
ಮುಂಬೈ(ಮಾ.22): ಚೊಚ್ಚಲ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯುಪಿಎಲ್)ನ ಫೈನಲ್‌ಗೆ ಡೆಲ್ಲಿ ಕ್ಯಾಪಿಟಲ್ಸ್ ನೇರ ಪ್ರವೇಶ ಪಡೆದಿದೆ. ಲೀಗ್ ಹಂತದ ಮುಕ್ತಾಯಕ್ಕೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಡೆಲ್ಲಿ ಕ್ಯಾಪಿಟಲ್ಸ್, ಫೈನಲ್‌ಗೆ ಲಗ್ಗೆಯಿಟ್ಟಿತು. 2ನೇ ಸ್ಥಾನ ಪಡೆದ ಮುಂಬೈ ಹಾಗೂ 3ನೇ ಸ್ಥಾನ ಪಡೆದ ಯು.ಪಿ.ವಾರಿಯರ್ಸ್ ತಂಡಗಳು ಫೈನಲ್‌ನಲ್ಲಿ ಸ್ಥಾನಕ್ಕಾಗಿ ಎಲಿಮಿನೇಟರ್ ಪಂದ್ಯದಲ್ಲಿ ಸೆಣಸಲಿವೆ.
ಮಂಗಳವಾರ ನಡೆದ ಮೊದಲ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ 4 ವಿಕೆಟ್ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್ 12 ಅಂಕಗಳೊಂದಿಗೆ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿತು. ಆದರೆ ಯು.ಪಿ.ವಾರಿಯರ್ಸ್ ವಿರುದ್ಧ 6 ವಿಕೆಟ್‌ಗಳಿಂದ ಗೆದ್ದ ಡೆಲ್ಲಿ, ಅಂಕಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿ ಫೈನಲ್ ಸ್ಥಾನ ಖಚಿತಪಡಿಸಿಕೊಂಡಿತು. ಡೆಲ್ಲಿ ಕ್ಯಾಪಿಟಲ್ಸ್ 8 ಪಂದ್ಯಗಳಲ್ಲಿ 6 ಗೆಲುವು, 2 ಸೋಲುಗಳೊಂದಿಗೆ 12 ಅಂಕ ಪಡೆಯಿತು. ತಂಡದ ನೆಟ್ ರನ್‌ರೇಟ್ +1.978 ಇದ್ದು, +1.711 ನೆಟ್ ರನ್‌ರೇಟ್ ಹೊಂದಿರುವ ಮುಂಬೈ ತಂಡವನ್ನು ಹಿಂದಿಕ್ಕಿತು. ಮಾರ್ಚ್ 24ರಂದು ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಮಾರ್ಚ್ 26ಕ್ಕೆ ಫೈನಲ್ ಪಂದ್ಯ ನಿಗದಿಯಾಗಿದೆ.
ಡೆಲ್ಲಿಗೆ ಸುಲಭ ಜಯ: ಮೊದಲು ಬ್ಯಾಟ್ ಮಾಡಿದ ಯು.ಪಿ. 6 ವಿಕೆಟ್‌ಗೆ 138 ರನ್ ಗಳಿಸಿತು. ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಬಾಕಿ ಉಳಿಸಿಕೊಂಡು ಇನ್ನೂ 15 ಎಸೆತ ಬಾಕಿ ಇರುವಂತೆ ಗುರಿ ತಲುಪಿತು. 26 ರನ್‌ಗೆ 3 ವಿಕೆಟ್ ಕಿತ್ತ ಅಲೈಸ್ ಕ್ಯಾಪ್ಸಿ, 34 ರನ್ ಸಿಡಿಸಿ ಬ್ಯಾಟಿಂಗ್‌ನಲ್ಲೂ ನೆರವಾದರು. ಲ್ಯಾನಿಂಗ್ 39 ರನ್ ಗಳಿಸಿದರು.
ರನ್ನಿಂಗ್ ಬಿಟ್ವೀನ್ ವಿಕೆಟ್‌ನಲ್ಲಿ ಧೋನಿ ಬೆಸ್ಟ್, ಪೂಜಾರ ಕಳಪೆ, ಕ್ರಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಕೊಹ್ಲಿ!
ಪ್ಲೇ-ಆಫ್ ವೇಳಾಪಟ್ಟಿ
ದಿನಾಂಕ ಪಂದ್ಯ ಸಮಯ
ಮಾ.24 ಮುಂಬೈ ಇಂಡಿಯನ್ಸ್ -ಯು.ಪಿ. ವಾರಿಯರ್ಸ್ ಸಂಜೆ 7.30ಕ್ಕೆ
ಮಾ.26 ಡೆಲ್ಲಿ-? ಸಂಜೆ 7.30ಕ್ಕೆ
ಸೋಲಿನೊಂದಿಗೆ ಆರ್‌ಸಿಬಿ ಗುಡ್‌ಬೈ
ನವಿಮುಂಬೈ: ಆರ್‌ಸಿಬಿ ಸೋಲಿನೊಂದಿಗೆ ತನ್ನ ಅಭಿಯಾನ ಕೊನೆಗೊಳಿಸಿತು. ಮುಂಬೈ ವಿರುದ್ಧ ಮೊದಲು ಬ್ಯಾಟ್ ಮಾಡಿ 20 ಓವರಲ್ಲಿ 9 ವಿಕೆಟ್‌ಗೆ ಕೇವಲ 125 ರನ್ ಗಳಿಸಿತು. ಮುಂಬೈ 16.3 ಓವರಲ್ಲಿ 6 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. 22 ರನ್‌ಗೆ 3 ವಿಕೆಟ್ ಕಿತ್ತಿದ್ದ ಅಮೆಲಿಯಾ ಕೆರ್‌್ರ, 31 ರನ್ ಸಿಡಿಸಿ ತಂಡಕ್ಕೆ ನೆರವಾದರು.
ಸ್ಮೃತಿ ಮಂಧನಾ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿದ ಮೊದಲ 5 ಪಂದ್ಯಗಳಲ್ಲಿ ಆಘಾತಕಾರಿ ಸೋಲು ಅನುಭವಿಸಿತ್ತು. ಇದಾದ ಬಳಿಕ ಯುಪಿ ವಾರಿಯರ್ಸ್ ಹಾಗೂ ಗುಜರಾತ್ ಜೈಂಟ್ಸ್ ಎದುರು ಭರ್ಜರಿ ಗೆಲುವು ಸಾಧಿಸುವ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿತ್ತು. ಆದರೆ ಯುಪಿ ವಾರಿಯರ್ಸ್ ತಂಡವು ಗುಜರಾತ್ ಜೈಂಟ್ಸ್ ಎದುರು ಗೆಲುವು ಸಾಧಿಸುತ್ತಿದ್ದಂತೆಯೇ ಆರ್‌ಸಿಬಿ ಪ್ಲೇ ಆಫ್ ಕನಸು ಭಗ್ನವಾಗಿತ್ತು. ಆರ್‌ಸಿಬಿ ತಂಡವು ಟೂರ್ನಿಯಲ್ಲಿ 8 ಪಂದ್ಯಗಳನ್ನಾಡಿ ಎರಡು ಗೆಲುವು ಹಾಗೂ 6 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ತನ್ನ ಅಭಿಯಾನ ಅಂತ್ಯಗೊಳಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.