
ಬೆಂಗಳೂರು(ಆ.15): ಟೀಂ ಇಂಡಿಯಾ ಕ್ರಿಕೆಟ್ ದಂತಕಥೆ ಮಹೇಂದ್ರ ಸಿಂಗ್ ಧೋನಿ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿ ಇಂದಿಗೆ ಮೂರು ವರ್ಷಗಳೇ ಕಳೆದಿವೆ. ಕ್ಯಾಪ್ಟನ್ ಕೂಲ್ ಖ್ಯಾತಿಯ ಎಂ ಎಸ್ ಧೋನಿ, ಆಗಸ್ಟ್ 15, 2020ರಂದು ದಿಢೀರ್ ಎನ್ನುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿ, ಸದ್ಯ ಐಪಿಎಲ್‌ನಲ್ಲಿ ಮಾತ್ರ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುತ್ತಿರುವ ಧೋನಿ ಕುರಿತಂತೆ ಇದೀಗ ಹೊಸ ಸುದ್ದಿಯೊಂದು ಅವರ ಅಭಿಮಾನಿಗಳ ಪಾಲಿಗೆ ಥ್ರಿಲ್ ಕೊಟ್ಟಿದೆ.
ಹೌದು, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ(MS Dhoni), ಇದೀಗ ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ತಲಪತಿ ವಿಜಯ್ ಜತೆ ಸಿನಿಮಾ ತೆರೆಯ ಮೇಲೆ ಮಿಂಚಲು ರೆಡಿಯಾಗಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈಗಾಗಲೇ ಮಹೇಂದ್ರ ಸಿಂಗ್ ಧೋನಿ ತಾವು ಚೆನ್ನೈನ ದತ್ತುಪುತ್ರ ಎಂದು ಘೋಷಿಸಿಕೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್(Indian Premier League) ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ತಂಡವನ್ನು ದಾಖಲೆಯ 5ನೇ ಬಾರಿಗೆ ನಾಯಕನಾಗಿ ಚಾಂಪಿಯನ್ ಪಟ್ಟಕ್ಕೇರಿಸಿರುವ ಧೋನಿ, ಇದೀಗ ಆ ನಂಟನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಮುಂದಾಗಿದ್ದಾರೆ.
Ind vs WI ಸೋಲಿನಲ್ಲೂ ದಾಖಲೆ ಬರೆದ ಟೀಂ ಇಂಡಿಯಾ! 5 ಅನಗತ್ಯ ದಾಖಲೆಗೆ ಪಾತ್ರವಾದ ಪಾಂಡ್ಯ ಪಡೆ..!
ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ವರದಿಗಳ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ, ತಲಪತಿ ವಿಜಯ್ ಅವರ ಬಹುನಿರೀಕ್ಷಿತ ಚಿತ್ರವಾಗಿರುವ 'ತಲಪತಿ 69' ಸಿನಿಮಾದಲ್ಲಿ ವಿಜಯ್ ಜತೆ ಮುಖ್ಯ ಪಾತ್ರದಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
'ತಲಪತಿ 69'(Thalapathy 68) ಸಿನಿಮಾವು ಪ್ರಖ್ಯಾತ ಫಿಲ್ಮ್ ಮೇಕರ್ ವೆಂಕಟ್ ಪ್ರಭು ನಿರ್ಮಾಣ ಮಾಡುತ್ತಿರುವುದರಿಂದ ಈ ಗಾಳಿ ಸುದ್ದಿಗೆ ಮತ್ತಷ್ಟು ಬಲ ಸಿಗುವಂತೆ ಮಾಡಿದೆ. ಆದರೆ ಈ ಸಿನಿಮಾದಲ್ಲಿ ಎಂ ಎಸ್ ಧೋನಿ ನಟಿಸುತ್ತಿರುವುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲ. ಆದರೆ ಒಂದಂತೂ ಸತ್ಯ, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ಸುದ್ದಿ ಧೋನಿ ಅಭಿಮಾನಿಗಳನ್ನು ಒಂದು ಕ್ಷಣ ಥ್ರಿಲ್ ಮಾಡಿದ್ದಂತೂ ಸುಳ್ಳಲ್ಲ.
ಇವರೇ ನೋಡಿ ಕ್ರಿಕೆಟಿಗ ಧೋನಿ ಸಹೋದರಿ, ವೃತ್ತಿಯಲ್ಲಿ ಟೀಚರ್, ಮದುವೆಯಾಗಿದ್ದು ಮಹಿ ಸ್ನೇಹಿತನನ್ನೇ!
ಕ್ಯಾಪ್ಟನ್ ಕೂಲ್ ಎಂ.ಎಸ್.ಧೋನಿ ಸಿನಿಮಾ ಜಗತ್ತಿಗೂ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ತಮ್ಮದೇ ಧೋನಿ ಎಂಟರ್ ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಈ ಸಂಸ್ಥೆಯಡಿ ಧೋನಿ ಪತ್ನಿ ಸಾಕ್ಷಿ ಧೋನಿ ಲೆಟ್ಸ್ ಗೆಟ್ ಮ್ಯಾರೀಡ್ ಎಂಬ ತಮಿಳು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಚಿತ್ರದ ಟ್ರೇಲರ್ ಹಾಗೂ ಆಡಿಯೋ ಬಿಡುಗಡೆ ಮಾಡಲಾಗಿದೆ. ಕ್ಯಾಪ್ಟನ್ ಕೂಲ್ ತಮ್ಮದೇ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾದ ಟ್ರೇಲರ್ ಅನಾವರಣ ಮಾಡಿ ಹಲವು ವಿಷಯಗಳನ್ನು ಹಂಚಿಕೊಂಡಿದ್ದರು.
ರಮೇಶ್ ತಮಿಳಮಣಿ ನಿರ್ದೇಶನದ ಈ ಚಿತ್ರದಲ್ಲಿ ಹರೀಶ್ ಕಲ್ಯಾಣ್ ಮತ್ತು ಇವಾನಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪಕ್ಕ ಫ್ಯಾಮಿಲಿ ಎಂಟರ್‌ಟೈನರ್ ಚಿತ್ರವಾಗಿರುವ ಲೆಟ್ಸ್ ಗೆಟ್ ಮ್ಯಾರೀಡ್ ಆದಷ್ಟು ಬೇಗ ತೆರೆಗೆ ಬರಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.