ಈ ಬಗ್ಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ರಾಧಾ ಯಾದವ್, ‘ತುಂಬಾ ಸಂಕಷ್ಟ ಪರಿಸ್ಥಿತಿಯಲ್ಲಿದ್ದ ನಮ್ಮನ್ನು ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಿಸಿದ್ದಾರೆ. ಅವರಿಗೆ ಧನ್ಯವಾದಗಳು’ ಎಂದಿದ್ದಾರೆ.
ವಡೋದರಾ: ಗುಜರಾತ್‌ನ ವಡೋದರಾದಲ್ಲಿ ಪ್ರವಾಹದ ನಡುವೆ ಸಿಲುಕಿದ್ದ ಭಾರತ ಮಹಿಳಾ ತಂಡದ ತಾರಾ ಬೌಲರ್ ರಾಧಾ ಯಾದವ್‌ರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಸಿಬ್ಬಂದಿ ರಕ್ಷಿಸಿದ್ದಾರೆ.
ಈ ಬಗ್ಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ರಾಧಾ ಯಾದವ್, ‘ತುಂಬಾ ಸಂಕಷ್ಟ ಪರಿಸ್ಥಿತಿಯಲ್ಲಿದ್ದ ನಮ್ಮನ್ನು ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಿಸಿದ್ದಾರೆ. ಅವರಿಗೆ ಧನ್ಯವಾದಗಳು’ ಎಂದಿದ್ದಾರೆ. ತಮ್ಮ ಮನೆಯ ಸುತ್ತಲೂ ಪ್ರವಾಹದ ನೀರು ನಿಂತಿರುವ ಹಾಗೂ ಎನ್‌ಡಿಆರ್‌ಎಫ್ ಸಿಬ್ಬಂದಿ ತಮ್ಮನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುತ್ತಿರುವ ಫೋಟೋ, ವಿಡಿಯೋಗಳನ್ನು ರಾಧಾ ಹಂಚಿಕೊಂಡಿದ್ದಾರೆ.
undefined
ಭಾರತಕ್ಕೆ ಚೊಚ್ಚಲ ಟಿ20 ವಿಶ್ವಕಪ್ ಗೆಲ್ಲಿಸುವ ಗುರಿ ರಾಧಾ: ಬಹುನಿರೀಕ್ಷಿಯ 2024ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, 15 ಆಟಗಾರ್ತಿಯರನ್ನೊಳಗೊಂಡ ಭಾರತ ತಂಡದಲ್ಲಿ ರಾಧಾ ಯಾದವ್ ಕೂಡಾ ಸ್ಥಾನ ಪಡೆದಿದ್ದಾರೆ. ಯುಎಇನಲ್ಲಿ ಮುಂಬರುವ ಅಕ್ಟೋಬರ್ 03ರಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಸ್ಪಿನ್ ಆಲ್ರೌಂಡರ್ ಆಗಿರುವ ರಾಧಾ ಯಾದವ್ ಭಾರತಕ್ಕೆ ಚೊಚ್ಚಲ ಟಿ20 ವಿಶ್ವಕಪ್ ಗೆಲ್ಲುವ ಕನಸಿನೊಂದಿಗೆ ಟೂರ್ನಿಗೆ ಸಜ್ಜಾಗುತ್ತಿದ್ದಾರೆ. ರಾಧಾ ಭಾರತ ಪರ 80 ಟಿ20, 4 ಏಕದಿನ ಪಂದ್ಯಗಳನ್ನಾಡಿದ್ದಾರೆ.
ಯುಎಇನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು 'ಎ' ಗುಂಪಿನಲ್ಲಿ ಸ್ಥಾನ ಪಡೆದಿದೆ. ಹರ್ಮನ್ ಪಡೆ ಗ್ರೂಪ್ ಹಂತದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ನ್ಯೂಜಿಲೆಂಡ್. ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸುವ ಮುನ್ನ ಭಾರತ ಮಹಿಳಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ಎದುರು ತಲಾ ಒಂದೊಂದು ಅಭ್ಯಾಸ ಪಂದ್ಯವನ್ನಾಡಲಿದೆ.