ಪೊಲೀಸ್ ಕೈಗೆ ಸಿಕ್ಕಿಬಿದ್ದು ತಪ್ಪೊಪ್ಪಿಕೊಂಡ ವಾರ್ನರ್, 9 ತಿಂಗಳ ಜೈಲು ಶಿಕ್ಷೆ ಭೀತಿಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗ

Published : Jul 22, 2026, 10:49 AM IST
David Warner

ಸಾರಾಂಶ

ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಪೊಲೀಸರ ಕೈಗೆ ಸಿಕ್ಕಿ ಬಿದ್ದು ಅನಿವಾರ್ಯವಾಗಿ ಕೋರ್ಟ್ ಮೆಟ್ಟಿಲು ಹತ್ತಬೇಕಾಯಿತು. ಕೋರ್ಟ್‌ನಲ್ಲಿ ತಪ್ಪೊಪ್ಪಿಕೊಂಡ ವಾರ್ನರ್‌ 9 ತಿಂಗಳ ಜೈಲು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ.

ಸಿಡ್ನಿ (ಜು.22) ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಕ್ರಿಕೆಟ್ ಕರಿಯರ್‌ನಲ್ಲಿ ಈಗಾಗಲೇ ಒಂದು ಬಾರಿ ಶಿಕ್ಷೆ ಅನುಭವಿಸಿದ್ದಾರೆ. ಬಾಲ್ ಟ್ಯಾಂಪರ್ ಮಾಡಿದ ಪ್ರಕರಣದಲ್ಲಿ ಅಮಾನತು, ನಿಷೇಧ ಸೇರಿದಂತೆ ಹಲವು ಶಿಕ್ಷೆ ಎದುರಿಸಿದ್ದಾರೆ. ಇದರ ಬೆನ್ನಲ್ಲೇ ಡೇವಿಡ್ ವಾರ್ನರ್ ಮತ್ತೊಂದು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಡೇವಿಡ್ ವಾರ್ನರ್ ತಪ್ಪೊಪ್ಪಿಕೊಂಡಿದ್ದಾರೆ. ಪರಿಣಾಮ ಕನಿಷ್ಠ 9 ತಿಂಗಳ ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ.

ಮದ್ಯ ಸೇವಿಸಿ ಕಾರು ಚಲಾಯಿಸಿದ್ದ ವಾರ್ನರ್

ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿ ನಡುವಿನ ಬ್ರೇಕ್‌ನಲ್ಲಿ ತವರಿಗೆ ಮರಳಿದ್ದ ಡೇವಿಡ್ ವಾರ್ನರ್, ಸಿಡ್ನಿಯ ಮರೂಬ್ರಾ ಪ್ರದೇಶದಲ್ಲಿ ಕಂಠಪೂರ್ತಿ ಮದ್ಯ ಸೇವಿಸಿ ವಾಹನ ಚಲಾಯಿಸಿದ್ದರು. ಪೊಲೀಸರ ತಪಾಸಣೆ ವೇಳೆ ಡೇವಿಡ್ ವಾರ್ನರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ವಾರ್ನರ್ ರಕ್ತದಲ್ಲಿ 0.104 ಪ್ರಮಾಣದಲ್ಲಿ ಆಲ್ಕೋಹಾಲ್ ಪತ್ತೆಯಾಗಿತ್ತು. ನಿಯಮದ ಪ್ರಕಾರ 0.05 ಮಿತಿಗಿಂತ ಹೆಚ್ಚಾಗಿತ್ತು. ಹೀಗಾಗಿ ಪೊಲೀಸ್ ಠಾಣೆಯಲ್ಲಿ ವಾರ್ನರ್ ವಿರುದ್ದ ಪ್ರಕರಣ ದಾಖಲಾಗಿತ್ತು.

ಇಂದು ಡೇವಿಡ್ ವಾರ್ನರ್ ಪರ ವಕೀಲ ಬೊಬ್ಬಿ ಹಿಲ್ ಸಿಡ್ನಿ ಕೋರ್ಟ್‌ಗೆ ಹಾಜರಾಗಿದ್ದಾರೆ. ಈ ವೇಳೆ ಬೊಬ್ಬಿ ಹಿಲ್ ತಪ್ಪು ಒಪ್ಪಿಕೊಂಡಿದ್ದಾರೆ. ಸ್ನೇಹಿತನ ಮನೆಯಲ್ಲಿ ವೈನ್ ಸೇವಿಸಿದ ಬಳಿಕ ಟ್ಯಾಕ್ಸಿ ಬುಕ್ ಮಾಡಿ ಮನೆಗೆ ತೆರಳುವ ಬದಲು ತಾವೇ ಸ್ವತಃ ಕಾರು ಚಲಾಯಿಸಿಕೊಂಡು ತೆರಳಿದ್ದಾರೆ. ಈ ತಪ್ಪಿನ ಅರಿವು, ಗಂಭೀರತೆ ಡೇವಿಡ್ ವಾರ್ನರ್‌ಗೆ ಅರಿವಾಗಿದೆ ಎಂದು ಬೊಬ್ಬಿ ಹಿಲ್ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಆಗಸ್ಟ್ 18ಕ್ಕೆ ಶಿಕ್ಷೆ ಪ್ರಕಟ

