
ಧರ್ಮಶಾಲಾ(ಮಾ.06): ಒಂದು ವಾರಕ್ಕೂ ಹೆಚ್ಚು ವಿಶ್ರಾಂತಿ ಬಳಿಕ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ವಿಶ್ವದಲ್ಲೇ ಅತಿ ಸುಂದರ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಒಂದೆನಿಸಿರುವ ಹಿಮಾಚಲ ಪ್ರದೇಶದ ಧರ್ಮಶಾಲಾ ತಲುಪಿದ್ದು, ಸರಣಿಯ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿವೆ.
ಗುರುವಾರದಿಂದ ಪಂದ್ಯ ಆರಂಭಗೊಳ್ಳಲಿದ್ದು, ಅನಿರೀಕ್ಷಿತ ಮಳೆಯಿಂದಾಗಿ ಪಿಚ್ ಸಿದ್ಧತೆಗೆ ಮೈದಾನ ಸಿಬ್ಬಂದಿಗೆ ಸೂಕ್ತ ಸಮಯಾವಕಾಶ ಸಿಕ್ಕಿಲ್ಲ. ಆದರೂ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾ ಜೊತೆ ಚರ್ಚಿಸಿರುವ ಪಿಚ್ ಕ್ಯುರೇಟರ್, ನಿಧಾನಗತಿಯ ಪಿಚ್ ಸಿದ್ಧಪಡಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಸ್ಥಳೀಯ ವಾತಾವರಣವು ಇಂಗ್ಲೆಂಡ್‌ಗೆ ಹೆಚ್ಚು ಅನುಕೂಲಕರವಾಗಿರಲಿದೆ ಆದರೂ, ಪಿಚ್ ವಿಶೇಷವಾಗಿ ಇಂಗ್ಲೆಂಡ್ ತಂಡಕ್ಕೆ ನೆರವು ಒದಗಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
Dharamsala Test: ಇಂಗ್ಲೆಂಡ್ ಎದುರಿನ ಕೊನೆಯ ಟೆಸ್ಟ್‌ನಿಂದ ಕೆ ಎಲ್ ರಾಹುಲ್ ಔಟ್; ಮತ್ತೊಬ್ಬ ಕನ್ನಡಿಗನಿಗೆ ಚಾನ್ಸ್?
ಮೋಡ ಕವಿದ ವಾತಾವರಣ ಇರಲಿದ್ದು, ಹಸಿರು ಪಿಚ್ ಸಿದ್ಧಗೊಂಡಿದ್ದರೆ ಸ್ವಿಂಗ್ ಬೌಲಿಂಗ್‌ಗೆ ಹೆಚ್ಚು ನೆರವು ಸಿಗುತ್ತಿತ್ತು ಎನ್ನುವ ಲೆಕ್ಕಾಚಾರದಲ್ಲಿದ್ದ ಇಂಗ್ಲೆಂಡ್‌ಗೆ, ಪಿಚ್ ನೋಡಿ ಅಸಮಾಧಾನವಾಗಿದೆ ಎನ್ನಲಾಗುತ್ತಿದೆ. ಸರಣಿಯ ಮೊದಲ ಪಂದ್ಯಕ್ಕೆ ಆತಿಥ್ಯ ವಹಿಸಿದ್ದ ಹೈದರಾಬಾದ್‌ನಲ್ಲಿ ಸಂಪೂರ್ಣವಾಗಿ ಸ್ಪಿನ್ ಸ್ನೇಹಿ ಪಿಚ್ ಸಿದ್ಧಗೊಳಿಸಲಾಗಿತ್ತು. ಆ ಪಿಚ್‌ನಲ್ಲಿ ಇಂಗ್ಲಿಷ್ ಸ್ಪಿನ್ನರ್‌ಗಳು ಹೆಚ್ಚು ಪರಿಣಾಮಕಾರಿಯಾಗಿದ್ದರು.
ಆ ನಂತರದ ಮೂರೂ ಟೆಸ್ಟ್‌ಗಳಿಗೆ ಆತಿಥ್ಯ ವಹಿಸಿದ ಪಿಚ್‌ಗಳು ನಿಧಾನಗತಿ ಪಿಚ್‌ಗಳಾಗಿದ್ದವು. ಆ ಪಿಚ್‌ಗಳಲ್ಲಿ ಮೊದಲೆರಡು ದಿನ ಬ್ಯಾಟರ್‌ಗಳು ಸುಲಭವಾಗಿ ರನ್ ಗಳಿಸಿದ್ದರು. 3ನೇ ದಿನದಿಂದ ಪಿಚ್ ಸ್ಪಿನ್ನರ್‌ಗಳಿಗೆ ನೆರವು ಒದಗಿಸಿತ್ತು. ಧರ್ಮಶಾಲಾ ಪಿಚ್ ಕೂಡ ಇದೇ ರೀತಿ ವರ್ತಿಸಬಹುದು ಎಂದು ಅಂದಾಜಿಸಲಾಗಿದೆ. ಬುಮ್ರಾ ತಂಡಕ್ಕೆ ವಾಪಸ್ಸಾಗಿದ್ದು, ಪಂದ್ಯದಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.
'ಹಣ ಗಳಿಸಿ, ಆದ್ರೆ ಈ ರೀತಿಯಲ್ಲಿ ಅಲ್ಲ..': ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಮೇಲೆ ಮಾಜಿ ವೇಗಿ ಸಿಡಿಮಿಡಿ
ಇಂಗ್ಲೆಂಡ್ ಎದುರಿನ 5ನೇ ಟೆಸ್ಟ್‌ಗೆ ಭಾರತ ತಂಡ ಹೀಗಿದೆ:
ರೋಹಿತ್ ಶರ್ಮಾ(ನಾಯಕ), ಜಸ್ಪ್ರೀತ್ ಬುಮ್ರಾ(ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್, ರಜತ್ ಪಾಟೀದಾರ್, ಸರ್ಫರಾಜ್ ಖಾನ್, ಧೃವ್ ಜುರೆಲ್(ವಿಕೆಟ್ ಕೀಪರ್), ಕೆ ಎಸ್ ಭರತ್(ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಆಕಾಶ್ ದೀಪ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.