ಲಂಕಾದಿಂದಲೇ ಟೀಂ ಇಂಡಿಯಾಗೆ ಜೋ ರೂಟ್‌ ವಾರ್ನಿಂಗ್‌..!

Kannadaprabha News   | Asianet News
Published : Jan 25, 2021, 09:01 AM IST
ಲಂಕಾದಿಂದಲೇ ಟೀಂ ಇಂಡಿಯಾಗೆ ಜೋ ರೂಟ್‌ ವಾರ್ನಿಂಗ್‌..!

ಸಾರಾಂಶ

ಭಾರತ ವಿರುದ್ದದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಇಂಗ್ಲೆಂಡ್‌ ತಂಡ, ಶ್ರೀಲಂಕಾ ವಿರುದ್ದ ಭರ್ಜರಿಯಾಗಿಯೇ ಅಭ್ಯಾಸ ನಡೆಸುತ್ತಿದೆ.ಅದರಲ್ಲೂ ಇಂಗ್ಲೆಂಡ್ ನಾಯಕ ಜೋ ರೂಟ್‌ ಇತ್ತೀಚಿನ ಫಾರ್ಮ್‌ ಟೀಂ ಇಂಡಿಯಾ ಬೌಲಿಂಗ್‌ ಪಡೆಗೆ ಸವಾಲಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಗಾಲೆ(ಜ.25): ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿ ಆರಂಭಗೊಳ್ಳಲು ಇನ್ನು ಕೇವಲ 10 ದಿನ ಮಾತ್ರ ಬಾಕಿ ಇದ್ದು, ಆಸ್ಪ್ರೇಲಿಯಾದಲ್ಲಿ ಐತಿಹಾಸಿಕ ಸರಣಿ ಗೆದ್ದು ಬಂದಿರುವ ಭಾರತಕ್ಕೀಗ ಜೋ ರೂಟ್‌ ಭೀತಿ ಶುರುವಾಗಿದೆ. ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ಪ್ರವೇಶಿಸಲು ಕಾತರಿಸುತ್ತಿರುವ ಭಾರತ ತಂಡಕ್ಕೆ ರೂಟ್‌ ಮುಳುವಾಗುವ ಸಾಧ್ಯತೆ ಗೋಚರವಾಗಿದೆ.

ಶ್ರೀಲಂಕಾ ಪ್ರವಾಸದಲ್ಲಿರುವ ಇಂಗ್ಲೆಂಡ್‌ ತಂಡಕ್ಕೆ ನಾಯಕ ರೂಟ್‌ ಮತ್ತೆ ಆಸರೆಯಾಗಿದ್ದಾರೆ. ಮೊದಲ ಟೆಸ್ಟ್‌ನಲ್ಲಿ ದ್ವಿಶತಕ ಬಾರಿಸಿದ್ದ ರೂಟ್‌, ಸದ್ಯ ನಡೆಯುತ್ತಿರುವ 2ನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 186 ರನ್‌ ಗಳಿಸಿದ್ದಾರೆ. ರೂಟ್‌ ಅತ್ಯುತ್ತಮ ಲಯದಲ್ಲಿದ್ದು, ಭಾರತೀಯ ಬೌಲರ್‌ಗಳಿಗೆ ಅವರನ್ನು ನಿಯಂತ್ರಿಸುವುದು ದೊಡ್ಡ ಸವಾಲಾಗಿ ಪರಿಣಮಿಸಬಹುದು ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ.

ಫೆ.5 ರಿಂದ ಭಾರತ-ಇಂಗ್ಲೆಂಡ್ ತವರಿನ ಸರಣಿ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!

ಮುನ್ನಡೆಯತ್ತ ಲಂಕಾ: ರೂಟ್‌ 186 ರನ್‌ಗಳ ಹೊರತಾಗಿಯೂ ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ ಹಿನ್ನಡೆ ಅನುಭವಿಸುವ ಸಾಧ್ಯತೆ ಹೆಚ್ಚಿದೆ. 3ನೇ ದಿನದಂತ್ಯಕ್ಕೆ ಇಂಗ್ಲೆಂಡ್‌ 9 ವಿಕೆಟ್‌ ನಷ್ಟಕ್ಕೆ 339 ರನ್‌ ಗಳಿಸಿದ್ದು, ಇನ್ನೂ 42 ರನ್‌ ಹಿನ್ನಡೆಯಲ್ಲಿದೆ. ಲಂಕಾ ಮೊದಲ ಇನ್ನಿಂಗ್ಸ್‌ನಲ್ಲಿ 381 ರನ್‌ ಕಲೆಹಾಕಿತ್ತು.

ಸ್ಕೋರ್‌: ಲಂಕಾ 381, ಇಂಗ್ಲೆಂಡ್‌ 339/9

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯ್‌ ಹಜಾರೆ ಟ್ರೋಫಿ: ಒಂದೂವರೆ ದಶಕದ ಬಳಿಕ ಡೆಲ್ಲಿ ಪರ ವಿರಾಟ್ ಕೊಹ್ಲಿ ಮೈದಾನಕ್ಕೆ! ಬೆಂಗಳೂರಲ್ಲಿ ನಡೆಯುತ್ತೆ ಮ್ಯಾಚ್‌
ಬೆಂಗಳೂರಲ್ಲಿ ಐಪಿಎಲ್‌ ನಡೆಸಲು ಸಂಪುಟ ಅಸ್ತು