ಸದ್ಯ ಡೇವಿಡ್ ವಾರ್ನರ್ ತಪ್ಪೊಪ್ಪಿಕೊಂಡಿದ್ದಾರೆ. ನಿಯಮದ ಪ್ರಕಾರ ಡೇವಿಡ್ ವಾರ್ನರ್‌ಗೆ ಕೆಲ ಕಠಿಣ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ. ಆಗಸ್ಟ್ 18ಕ್ಕೆ ಡೇವಿಡ್ ವಾರ್ನರ್ ಪ್ರಕರಣದ ಶಿಕ್ಷೆಯನ್ನು ಸಿಡ್ನಿ ನ್ಯಾಯಾಲಯ ಪ್ರಕಟಿಸಲಿದೆ. ಆಸ್ಟ್ರೇಲಿಯಾ ನಿಯಮದ ಪ್ರಕಾರ ಕನಿಷ್ಠ 9 ತಿಂಗಳ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ. ಇದೇ ವೇಳೆ 6 ತಿಂಗಳ ಕಾಲ ಡ್ರೈವಿಂಗ್ ಲೈಸೆನ್ಸ್ ಅಮಾನತ, 1.20 ಲಕ್ಷ ರೂಪಾಯಿ ದಂಡ ವಿಧಿಸುವ ಸಾಧ್ಯತೆ ಇದೆ.

ಡೇವಿಡ್ ವಾರ್ನರ್ ಸ್ಫೋಟಕ ಬ್ಯಾಟರ್ ಅನ್ನೋದರಲ್ಲಿ ಎರಡು ಮಾತಿಲ್ಲ. ಆದರೆ ವಾರ್ನರ್ ಕ್ರಿಕೆಟ್ ಕರಿಯರ್ ಬಾಲ್ ಟ್ಯಾಂಪರಿಂಗ್ ವಿವಾದ ಬಳಿಕ ಯೂ ಟರ್ನ್ ಪಡೆದುಕೊಂಡಿತ್ತು. ಸತತವಾಗಿ ಕೋರ್ಟ್, ನಿಷೇಧ, ಅಮಾನತು ಸೇರಿದಂತೆ ಹಲವು ರೀತಿಯಲ್ಲಿ ಸಮಸ್ಯೆಗಳ ಸುಳಿಗೆ ಸಿಲುಕಿದ್ದರು. ನಿಷೇಧದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದರೂ ಡೇವಿಡ್ ವಾರ್ನರ್ ಹೆಚ್ಚು ಸಮಯ ಮುಂದುವರಿಯಲು ಸಾಧ್ಯವಾಗಲಿಲ್ಲ. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಸದ್ಯ ಲೀಗ್ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿದಿದ್ದಾರೆ. 2018ರ ಬಳಿಕ ಡೇವಿಡ್ ವಾರ್ನರ್ ಸಮಸ್ಯೆಗಳ ಸುಳಿಯಲ್ಲಿ ಸಿಲುಕುತ್ತಿದ್ದಾರೆ. ಇದೀಗ ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ಡೇವಿಡ್ ವಾರ್ನರ್ ಲೀಗ್ ಕರಿಯರ್‌ಗೆ ಕಪ್ಪು ಚುಕ್ಕೆಯಾಗುವ ಸಾಧ್ಯತೆ ಇದೆ.

ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ಹಾಗೂ 9 ತಿಂಗಳ ಜೈಲು ಶಿಕ್ಷೆಯಿಂದ ಕೆಲ ತಿಂಗಳಲ್ಲಿ ಆರಂಭಗೊಳ್ಳಲಿರುವ ಬಿಗ್ ಬ್ಯಾಷ್ ಲೀಗ್ ಟೂರ್ನಿಯಿಂದಲೂ ಡೇವಿಡ್ ವಾರ್ನರ್ ಹೊರಬೀಳುವ ಸಾಧ್ಯತೆ ಇದೆ. ಸಿಡ್ನಿ ಥಂಡರ್ ಲೀಗ್ ತಂಡದ ನಾಯಕನಾಗಿರುವ ಡೇವಿಡ್ ವಾರ್ನರ್ ಇದೀಗ ನಾಯಕ ಸ್ಥಾನದಿಂದ ಮಾತ್ರವಲ್ಲ ತಂಡದಿಂದಲೂ ಹೊರಬೀಳುವ ಸಾಧ್ಯತೆ ಇದೆ. ವಾರ್ನರ್ ಕರಿಯರ್ ಇಲ್ಲಿಗೆ ಅಂತ್ಯಗೊಳ್ಳುವ ಸಾಧ್ಯತೆ ಇದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Cricket: 30 ಎಸೆತಗಳ ಆಟವೂ ಅಂತರರಾಷ್ಟ್ರೀಯ ಪಂದ್ಯವಾ? ಭಾರತ-ಜಪಾನ್ ಕದನದ ಹಿನ್ನೆಲೆಯಲ್ಲಿ ಐಸಿಸಿ ರೂಲ್ಸ್‌ ಬಿಚ್ಚಿಟ್ಟ ಸತ್ಯ!
India vs Japan T20: ಕೊನೆ ಓವರ್‌ವರೆಗೂ ವಿಶ್ವ ಚಾಂಪಿಯನ್ನರನ್ನು ನಡುಗಿಸಿದ ಜಪಾನ್: 2 ರನ್‌ಗಳಿಂದ ಭಾರತಕ್ಕೆ ರೋಚಕ ಜಯ