
ಲಂಡನ್(ಜು.15): ಡೇನಿಯಲ್ ವ್ಯಾಟ್ ಬಾರಿಸಿದ ಅಜೇಯ 89 ರನ್‌ಗಳ ನೆರವಿನಿಂದ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡದೆದುರು ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡವು 8 ವಿಕೆಟ್‌ಗಳ ಜಯ ಸಾಧಿಸಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು ಇಂಗ್ಲೆಂಡ್ 2-1 ಅಂತರದಿಂದ ಕೈವಶ ಮಾಡಿಕೊಂಡಿದೆ.
ಭಾರತ ನೀಡಿದ್ದ 154 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು ಆರಂಭವದಲ್ಲೇ ಟಾಮಿ ಬಿಯುಮೌಟ್(11) ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಎರಡನೇ ವಿಕೆಟ್‌ಗೆ ಜತೆಯಾದ ವ್ಯಾಟ್ ಹಾಗೂ ಸೀವರ್ 112 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸೀವರ್ 36 ಎಸೆತಗಳಲ್ಲಿ 42 ರನ್ ಬಾರಿಸಿ ಸ್ನೆಹ್ ರಾಣಾಗೆ ವಿಕೆಟ್ ಒಪ್ಪಿಸಿದರು. ಮತ್ತೊಂದು ತುದಿಯಲ್ಲಿ ದಿಟ್ಟ ಬ್ಯಾಟಿಂಗ್ ನಡೆಸಿದ ವ್ಯಾಟ್ 56 ಎಸೆತಗಳಲ್ಲಿ 12 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 89 ರನ್ ಚಚ್ಚಿದರು. ಇದರೊಂದಿಗೆ ಇನ್ನೂ 8 ಎಸೆತಗಳು ಬಾಕಿ ಇರುವಂತೆಯೇ 8 ವಿಕೆಟ್‌ಗಳಿಂದ ತಂಡ ಜಯ ಸಾಧಿಸಿತು.
ಟಿ20 ಸರಣಿ ಮೇಲೆ ಭಾರತ ಮಹಿಳಾ ಕ್ರಿಕೆಟ್ ತಂಡದ ಕಣ್ಣು
ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಆರಂಭಿಕ ವೈಫಲ್ಯ ಅನುಭವಿಸಿತು. ಶಫಾಲಿ ವರ್ಮಾ ಶೂನ್ಯ ಸುತ್ತಿದರೆ, ಹರ್ಲಿನ್ ಡಿಯೋಲ್ ಆಟ 6 ರನ್‌ಗಳಿಗೆ ಸೀಮಿತವಾಯಿತು. ಸ್ಮೃತಿ ಮಂಧನಾ 51 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 70 ರನ್ ಬಾರಿಸಿದರು. ನಾಯಕಿ ಹರ್ಮನ್‌ಪ್ರೀತ್ ಕೌರ್ 36 ರನ್ ಬಾರಿಸುವ ಮೂಲಕ ತಂಡ ಗೌರವಾನ್ವಿತ ಮೊತ್ತ ಕಲೆಹಾಕುವಲ್ಲಿ ನೆರವಾದರು.
ಸರಣಿ ಗೆಲುವಿಲ್ಲದೇ ಭಾರತದ ಇಂಗ್ಲೆಂಡ್ ಪ್ರವಾಸ ಅಂತ್ಯ: ಇಂಗ್ಲೆಂಡ್ ಪ್ರವಾಸದಲ್ಲಿ ಮೊದಲಿಗೆ ಮಿಥಾಲಿ ರಾಜ್ ಪಡೆ ಇಂಗ್ಲೆಂಡ್ ಎದುರು ಏಕೈಕ ಟೆಸ್ಟ್ ಪಂದ್ಯವನ್ನಾಡಿತ್ತು. ಈ ಪಂದ್ಯವು ರೋಚಕ ಡ್ರಾನಲ್ಲಿ ಅಂತ್ಯವಾಗಿತ್ತು. ಇದಾದ ಬಳಿಕ ನಡೆದ ಮೂರು ಪಂದ್ಯಗಳ ಸರಣಿಯನ್ನು ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡವು 2-1 ಅಂತರದಲ್ಲಿ ಜಯಿಸಿತ್ತು. ಇದಾದ ಬಳಿಕ ಟಿ20 ಸರಣಿಯು ಇಂಗ್ಲೆಂಡ್ ಪಾಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.