ಸುರೇಶ್ ರೈನಾ ಬಗ್ಗೆ ಗುಡ್‌ ನ್ಯೂಸ್‌ ಕೊಟ್ಟ ಸಿಎಸ್‌ಕೆ..!

Suvarna News   | Asianet News
Published : Dec 25, 2020, 04:58 PM IST
ಸುರೇಶ್ ರೈನಾ ಬಗ್ಗೆ ಗುಡ್‌ ನ್ಯೂಸ್‌ ಕೊಟ್ಟ ಸಿಎಸ್‌ಕೆ..!

ಸಾರಾಂಶ

ಇತ್ತೀಚೆಗಷ್ಟೇ ಮುಂಬೈ ಪೊಲೀಸರಿಂದ ಬಂದಿಸಲ್ಪಟ್ಟಿದ್ದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್‌ ರೈನಾಗೆ ಚೆನ್ನೈ ಸೂಪರ್ ಕಿಂಗ್ಸ್‌ ಫ್ರಾಂಚೈಸಿ ಗುಡ್‌ ನ್ಯೂಸ್ ನೀಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಚೆನ್ನೈ(ಡಿ.25): ಕೋವಿಡ್‌ ಭೀತಿಯಿಂದ ದುಬೈನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್‌ನಿಂದ ಹಿಂದೆ ಸರಿದಿದ್ದ ಸುರೇಶ್‌ ರೈನಾ, 2021ರ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಪರವೇ ಆಡಲಿದ್ದಾರೆ ಎಂದು ತಂಡದ ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. 

2020ರ ಐಪಿಎಲ್‌ನಲ್ಲಿ ಆಡದ ಹಿನ್ನೆಲೆಯಲ್ಲಿ ರೈನಾ ಅವರನ್ನು ಚೆನ್ನೈ ತಂಡದಿಂದ ಕೈಬಿಡಲಾಗುವುದು ಎನ್ನುವ ವದಂತಿ ಹಬ್ಬಿದ್ದ ಹಿನ್ನೆಲೆಯಲ್ಲಿ ತಂಡ ಸ್ಪಷ್ಟನೆ ನೀಡಿದೆ.

ಇನ್ನು ಮುಂಬೈನಲ್ಲಿ ಸುರೇಶ್ ರೈನಾ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಸ್‌ಕೆ ಫ್ರಾಂಚೈಸಿ, ನಮಗೆ ರೈನಾ ಅರೆಸ್ಟ್ ಆಗಿರುವ ಬಗ್ಗೆ ಮಾತ್ರ ಗೊತ್ತಿದೆ. ಈ ಬಗ್ಗೆ ಹೆಚ್ಚೇನು ಪ್ರತಿಕಿಯಿಸಲು ಬಯಸುವುದಿಲ್ಲ, ಅವರು ಐಪಿಎಲ್‌ನಲ್ಲಿ ನಮ್ಮ ತಂಡದಲ್ಲೇ ಮುಂದುವರೆಯಲಿದ್ದಾರೆ ಎನ್ನುವುದನ್ನು ತಿಳಿಸಲು ಬಯಸುತ್ತೇವೆ ಎಂದು ಹೇಳಿದ್ದಾರೆ.

ಸುರೇಶ್ ರೈನಾ ಆರೆಸ್ಟ್‌ ಬಗ್ಗೆ ಕೊನೆಗೂ ಸಿಕ್ತು ಸ್ಪಷ್ಟನೆ..! ಅಷ್ಟಕ್ಕೂ ಆಗಿದ್ದೇನು?

ಸುರೇಶ್ ರೈನಾ ಅವರು ಮುಂಬೈನ ವಿಮಾನ ನಿಲ್ದಾಣದ ಸಮೀಪವಿರುವ ಕ್ಲಬ್‌ನಲ್ಲಿ ತಡರಾತ್ರಿ ಔತಣಕೂಟದಲ್ಲಿ ಪಾಲ್ಗೊಂಡಿದ್ದರು, ಈ ವೇಳೆ ಕೆಲ ಸೆಲಿಬ್ರಿಟಿಗಳನ್ನು ಸೇರಿದಂತೆ 34 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದರು. 

ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಸುರೇಶ್ ರೈನಾ ಜನವರಿ 10ರಿಂದ ಆರಂಭವಾಗಲಿರುವ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಉತ್ತರ ಪ್ರದೇಶ ತಂಡವನ್ನು ಪ್ರತಿನಿಧಿಸಲಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ
U19 ಏಷ್ಯಾಕಪ್, 150 ರನ್‌ಗೆ ಪಾಕಿಸ್ತಾನ ಆಲೌಟ್ ಮಾಡಿದ ಟೀಂ ಇಂಡಿಯಾಗೆ 90 ರನ್ ಗೆಲುವು