರಂ ಬೀರ್ ಸಿಂಗ್ ಹೇಳಿದ್ದಾರೆ.
ಕೌಟುಂಬಿಕ ದೌರ್ಜನ್ಯ: ಜನತೆಗೆ ಮಹತ್ವದ ಸಂದೇಶ ಸಾರಿದ ವಿರಾಟ್ ಕೊಹ್ಲಿ..!
ಇದಕ್ಕೂ ಮೊದಲು ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಪ್ರಧಾನ ಮಂತ್ರಿ ಪರಿಹಾರ ನಿಧಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ದೇಣಿಗೆ ನೀಡಿದ್ದರು. ಈ ಕುರಿತು ವಿರಾಟ್ ಕೊಹ್ಲಿ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದರು.
Anushka and I are pledging our support towards PM-CARES Fund & the Chief Minister's Relief Fund (Maharashtra). Our hearts are breaking looking at the suffering of so many & we hope our contribution, in some way, helps easing the pain of our fellow citizens
— Virat Kohli (@imVkohli)ನಾನು ಹಾಗೂ ಅನುಷ್ಕಾ ಶರ್ಮಾ ಪಿಎಂ ಕೇರ್ಸ್ ನಿಧಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದೇವೆ. ಸದ್ಯದ ಪರಿಸ್ಥಿತಿ ಗಂಭೀರವಾಗಿದೆ. ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮ್ಮ ಸಣ್ಣ ಕಾಣಿಕೆ ನೆರವಾಗಬಹುದೆಂಬ ನಂಬಿಕೆ ಎಂದು ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದರು.
ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ದೆಹಲಿ ಪೊಲೀಸ್ ಕಾರ್ಯಕ್ಕೆ ಕೊಹ್ಲಿ ಮೆಚ್ಚುಗೆ ವ್ಯಕ್ತಪಡಿಸಿ ವಿಡಿಯೋ ಟ್ವೀಟ್ ಮಾಡಿದ್ದರು. ಸಂಕಷ್ಟದ ಸಂದರ್ಭದಲ್ಲಿ ದೇಶದಾದ್ಯಂತ ಪೊಲೀಸರು ನೆರವು ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ದೆಹಲಿ ಪೊಲೀಸರು ತಮ್ಮ ಕರ್ತವ್ಯದ ಜೊತೆಗೆ ನಿರ್ಗತಿಕರಿಗೆ ಆಹಾರ, ನೀರು ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ. ನಿಮ್ಮ ಕಾರ್ಯಕ್ಕೆ ಶುಭವಾಗಲಿ ಎಂದು ಕೊಹ್ಲಿ ಹೇಳಿದ್ದರು. ಕೊಹ್ಲಿ ಮಾತಿಗೆ ದೆಹಲಿ ಪೊಲೀಸ್ ಧನ್ಯವಾದ ಹೇಳಿತ್ತು.
Thanking you for your kind words of encouragement and support. In this fight against we are leaving no stone unturned to protect our fellow citizens. pic.twitter.com/4hWzwILMsE
— #DilKiPolice Delhi Police (@DelhiPolice)