Latest Videos

ರಚಿನ್ ರವೀಂದ್ರ ಮುಟ್ಟಿದ್ದೆಲ್ಲಾ ಚಿನ್ನ, ಎರಡು ಅಪರೂಪದ ದಾಖಲೆ ಬರೆದ ಬೆಂಗಳೂರು ಮೂಲದ ಕಿವೀಸ್ ಆಟಗಾರ

By Naveen KodaseFirst Published Nov 9, 2023, 7:33 PM IST
Highlights

ರಚಿನ್ ರವೀಂದ್ರ ಈಗಾಗಲೇ ತಮ್ಮ ನೆಚ್ಚಿನ ಹೀರೋ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿ 27 ವರ್ಷಗಳಿಂದ ಅಚ್ಚಳಿಯದೇ ಉಳಿದಿದ್ದ ದಾಖಲೆ ಅಳಿಸಿ ಹಾಕಿದ್ದರು. 24 ವರ್ಷ ತುಂಬುವುದರೊಳಗಾಗಿ ಏಕದಿನ ವಿಶ್ವಕಪ್‌ನಲ್ಲಿ ಅತಿಹೆಚ್ಚು ಶತಕ(03) ಸಿಡಿಸಿದ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದರು. ಇದರ ಜತೆಗೆ ತಾವಾಡಿದ ಚೊಚ್ಚಲ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಶತಕ ಸಿಡಿಸಿದ ಬ್ಯಾಟರ್ ಎನ್ನುವ ಹಿರಿಮೆಗೂ ರಚಿನ್ ರವೀಂದ್ರ ಪಾತ್ರರಾಗಿದ್ದರು.

ಬೆಂಗಳೂರು(ನ.09): ಭಾರತೀಯ ಮೂಲದ ನ್ಯೂಜಿಲೆಂಡ್ ಆಲ್ರೌಂಡರ್ ರಚಿನ್ ರವೀಂದ್ರ ಅದ್ಭುತ ಪ್ರದರ್ಶನದ ಮೂಲಕ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮಿಂಚುತ್ತಿದ್ದಾರೆ. ಇದೀಗ ಶ್ರೀಲಂಕಾ ಎದುರಿನ ಪಂದ್ಯದ ವೇಳೆ ರಚಿನ್ ರವೀಂದ್ರ, ವಿಶ್ವಕಪ್ ಇತಿಹಾಸದಲ್ಲಿ ಎರಡು ಅಪರೂಪದ ದಾಖಲೆಗಳನ್ನು ನಿರ್ಮಿಸಿ ಗಮನ ಸೆಳೆದಿದ್ದಾರೆ.

ಹೌದು, 23 ವರ್ಷದ ಬೆಂಗಳೂರು ಮೂಲದ ಪ್ರತಿಭಾನ್ವಿತ ಆಲ್ರೌಂಡರ್ ರಚಿನ್ ರವೀಂದ್ರ, ಶ್ರೀಲಂಕಾ ಎದುರಿನ ಪಂದ್ಯಕ್ಕೂ ಮುನ್ನ 8 ಇನಿಂಗ್ಸ್‌ಗಳನ್ನಾಡಿ 523 ರನ್ ಬಾರಿಸಿದ್ದರು. ಈ ಮೂಲಕ ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕ್ವಿಂಟನ್ ಡಿ ಕಾಕ್(550) ಹಾಗೂ ವಿರಾಟ್ ಕೊಹ್ಲಿ(543) ಬಳಿಕ ಮೂರನೇ ಸ್ಥಾನದಲ್ಲಿದ್ದರು. ಇದೀಗ ಈ ಇಬ್ಬರನ್ನು ಹಿಂದಿಕ್ಕಿರುವ ರಚಿನ್ ರವೀಂದ್ರ 565 ರನ್‌ಗಳೊಂದಿಗೆ ಅಗ್ರಸ್ಥಾನಕ್ಕೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದ್ದಾರೆ.

ಬ್ಯಾಟರ್‌ಗಳ ವೈಪಲ್ಯ: ಕಿವೀಸ್‌ಗೆ ಸಾಧಾರಣ ಗುರಿ ನೀಡಿದ ಲಂಕಾ..!

