ಮುಂಬೈ ಮಣಿಸಿದ ಧೋನಿ ಪಡೆಗೆ ಶಾಕ್‌, ಕೆಲ ಪಂದ್ಯಗಳಿಗೆ ಸ್ಟಾರ್ ಆಟಗಾರರು ಅಲಭ್ಯ..!

Published : Apr 09, 2023, 06:50 PM IST
ಮುಂಬೈ ಮಣಿಸಿದ ಧೋನಿ ಪಡೆಗೆ ಶಾಕ್‌, ಕೆಲ ಪಂದ್ಯಗಳಿಗೆ ಸ್ಟಾರ್ ಆಟಗಾರರು ಅಲಭ್ಯ..!

ಸಾರಾಂಶ

ಚೆನ್ನೈ ಸೂಪರ್ ಕಿಂಗ್ಸ್‌ ವೇಗಿ ದೀಪಕ್ ಚಹರ್‌ಗೆ ಮತ್ತೆ ಫಿಟ್ನೆಸ್ ಸಮಸ್ಯೆ? ಬೆನ್ ಸ್ಟೋಕ್ಸ್‌ ಕೂಡಾ ಒಂದು ವಾರದ ಮಟ್ಟಿಗೆ ಐಪಿಎಲ್‌ನಿಂದ ವಿಶ್ರಾಂತಿ ಮುಂಬೈ ಎದುರು ಪಂದ್ಯ ಗೆದ್ದು ಬೀಗಿದ್ದ ಧೋನಿ ಪಡೆಗೆ ಶಾಕ್

ಮುಂಬೈ(ಏ.09): ಐದು ಬಾರಿಯ ಐಪಿಎಲ್ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ಎದುರು ಭರ್ಜರಿ ಗೆಲುವು ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕೆ ಇದೀಗ ದೊಡ್ಡ ಆಘಾತ ಎದುರಾಗಿದೆ. ಮುಂಬರುವ ಕೆಲವು ಪಂದ್ಯಗಳಿಗೆ ತಂಡದ ಪ್ರಮುಖ ವೇಗಿ ದೀಪಕ್ ಚಹರ್ ಹಾಗೂ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್‌ ಅಲಭ್ಯರಾಗಲಿದ್ದಾರೆ. ಇದು ಧೋನಿ ಪಡೆಗೆ ಕೊಂಚ ಹಿನ್ನಡೆಯನ್ನುಂಟು ಮಾಡುವ ಸಾಧ್ಯತೆಯಿದೆ.

ಕ್ರಿಕೆಟ್ ವೆಬ್‌ಸೈಟ್‌ Cricbuzz ವರದಿಯ ಪ್ರಕಾರ ದೀಪಕ್ ಚಹರ್ ಹಾಗೂ ಬೆನ್‌ ಸ್ಟೋಕ್ಸ್‌ ಗಾಯಗೊಂಡಿದ್ದು, ಫಿಟ್ನೆಸ್ ಸಮಸ್ಯೆಯಿಂದಾಗಿ ಅನಿರ್ದಿಷ್ಟಾವಧಿಗೆ ತಂಡದಿಂದ ಹೊರಗುಳಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಗಾಯದ ಸಮಸ್ಯೆಯಿಂದಾಗಿಯೇ ದೀರ್ಘಕಾಲದಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದ ದೀಪಕ್ ಚಹರ್, 16ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೂಲಕ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದರು. ಆದರೆ ಮುಂಬೈನ ವಾಂಖೇಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ದದ ಪಂದ್ಯದ ವೇಳೆ ಬೌಲಿಂಗ್ ಮಾಡುವ ಸಂದರ್ಭದಲ್ಲಿ ದೀಪಕ್ ಚಹರ್ ಮತ್ತೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತಂತೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಯಾವುದೇ ಅಧಿಕೃತ ಮಾಹಿತಿ ಒದಗಿಸಿಲ್ಲ.

ಮುಂಬೈ ಇಂಡಿಯನ್ಸ್‌ ವಿರುದ್ದದ ಪಂದ್ಯದಲ್ಲಿ ಬಲಗೈ ವೇಗಿ ದೀಪಕ್ ಚಹರ್, ಕೇವಲ ಒಂದು ಓವರ್‌ನಷ್ಟೇ ಬೌಲಿಂಗ್ ಮಾಡಿದ್ದರು. ಇದಾದ ಬಳಿಕ ಮೈದಾನ ತೊರೆದ ದೀಪಕ್ ಚಹರ್‌, ಆ ನಂತರ ಮೈದಾನಕ್ಕೆ ವಾಪಾಸ್ಸಾಗಲಿಲ್ಲ. 4 ಬಾರಿಯ ಐಪಿಎಲ್ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್‌ ಫ್ರಾಂಚೈಸಿಯು 2022ರ ಐಪಿಎಲ್‌ ಹರಾಜಿನಲ್ಲಿ ದಾಖಲೆಯ 14 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಆದರೆ 2022ನೇ ಸಾಲಿನ ಐಪಿಎಲ್‌ ಟೂರ್ನಿಗೂ ಮುನ್ನ ಗಾಯಕ್ಕೆ ತುತ್ತಾಗಿ ಸಂಪೂರ್ಣ ಟೂರ್ನಿಯಿಂದ ಹೊರಬಿದ್ದಿದ್ದರು. ಇದೀಗ 2023ರ ಐಪಿಎಲ್ ಟೂರ್ನಿಯಿಂದಲೂ ದೀಪಕ್‌ ಸೇವೆ ಚೆನ್ನೈಗೆ ಅಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ.

ಇನ್ನು ತಂಡದ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್‌ ಕೂಡಾ ಕನಿಷ್ಠ ಒಂದು ವಾರಗಳ ಕಾಲ ಕ್ರಿಕೆಟ್‌ನಿಂದ ಬ್ರೇಕ್ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬೆನ್ ಸ್ಟೋಕ್ಸ್‌, ಏಪ್ರಿಲ್ 17ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಎದುರಿನ ಪಂದ್ಯಕ್ಕೆ ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇನ್ನು ಮುಂಬೈ ಇಂಡಿಯನ್ಸ್ ಎದುರಿನ ಪಂದ್ಯಕ್ಕೆ ಮೋಯಿನ್ ಅಲಿ ಕೂಡಾ ಅಲಭ್ಯರಾಗಿದ್ದರು. ಫುಡ್ ಪಾಯಿಸನ್‌ನಿಂದಾಗಿ ಮೋಯಿನ್‌ ಅಲಿ ಮುಂಬೈ ಎದುರಿನ ಪಂದ್ಯಕ್ಕೆ ಅಲಭ್ಯರಾಗಿದ್ದರು. ಮುಂದಿನ ಪಂದ್ಯಕ್ಕೆ ಮೋಯಿನ್ ಅಲಿ ಸಿಎಸ್‌ಕೆ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