2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಂದು ಆರಂಭವಾಗಲಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ.
ನವದೆಹಲಿ(ಸೆ.20): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಆರಂಭಕ್ಕೆ ಇನ್ನು ಕೇವಲ ಎರಡು ವಾರಗಳು ಮಾತ್ರವೇ ಬಾಕಿ ಉಳಿದಿವೆ. ಹೀಗಿರುವಾಗಲೇ ಭಾರತದಲ್ಲೇ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಗೀತೆ ರಿಲೀಸ್ ಆಗಿದ್ದು, ಪ್ರೀತಮ್ ಕಂಪೋಸ್ ಮಾಡಿರುವ ಸಂಗೀತಾಕ್ಕೆ ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ.
ವಿಶ್ವಕಪ್ ಗೀತೆ ಲಾಂಚ್ ಮಾಡುವ ವೇಳೆಯಲ್ಲಿ ಮಾತನಾಡಿರುವ ಬಾಲಿವುಡ್ ನಟ ರಣವೀರ್ ಸಿಂಗ್, "ಸ್ಟಾರ್ ಸ್ಪೋರ್ಟ್ಸ್ ಕುಟುಂಬದ ಹಾಗೂ ಕ್ರಿಕೆಟ್‌ನ ಅಪ್ಪಟ ಅಭಿಮಾನಿಯಾಗಿರುವ ನನಗೆ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯ ಗೀತೆಯ ಭಾಗವಾಗಿರುವುದಕ್ಕೆ ನನಗೆ ಹೆಮ್ಮೆ ಎನಿಸುತ್ತಿದ್ದು, ನನಗೆ ಸಿಕ್ಕ ನಿಜವಾದ ಗೌರವ ಎನಿಸಿದೆ. ಇದು ನಾವೆಲ್ಲರೂ ಪ್ರೀತಿಸುವ ಕ್ರೀಡೆಯನ್ನು ಸಂಭ್ರಮಿಸುವ ಸಮಯ" ಎಂದು ಹೇಳಿದ್ದಾರೆ.
ಹೀಗಿದೆ ನೋಡಿ ವಿಶ್ವಕಪ್ ಟೂರ್ನಿಯ ಗೀತೆ:
DIL JASHN BOLE!
Official Anthem arriving now on platform 2023 📢📢
Board the One Day Xpress and join the greatest cricket Jashn ever! 🚂🥳
Credits:
Music - Pritam
Lyrics - Shloke Lal, Saaveri Verma
Singers - Pritam, Nakash Aziz, Sreerama Chandra, Amit Mishra, Jonita… pic.twitter.com/09AK5B8STG
ಏಕದಿನ ವಿಶ್ವಕಪ್ ಟೂರ್ನಿಯು 12 ವರ್ಷಗಳ ಬಳಿಕ ಮತ್ತೊಮ್ಮೆ ಭಾರತಕ್ಕೆ ವಾಪಸ್ ಬಂದಿದೆ. 2011ರಲ್ಲಿ ಭಾರತ, ಶ್ರೀಲಂಕಾ ಹಾಗೂ ಬಾಂಗ್ಲಾದೇಶಗಳು ಜಂಟಿಯಾಗಿ ಏಕದಿನ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಿದ್ದವು. ಇದೀಗ ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯವನ್ನು ವಹಿಸಿದೆ.
ವಿಶ್ವಕಪ್ ಟೂರ್ನಿಗೂ ಮುನ್ನ ತನ್ನ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ ರವಾನಿಸಿದ ವಿರಾಟ್ ಕೊಹ್ಲಿ..!
46 ದಿನ, 48 ಪಂದ್ಯ: 46 ದಿನಗಳ ಕಾಲ ನಡೆಯಲಿರುವ ಟೂರ್ನಿಯಲ್ಲಿ 10 ತಂಡಗಳು ಪಾಲ್ಗೊಳ್ಳುತ್ತಿದ್ದು, ಫೈನಲ್ ಸೇರಿ ಒಟ್ಟು 48 ಪಂದ್ಯಗಳು ನಡೆಯಲಿವೆ. ಭಾರತ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್, ಬಾಂಗ್ಲಾದೇಶ, ನ್ಯೂಜಿಲೆಂಡ್, ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ. ಈ 8 ತಂಡಗಳು ನೇರ ಅರ್ಹತೆ ಗಿಟ್ಟಿಸಿಕೊಂಡಿದ್ದು, ಇನ್ನೆರಡು ತಂಡಗಳಾದ ಶ್ರೀಲಂಕಾ ಹಾಗೂ ನೆದರ್‌ಲೆಂಡ್ಸ್ ತಂಡಗಳು ಅರ್ಹತಾ ಸುತ್ತಿನ ಮೂಲಕ ಪ್ರಧಾನ ಸುತ್ತಿಗೆ ಲಗ್ಗೆಯಿಟ್ಟಿವೆ.
ಭಾರತ ಕ್ರಿಕೆಟ್ ತಂಡವು ಕಳೆದೊಂದು ದಶಕದಿಂದಲೂ ಐಸಿಸಿ ಟ್ರೋಫಿಯ ಬರ ಎದುರಿಸುತ್ತಾ ಬಂದಿದೆ. 2013ರಲ್ಲಿ ಧೋನಿ ನೇತೃತ್ವದ ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಟೀಂ ಇಂಡಿಯಾ ಹಲವು ಬಾರಿ ಐಸಿಸಿ ಟೂರ್ನಿಯಲ್ಲಿ ನಾಕೌಟ್ ಹಂತದಲ್ಲೇ ಹೊರಬೀಳುವ ಮೂಲಕ ನಿರಾಸೆ ಅನುಭವಿಸುತ್ತಲೇ ಬಂದಿದೆ. ಇನ್ನು ಧೋನಿ ನೇತೃತ್ವದಲ್ಲೇ ಟೀಂ ಇಂಡಿಯಾ 2011ರಲ್ಲಿ ಕೊನೆಯ ಬಾರಿಗೆ ಐಸಿಸಿ ಏಕದಿನ ವಿಶ್ವಕಪ್ ಜಯಿಸಿತ್ತು.ಇದಾದ ಬಳಿಕ ಭಾರತ ವಿಶ್ವಕಪ್ ಜಯಿಸಿಲ್ಲ. ಇದೀಗ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತವೇ ಆತಿಥ್ಯ ವಹಿಸುತ್ತಿದ್ದು, ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಂದು ಆರಂಭವಾಗಲಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಇನ್ನು ಟೂರ್ನಿಗೆ ಆತಿಥ್ಯ ವಹಿಸಿರುವ ಭಾರತ ತಂಡವು ಅಕ್ಟೋಬರ್ 08ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ 5 ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.