ಟಿ20 ವಿಶ್ವಕಪ್‌ ಸೆಮೀಸ್‌, ಫೈನಲ್‌ಗೆ ಮೀಸಲು ದಿನ?

Published : Mar 22, 2020, 04:52 PM IST
ಟಿ20 ವಿಶ್ವಕಪ್‌ ಸೆಮೀಸ್‌, ಫೈನಲ್‌ಗೆ ಮೀಸಲು ದಿನ?

ಸಾರಾಂಶ

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಾಕೌಟ್ ಪಂದ್ಯಗಳಿಗೆ ಮೀಸಲು ದಿನ ಇರಿಸುವ ಸಾಧ್ಯತೆಯಿದೆ. ಈ ಕುರಿತಂತೆ ಆತಿಥೇಯ ಆಸ್ಟ್ರೇಲಿಯಾ ತಂಡವು ಐಸಿಸಿ ಮುಂದೆ ಪ್ರಸ್ತಾಪವಿರಿಸಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ. 

ಸಿಡ್ನಿ(ಮಾ.22): ಅಕ್ಟೋಬರ್‌-ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ನ ಸೆಮಿಫೈನಲ್‌ ಹಾಗೂ ಫೈನಲ್‌ ಪಂದ್ಯಗಳಿಗೆ ಮೀಸಲು ದಿನವನ್ನು ಇರಿಸಲು ಕ್ರಿಕೆಟ್‌ ಆಸ್ಪ್ರೇಲಿಯಾ ಪ್ರಸ್ತಾಪಿಸುವ ಸಾಧ್ಯತೆ ಇದೆ. 

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌, ವಿಶ್ವ ಟಿ20ಗೂ ಕೊರೋನಾ ಅಡ್ಡಿ?

ಸದ್ಯದಲ್ಲೇ ನಡೆಯಲಿರುವ ಐಸಿಸಿ ಕ್ರಿಕೆಟ್‌ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಇತ್ತೀಚೆಗೆ ಆಸ್ಪ್ರೇಲಿಯಾದಲ್ಲಿ ನಡೆದಿದ್ದ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಮೀಸಲು ದಿನ ಇರಿಸದ ಕಾರಣ, ಐಸಿಸಿ ಭಾರೀ ಟೀಕೆಗೆ ಗುರಿಯಾಗಿತ್ತು. ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಸೆಮಿಫೈನಲ್‌ ಪಂದ್ಯ ಮಳೆಗೆ ಬಲಿಯಾದ ಕಾರಣ, ಇಂಗ್ಲೆಂಡ್‌ ತಂಡ ಟೂರ್ನಿಯಿಂದ ಹೊರಬಿದ್ದಿತು. ಆ ನಂತರ ಫೈನಲ್‌ ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿಪಡಿಸಲಾಯಿತು.

ಮಹಿಳಾ ಟಿ–20 ವಿಶ್ವಕಪ್‌ ಕ್ರಿಕೆಟ್‌: ಸೆಮೀಸ್ ಆಡದೇ ಭಾರತ ವನಿತೆಯರು ಫೈನಲ್‌ಗೆ ಲಗ್ಗೆ

ಸಭೆಯಲ್ಲಿ ಇನ್ನೂ ಕೆಲ ಪ್ರಮುಖ ವಿಚಾರಗಳ ಬಗ್ಗೆ ವಿವಿಧ ಕ್ರಿಕೆಟ್‌ ಮಂಡಳಿಗಳು ಪ್ರಸ್ತಾಪಿಸುವ ನಿರೀಕ್ಷೆ ಇದೆ. ಜಗತ್ತಿನಾದ್ಯಂತ ಕೊರೋನಾ ವೈರಸ್ ಭೀತಿ ಇರಿವುದರಿಂದ ಟೂರ್ನಿಯನ್ನು ಮುಂದೂಡುವ ಬಗ್ಗೆಯೂ ಚೆರ್ಚೆಯಾಗಬಹುದು ಎನ್ನಲಾಗಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಿಳಾ ಏಷ್ಯಾಕಪ್‌ ಟಿ20: ಇಂದು ಭಾರತ ಎದುರು ಪಾಕಿಸ್ತಾನಕ್ಕೆ ಡು ಆರ್ ಡೈ ಮ್ಯಾಚ್! ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಎಲ್ಲಿ?
Cricket: ಹಿಟ್‌ಮ್ಯಾನ್ ಅಸಲಿ ವೈರಿ ಯಾರು? ಟೀಂ ಇಂಡಿಯಾದಲ್ಲಿ ನಡೀತಿರೋ ಈ ಕಳಪೆ ಗೇಮ್ ಪ್ಲಾನ್ ಏನು? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್!