ಟೆಸ್ಟ್‌ ಕ್ರಿಕೆಟಲ್ಲಿ 5 ಲಕ್ಷ ರನ್‌ ಬಾರಿಸಿ ದಾಖಲೆ ಬರೆದ ಇಂಗ್ಲೆಂಡ್!

Suvarna News   | Asianet News
Published : Jan 25, 2020, 02:49 PM IST
ಟೆಸ್ಟ್‌ ಕ್ರಿಕೆಟಲ್ಲಿ 5 ಲಕ್ಷ ರನ್‌ ಬಾರಿಸಿ ದಾಖಲೆ ಬರೆದ ಇಂಗ್ಲೆಂಡ್!

ಸಾರಾಂಶ

ಇಡೀ ಜಗತ್ತಿಗೆ ಕ್ರಿಕೆಟ್ ಪರಿಚಯಿಸಿದ ಇಂಗ್ಲೆಂಡ್ ಇದೀಗ ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಂಗ್ಲರ ಪಡೆ ವಿನೂತನ ಗೌರವಕ್ಕೆ ಭಾಜನವಾಗಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಜೋಹಾನ್ಸ್‌ಬರ್ಗ್‌(ಜ.25): ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ 5 ಲಕ್ಷ ರನ್‌ ಗಳಿಸಿದ ಮೊದಲ ತಂಡ ಎನ್ನುವ ದಾಖಲೆಯನ್ನು ಇಂಗ್ಲೆಂಡ್‌ ಬರೆದಿದೆ. 

ದ.ಆಫ್ರಿಕಾ ವಿರುದ್ಧ ಶುಕ್ರವಾರ ಆರಂಭಗೊಂಡ 3ನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 186ನೇ ಗಳಿಸುತ್ತಿದ್ದಂತೆ, ಇಂಗ್ಲೆಂಡ್‌ 5 ಲಕ್ಷ ಮೈಲಿಗಲ್ಲು ತಲುಪಿತು. ನಾಯಕ ಜೋ ರೂಟ್‌ ಗಳಿಸಿದ ರನ್‌ ಇತಿಹಾಸದ ಪುಟಗಳಲ್ಲಿ ದಾಖಲಾಯಿತು. ಇಂಗ್ಲೆಂಡ್‌ ತನ್ನ 1022ನೇ ಟೆಸ್ಟ್‌ನಲ್ಲಿ ಈ ಸಾಧನೆ ಮಾಡಿದೆ. 

ಟೀಂ ಇಂಡಿಯಾದ 27 ಆಟಗಾರರಲ್ಲಿ ಯಾರಿಗೆಷ್ಟು ಸಂಬಳ..?

ಈ ಮೊದಲು ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದು ಸಾವಿರ ಟೆಸ್ಟ್ ಪಂದ್ಯವನ್ನಾಡಿದ ಮೊದಲ ತಂಡ ಎನ್ನುವ ದಾಖಲೆಗೂ ಇಂಗ್ಲೆಂಡ್ ಪಾತ್ರವಾಗಿತ್ತು. ಭಾರತ ವಿರುದ್ಧ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಪಂದ್ಯವು ಇಂಗ್ಲೆಂಡ್‌ ಆಡಿದ 1000ನೇ ಟೆಸ್ಟ್ ಪಂದ್ಯವಾಗಿತ್ತು. ಆ ಪಂದ್ಯವನ್ನು 31 ರನ್‌ಗಳಿಂದ ರೋಚಕ ಜಯ ಸಾದಿಸುವ ಮೂಲಕ ಇಂಗ್ಲೆಂಡ್ ಸ್ಮರಣೀಯವಾಗಿಸಿಕೊಂಡಿತ್ತು. ಆಸ್ಟ್ರೇಲಿಯಾ ತಂಡವು 830 ಟೆಸ್ಟ್ ಪಂದ್ಯಗಳನ್ನಾಡಿ 4,32,706 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇನ್ನು ಟೀಂ ಇಂಡಿಯಾ 540 ಟೆಸ್ಟ್ ಪಂದ್ಯಗಳನ್ನಾಡಿದ್ದು 2,73,518 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಫುಟ್ಬಾಲ್ ಪಂದ್ಯದಲ್ಲಿ ಮತ್ತೊಬ್ಬಳಿಗೆ ಮುತ್ತು; ವೈರಲ್ ವಿಡಿಯೋದಿಂದ ಲವ್ ಬ್ರೇಕ್ಅಪ್!

ಮಳೆಯಿಂದಾಗಿ ಪಂದ್ಯ ತಡವಾಗಿ ಆರಂಭಗೊಂಡಿತು. ಮೊದಲ ದಿನದಂತ್ಯಕ್ಕೆ ಇಂಗ್ಲೆಂಡ್‌ 4 ವಿಕೆಟ್‌ ನಷ್ಟಕ್ಕೆ 192 ರನ್‌ ಗಳಿಸಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!
ಶುಭ್‌ಮನ್ ಗಿಲ್‌ಗೆ ಇನ್ನೂ 2 ಮ್ಯಾಚ್‌ನಲ್ಲಿ ಅವಕಾಶ ಕೊಡಿ: ಅಶ್ವಿನ್ ಅಚ್ಚರಿಯ ಹೇಳಿಕೆ