
ನವದೆಹಲಿ(ಡಿ.23): ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜುವೇಂದ್ರ ತಮ್ಮ ಗೆಳತಿ ಧನಶ್ರೀ ವರ್ಮಾ ಜತೆ ಡಿಸೆಂಬರ್ 22ರಿಂದ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ನಿಶ್ಚಿತಾರ್ಥ ಮಾಡಿಕೊಂಡ ರೀತಿಯಲ್ಲಿಯೇ ಚಹಲ್ ಮದುವೆಯನ್ನು ತುಂಬಾ ಗುಟ್ಟಾಗಿಯೇ ಮಾಡಿಕೊಂಡಿದ್ದಾರೆ.
ಈ ಮುದ್ದಾದ ಜೋಡಿ ಗುರುಗಾವ್‌ನಲ್ಲಿರುವ ಕರ್ಮಾ ಲೇಕ್ ರೆಸಾರ್ಟ್‌ನಲ್ಲಿ ಹಿಂದು ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಇದಾದ ಬಳಿಕ ಈ ಜೋಡಿ ತಮ್ಮ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯ ಮೂಲಕ ತಮ್ಮ ಅಭಿಮಾನಿಗಳಿಗೆ ತಾವು ಮದುವೆಯಾಗಿರುವ ವಿಚಾರವನ್ನು ತಿಳಿಸಿದ್ದಾರೆ.
ಕಳೆದ ಆಗಸ್ಟ್‌ನಲ್ಲಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ಯುಜುವೇಂದ್ರ ಚಹಲ್ ದಿಢೀರ್ ಎನ್ನುವಂತೆ ಧನಶ್ರೀ ವರ್ಮ ಜತೆ ನಿಶ್ಚಿತಾರ್ಥ ಮಾಡಿಕೊಂಡು ಎಲ್ಲರನ್ನು ಆಶ್ಚರ್ಯಚಕಿತರನ್ನಾಗಿಸಿದ್ದರು. ಅದೇ ರೀತಿ ಇದೀಗ ಚಹಲ್ ದಾಪಂತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಧನಶ್ರೀ ವರ್ಮ ಜೊತೆ ಸಪ್ತಪದಿ ತುಳಿದ ಯಜುವೇಂದ್ರ ಚಹಾಲ್!
ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ಹೊಸ ಇನಿಂಗ್ಸ್ ಆರಂಭಿಸಿದ್ದಕ್ಕೆ ಸಚಿನ್ ತೆಂಡುಲ್ಕರ್, ರೋಹಿತ್ ಶರ್ಮಾ, ನವದೀಪ್ ಸೈನಿ ಸೇರಿದಂತೆ ಹಲವು ಕ್ರಿಕೆಟಿಗರು ಸಾಮಾಜಿಕ ಜಾಲತಾಣಗಳ ಮೂಲಕ ಶುಭ ಕೋರಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.