2025ರ ಐಪಿಎಲ್ ಟೂರ್ನಿಯ ಮೆಗಾ ಹರಾಜಿಗೂ ಮುನ್ನ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಈ 5 ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಮುಂದಾಗಿದೆ. ಯಾರವರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
ಚೆನ್ನೈ: ಮುಂಬರುವ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಈಗಿನಿಂದಲೇ ಭರದ ಸಿದ್ದತೆಗಳು ಆರಂಭವಾಗಿವೆ. ಇದಕ್ಕೂ ಮುನ್ನ ಐಪಿಎಲ್ ಮೆಗಾ ಹರಾಜು ನಡೆಯಲಿದ್ದು, ಎಲ್ಲಾ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಇನ್ನಿಲ್ಲದ ಕಸರತ್ತನ್ನು ನಡೆಸುತ್ತಿವೆ. ಬಿಸಿಸಿಐ ಫ್ರಾಂಚೈಸಿಯೊಂದಕ್ಕೆ ಎಷ್ಟು ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಅವಕಾಶ ನೀಡಲಿದೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲವಾದರೂ, ಕನಿಷ್ಠ 5 ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇಡೀ ಐಪಿಎಲ್ ಫ್ರಾಂಚೈಸಿ ಸಮೂಹವೇ ಬಿಸಿಸಿಐ ರೀಟೈನ್ ಪಾಲಿಸಿ ಬಿಡುಗಡೆಗಾಗಿ ಕಾದುಕುಳಿತಿದೆ. ಬಿಸಿಸಿಐ ರೀಟೈನ್ ರೂಲ್ಸ್ ಬಗ್ಗೆ ಎಲ್ಲಕ್ಕಿಂತ ಹೆಚ್ಚಾಗಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕುತೂಹಲದಿಂದ ಎದುರು ನೋಡುತ್ತಿದೆ. ಬಿಸಿಸಿಐ ರೀಟೈನ್ ಪಾಲಿಸಿ ಆಧರಿಸಿ, ಧೋನಿ ಮುಂಬರುವ ಐಪಿಎಲ್ ಆಡುತ್ತಾರೆಯೇ ಅಥವಾ ಇಲ್ಲವೇ ಎನ್ನುವುದು ನಿರ್ಧಾರವಾಗಲಿದೆ.
undefined
ಇದೀಗ ಕೆಲವು ಮಾಧ್ಯಮಗಳ ವರದಿಯ ಪ್ರಕಾರ, ಐದು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಮೆಗಾ ಹರಾಜಿಗೂ ಮುನ್ನ ಐದು ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಶಾರ್ಟ್‌ಲಿಸ್ಟ್ ಮಾಡಿಕೊಂಡಿದೆ. ಈ ವರದಿಯ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ನಾಯಕ ಋತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಶಿವಂ ದುಬೆ, ಮಥೀಶ್ ಪತಿರಣ ಹಾಗೂ ಎಂ ಎಸ್ ಧೋನಿಯನ್ನು ರೀಟೈನ್ ಮಾಡಿಕೊಳ್ಳಲು ತೀರ್ಮಾನಿಸಿದೆ ಎನ್ನಲಾಗಿದೆ.
ಆದರೆ ತುಂಬಾ ಅಚ್ಚರಿಯ ಸಂಗತಿ ಎನ್ನುವಂತೆ ಟೀಂ ಇಂಡಿಯಾ ವೇಗಿ ದೀಪಕ್ ಚಹರ್, ಡೆವೊನ್ ಕಾನ್‌ವೇ ಹಾಗೂ ಮಹೀಶ್ ತೀಕ್ಷಣ ಅವರಂತಹ ಟಿ20 ಸ್ಪೆಷಲಿಸ್ಟ್ ಆಟಗಾರರನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ತಂಡದಿಂದ ಕೈಬಿಡಲು ಮುಂದಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಚೆನ್ನೈ ಟೆಸ್ಟ್ ಗೆಲುವಿನ ಬೆನ್ನಲ್ಲೇ ಬಾಂಗ್ಲಾದೇಶ ಎದುರಿನ ಎರಡನೇ ಟೆಸ್ಟ್‌ಗೆ ಭಾರತ ಕ್ರಿಕೆಟ್ ತಂಡ ಪ್ರಕಟ!
ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5 ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ಟ್ರೋಫಿ ಗೆದ್ದ ತಂಡಗಳ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಜತೆ ಜಂಟಿ ಅಗ್ರಸ್ಥಾನ ಹಂಚಿಕೊಂಡಿದೆ. ಆದರೆ ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಧೋನಿ ಸಿಎಸ್‌ಕೆ ನಾಯಕತ್ವದಿಂದ ಕೆಳಗಿಳಿದು ಕೇವಲ ಆಟಗಾರನಾಗಿ ಮಾತ್ರ ಕಾಣಿಸಿಕೊಂಡಿದ್ದರು. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5ನೇ ಸ್ಥಾನ ಪಡೆಯುವ ಮೂಲಕ ಪ್ಲೇ ಆಫ್‌ಗೇರಲು ವಿಫಲವಾಗಿತ್ತು.