ರಚಿನ್ ರವೀಂದ್ರ ಈಗಾಗಲೇ ತಮ್ಮ ನೆಚ್ಚಿನ ಹೀರೋ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿ 27 ವರ್ಷಗಳಿಂದ ಅಚ್ಚಳಿಯದೇ ಉಳಿದಿದ್ದ ದಾಖಲೆ ಅಳಿಸಿ ಹಾಕಿದ್ದರು. 24 ವರ್ಷ ತುಂಬುವುದರೊಳಗಾಗಿ ಏಕದಿನ ವಿಶ್ವಕಪ್‌ನಲ್ಲಿ ಅತಿಹೆಚ್ಚು ಶತಕ(03) ಸಿಡಿಸಿದ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದರು. ಇದರ ಜತೆಗೆ ತಾವಾಡಿದ ಚೊಚ್ಚಲ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಶತಕ ಸಿಡಿಸಿದ ಬ್ಯಾಟರ್ ಎನ್ನುವ ಹಿರಿಮೆಗೂ ರಚಿನ್ ರವೀಂದ್ರ ಪಾತ್ರರಾಗಿದ್ದರು.

ಚೊಚ್ಚಲ ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಸಾಧಕ:

ಈ ವಿಶ್ವಕಪ್ ಟೂರ್ನಿಗೂ ಮುನ್ನ ಆಟಗಾರನೊಬ್ಬ ಚೊಚ್ಚಲ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ದಾಖಲೆ ಜಾನಿ ಬೇರ್‌ಸ್ಟೋವ್ ಹೆಸರಿನಲ್ಲಿತ್ತು. ಇಂಗ್ಲೆಂಡ್ ಸ್ಪೋಟಕ ಆರಂಭಿಕ ಬ್ಯಾಟರ್ ಬೇರ್‌ಸ್ಟೋವ್ 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 532 ರನ್ ಬಾರಿಸಿದ್ದರು. ಆ ಅಪರೂಪದ ದಾಖಲೆ ಇದೀಗ ರಚಿನ್ ರವೀಂದ್ರ ಪಾಲಾಗಿದೆ. 

ಶಕೀಬ್ ಲಂಕಾಕ್ಕೆ ಬಂದ್ರೆ ಕಲ್ಲೇಟು: ಬಾಂಗ್ಲಾ ನಾಯಕನಿಗೆ ಮ್ಯಾಥ್ಯೂಸ್ ಬ್ರದರ್ ಖಡಕ್ ವಾರ್ನಿಂಗ್

25 ವರ್ಷ ತುಂಬುವುದರೊಳಗಾಗಿ ಒಂದು ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಸಾಧಕ:

ಇನ್ನು ಏಕದಿನ ವಿಶ್ವಕಪ್ ಇತಿಹಾಸದಲ್ಲಿ 25 ವರ್ಷ ತುಂಬುವುದರೊಳಗಾಗಿ ಅತಿಹೆಚ್ಚು ರನ್ ಬಾರಿಸಿದ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿತ್ತು. ಮುಂಬೈಕರ್ 1996ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 523 ರನ್ ಬಾರಿಸಿದ್ದರು. ಆಗ ಸಚಿನ್ 25 ವರ್ಷಕ್ಕಿಂತ ಚಿಕ್ಕವರಾಗಿದ್ದರು. ಇದೀಗ ಆ ದಾಖಲೆ ಕೂಡಾ ಬೆಂಗಳೂರು ಮೂಲದ ರಚಿನ್ ರವೀಂದ್ರ ಪಾಲಾಗಿದೆ.

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೇ, ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ, ಕಿವೀಸ್ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ ಕೇವಲ 171 ರನ್‌ಗಳಿಗೆ ಸರ್ವಪತನ ಕಂಡಿತು. ಇನ್ನು ಗುರಿ ಬೆನ್ನತ್ತಿರುವ ನ್ಯೂಜಿಲೆಂಡ್ ಗೆಲುವಿನತ್ತ ದಾಪುಗಾಲಿಟ್ಟಿದ್ದು, 20 ಓವರ್ ಅಂತ್ಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 144 ರನ್ ಬಾರಿಸಿದ್ದು, ಇನ್ನು ಕೇವಲ 28 ರನ್ ಅಗತ್ಯವಿದೆ.
 

click me!