
ಮೈಸೂರು: ಮೈಸೂರು-ಕೊಡಗು ಕ್ಷೇತ್ರದ ಸಂಸದ, ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭಾರತೀಯ ಕ್ರಿಕೆಟಿಗ ಯಜುವೇಂದ್ರ ಚಹಲ್ ಮೈಸೂರಿನಲ್ಲಿ ಭೇಟಿಯಾದರು. ಇದರ ಫೋಟೋವನ್ನು ಯದುವೀರ್ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಯುಜುವೇಂದ್ರ ಚಹಲ್‌ಗೆ ಸಾಂಪ್ರದಾಯಿಕ ಮೈಸೂರು ಪೇಟ ಹಾರ ಹಾಗೂ ಶಾಲು ಹಾಕಿ ಸನ್ಮಾನಿಸಲಾಗಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಪ್ರಖ್ಯಾತ ಭಾರತೀಯ ಕ್ರಿಕೆಟಿಗ ಶ್ರೀ ಯುಜುವೇಂದ್ರ ಚಹಲ್ ಅವರನ್ನು ಮೈಸೂರಿನ ತಮ್ಮ ಕಚೇರಿಯಲ್ಲಿ ಭೇಟಿ ಮಾಡಲಾಯಿತು ಎಂದು ಬರೆದುಕೊಂಡಿದ್ದಾರೆ. ಇನ್ನು ಇದಕ್ಕೆ ಪ್ರತಿಯಾಗಿ ಚಹಲ್ ಕೂಡಾ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಮೈಸೂರು ಯದುವೀರ್ ಒಡೆಯರ್‌ರನ್ನು ಭೇಟಿಯಾಗಿದ್ದು ವಿಶೇಷ ಗೌರವ’ ಎಂದಿದ್ದಾರೆ.
ಕ್ರಿಕೆಟ್ ಜಗತ್ತಿನ ಹೊಸ ರನ್ ಮಷಿನ್! ಸರ್ ಡಾನ್ ಬ್ರಾಡ್ಮನ್ ದಾಖಲೆ ಸರಿಗಟ್ಟಿದ ಲಂಕಾ ಬ್ಯಾಟರ್
ಕರ್ನಾಟಕದ ಜತೆಗೆ ಉತ್ತಮ ಒಡನಾಟ ಹೊಂದಿರುವ ಚಹಲ್: ಭಾರತದ ಯಶಸ್ವಿ ಲೆಗ್‌ಸ್ಪಿನ್ನರ್‌ಗಳಲ್ಲಿ ಒಬ್ಬರೆನಿಸಿಕೊಂಡಿರುವ ಯುಜುವೇಂದ್ರ ಚಹಲ್‌ಗೆ ಕರ್ನಾಟಕ ಹಾಗೂ ಆರ್‌ಸಿಬಿ ಜತೆಗೆ ಒಳ್ಳೆಯ ಸಂಬಂಧವಿದೆ. 2014ರಲ್ಲಿ ಕೇವಲ 10 ಲಕ್ಷ ರುಪಾಯಿಗೆ ಆರ್‌ಸಿಬಿ ತಂಡವನ್ನು ಕೂಡಿಕೊಂಡ ಚಹಲ್, ಐಪಿಎಲ್‌ನ ಯಶಸ್ವಿ ಸ್ಪಿನ್ನರ್ ಆಗಿ ಬೆಳೆದು ನಿಂತರು. ಪರಿಣಾಮ ಆರ್‌ಸಿಬಿ ಪರವಾಗಿ ತೋರಿದ ಅದ್ಭುತ ಪ್ರದರ್ಶನದ ನೆರವಿನಿಂದ ಚಹಲ್, 2016ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಇನ್ನು ಚಹಲ್ ವಿಶೇಷ ಸಂದರ್ಭಗಳಲ್ಲಿ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಕನ್ನಡಿಗರು ಹಾಗೂ ಕರ್ನಾಟಕದ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಚಹಲ್, ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಕನ್ನಡದಲ್ಲೇ ಶುಭಕೋರಿ ಗಮನ ಸೆಳೆಯುತ್ತಾ ಬಂದಿದ್ದಾರೆ.
ಟೀಂ ಇಂಡಿಯಾ ಕ್ರಿಕೆಟಿಗನ ಸಹೋದರ, ಪ್ರತಿಭಾನ್ವಿತ ಬ್ಯಾಟರ್ ಭೀಕರ ಅಪಘಾತ, ಕ್ರಿಕೆಟರ್ ತಂದೆಗೂ ಗಾಯ!
ಬಹುಮುಖ ಪ್ರತಿಭೆ: ಯುಜುವೇಂದ್ರ ಚಹಲ್ ಕೇವಲ ಕ್ರಿಕೆಟ್‌ನಲ್ಲಿ ಮಾತ್ರವಲ್ಲದೇ ಚೆಸ್‌ನಲ್ಲಿಯೂ ಭಾರತವನ್ನು ಪ್ರತಿನಿಧಿಸಿದ ಬಹುಮುಖ ಪ್ರತಿಭೆ ಎನಿಸಿಕೊಂಡಿದ್ದಾರೆ. ಯುಜುವೇಂದ್ರ ಚಹಲ್, ಅಂತಾರಾಷ್ಟ್ರೀಯ ಮಟ್ಟದಲ್ಲಿ ಚೆಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಇನ್ನು ಚಹಲ್ 2024ರಲ್ಲಿ ಭಾರತ ಟಿ20 ವಿಶ್ವಕಪ್ ಗೆದ್ದ ಚಾಂಪಿಯನ್ ತಂಡದ ಸದಸ್ಯರು ಕೂಡಾ ಹೌದು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.