
ಮುಂಬೈ (ಜೂ.09) ಶ್ರೇಯಸ್ ಅಯ್ಯರ್ ಪ್ರತಿಭೆಗೆ ತಕ್ಕೆ ಅವಕಾಶ ಸಿಕ್ಕಿಲ್ಲ ಅನ್ನೋದರಲ್ಲಿ ಎರಡು ಮಾತಿಲ್ಲ. ಇನ್ನು ಸಿಕ್ಕ ಅವಕಾಶಗಳಲ್ಲಿ ಶ್ರೇಯಸ್ ಅಯ್ಯರ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಇದೀಗ ಟೀಂ ಇಂಡಿಯಾ ಟಿ20 ತಂಡದ ನಾಯಕನಾಗಿ ಬಡ್ತಿ ಪಡೆದಿದ್ದಾರೆ. ಆಯ್ಯರ್ ನಾಯಕನಾದ ಬೆನ್ನಲ್ಲೇ ನಿರ್ಗಮಿತ ನಾಯಕ ಸೂರ್ಯಕುಮಾರ್ ಯಾದವ್, ಸ್ವತಃ ಶ್ರೇಯಸ್ ಅಯ್ಯರ್, ರೋಹಿತ್ ಶರ್ಮಾ ಸೇರಿದಂತೆ ಹಲವು ಕ್ರಿಕೆಟಿಗರು ಪ್ರತಿಕ್ರಿಯಿಸಿದ್ದಾರೆ. ಇದೀಗ ಶ್ರೇಯಸ್ ಅಯ್ಯರ್ ತಂದೆಯ ಪ್ರತಿಕ್ರಿಯೆ ವೈರಲ್ ಆಗಿದೆ. ಆಯ್ಯರ್‌ಗೆ ಟೀಂ ಇಂಡಿಯಾ ಟಿ20 ನಾಯಕತ್ವ ಎಂದು ಘೋಷಣೆಯಾಗುತ್ತಿದ್ದಂತೆ ಶ್ರೇಯಸ್ ಅಯ್ಯರ್ ತಂದೆ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಶ್ರೇಯಸ್ ಅಯ್ಯರ್‌ಗೆ ನಾಯಕ ಸ್ಥಾನ ಎಂದು ಬಿಸಿಸಿಐ ಆಯ್ಕೆ ಸಮಿತಿ ಘೋಷಿಸುತ್ತಿದ್ದಂತೆ ಶ್ರೇಯಸ್ ಅಯ್ಯರ್ ತಂದೆ ಕುಟುಂಬದ ಜೊತೆಗಿದ್ದರು. ಈ ವೇಳೆ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಎಲ್ಲರೂ ಹೆಜ್ಜೆ ಹಾಕಿದ್ದಾರೆ. ಇತ್ತ ಶ್ರೇಯಸ್ ಅಯ್ಯರ್ ತಂದೆ ಕೂಡ ಡ್ಯಾನ್ಸ್ ಮಾಡಿ ಗಮನಸೆಳೆದಿದ್ದಾರೆ. ತಮ್ಮ ಮಗನ ಸಾಧನೆಗೆ ಹೆಮ್ಮೆ ಪಟ್ಟಿದ್ದಾರೆ.
ಆಪ್ತರು, ಕುಟುಂಬಸ್ಥರು ಶ್ರೇಯಸ್ ಅಯ್ಯರ್ ತಂದೆಗೆ ಶುಭ ಕೋರಿದ್ದಾರೆ. ಕೆಲ ಹೊತ್ತು ಈ ಡ್ಯಾನ್ಸ್ ಮುಂದುವರಿದಿದೆ. ಇದೀಗ ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಲಭ್ಯವಾಗಿದೆ. ಇತ್ತ ಅಭಿಮಾನಿಗಳು ಶ್ರೇಯಸ್ ಅಯ್ಯರ್‌ಗೆ ಶುಭ ಕೋರಿದ್ದಾರೆ.
ಬಿಸಿಸಿಐನ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹಾಗೂ ತಂಡ ಟೀಂ ಇಂಡಿಯಾ ಆಯ್ಕೆ ಮಾಡಿತ್ತು. ಈ ಬಾರಿ ಕೆಲ ಅಚ್ಚರಿಗಳನ್ನು ನೀಡಿದೆ. 2026ರಲ್ಲಿ ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯಕುಮಾರ್ ಯಾದವ್‌ಗೆ ಗೇಟ್ ಪಾಸ್ ನೀಡಲಾಗಿತ್ತು. ಐಪಿಎಲ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ಪ್ರದರ್ಶನ ನೀರಸವಾಗಿತ್ತು. ಇತ್ತ ಸೂರ್ಯಕುಮಾರ್ ಯಾದವ್ ತಂಡದಲ್ಲೂ ಸ್ಥಾನ ಪಡೆದಿಲ್ಲ. ಇದೇ ವೇಳೆ 15ರ ಹುಡುಗ ವೈಭವ್ ಸೂರ್ಯವಂಶಿಯನ್ನು ಆಯ್ಕೆ ಮಾಡಲಾಗಿದೆ. ಅಂಡರ್ 19 ವಿಶ್ವಕಪ್, ಐಪಿಎಲ್ ಟೂರ್ನಿಯಲ್ಲಿ ದಾಖಲೆಯ ಬ್ಯಾಟಿಂಗ್ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿ ಆಯ್ಕೆಗೆ ಸಂಭ್ರಮ ಮನೆ ಮಾಡಿದ್ದಾರೆ.
Shreyas Iyer’s father celebrating Shreyas’ appointment as team India captain. ❤️ pic.twitter.com/m71O1KhdsA
— Mufaddal Vohra (@mufaddal_vohra) June 9, 2026
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.