ಲಂಕಾ ಎದುರಿನ ಸರಣಿಗೆ ಬಲಿಷ್ಠ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟ

Published : Jun 19, 2021, 07:26 PM IST
ಲಂಕಾ ಎದುರಿನ ಸರಣಿಗೆ ಬಲಿಷ್ಠ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟ

ಸಾರಾಂಶ

* ಶ್ರೀಲಂಕಾ ಎದುರಿನ ಏಕದಿನ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟ * ತಂಡಕೂಡಿಕೊಂಡ ಟೆಸ್ಟ್ ತಂಡದ ನಾಯಕ ಜೋ ರೂಟ್‌ * ಲಂಕಾ ಎದುರಿನ ಸರಣಿಗೆ ಆರ್ಚರ್‌-ಸ್ಟೋಕ್ಸ್‌ಗೆ ವಿಶ್ರಾಂತಿ

ಲಂಡನ್‌(ಜೂ.19): ಶ್ರೀಲಂಕಾ ವಿರುದ್ದ ಜೂನ್ 29ರಿಂದ ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿಗೆ 16 ಆಟಗಾರರನ್ನೊಳಗೊಂಡ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಎಡಗೈ ವೇಗಿ ಜಾರ್ಜ್‌ ಗಾರ್ಟನ್‌ ಇದೇ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ತಂಡದ ಸ್ಟಾರ್ ಆಟಗಾರರಾದ ಬೆನ್ ಸ್ಟೋಕ್ಸ್ ಹಾಗೂ ಜೋಫ್ರಾ ಆರ್ಚರ್‌ಗೆ ವಿಶ್ರಾಂತಿ ನೀಡಲಾಗಿದ್ದು, ಇಯಾನ್ ಮಾರ್ಗನ್‌ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಭಾರತ ವಿರುದ್ದದ ಸೀಮಿತ ಓವರ್‌ಗಳ ಸರಣಿಯಿಂದ ಹೊರಗುಳಿದಿದ್ದ ಜೋ ರೂಟ್ ಕೂಡಾ ಏಕದಿನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

ಲಂಕಾ ಎದುರಿನ ಟಿ20 ಸರಣಿಗೆ ಇಂಗ್ಲೆಂಡ್ ತಂಡ ಕೂಡಿಕೊಂಡ ಕ್ರಿಸ್ ವೋಕ್ಸ್

ಶ್ರೀಲಂಕಾ ವಿರುದ್ದ 3 ಪಂದ್ಯಗಳ ಏಕದಿನ ಸರಣಿಗೂ ಮುನ್ನ, ದ್ವೀಪ ರಾಷ್ಟ್ರದ ವಿರುದ್ದ 3 ಪಂದ್ಯಗಳ ಟಿ20 ಸರಣಿ ಅಡಲಿದೆ. ಶ್ರೀಲಂಕಾ ವಿರುದ್ದದ ಟಿ20 ಸರಣಿಯು ಜೂನ್ 23ರಿಂದ ಆರಂಭವಾಗಲಿದೆ.

ಲಂಕಾ ಎದುರಿನ ಏಕದಿನ ಸರಣಿಗೆ ಇಂಗ್ಲೆಂಡ್ ತಂಡ ಹೀಗಿದೆ ನೋಡಿ:

ಇಯಾನ್ ಮಾರ್ಗನ್‌(ನಾಯಕ), ಮೋಯಿನ್ ಅಲಿ, ಜಾನಿ ಬೇರ್‌ಸ್ಟೋವ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರ್ರನ್, ಟಾಮ್ ಕರ್ರನ್, ಲಿಯಾಮ್ ಡಾಸನ್, ಜಾರ್ಜ್‌ ಗಾರ್ಟನ್‌, ಲಿಯಾಮ್ ಲಿವಿಂಗ್‌ಸ್ಟೋನ್, ಅದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಡೇವಿಡ್ ವಿಲ್ಲೆ, ಕ್ರಿಸ್ ವೋಕ್ಸ್, ಮಾರ್ಕ್‌ ವುಡ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Cricket: 30 ಎಸೆತಗಳ ಆಟವೂ ಅಂತರರಾಷ್ಟ್ರೀಯ ಪಂದ್ಯವಾ? ಭಾರತ-ಜಪಾನ್ ಕದನದ ಹಿನ್ನೆಲೆಯಲ್ಲಿ ಐಸಿಸಿ ರೂಲ್ಸ್‌ ಬಿಚ್ಚಿಟ್ಟ ಸತ್ಯ!
India vs Japan T20: ಕೊನೆ ಓವರ್‌ವರೆಗೂ ವಿಶ್ವ ಚಾಂಪಿಯನ್ನರನ್ನು ನಡುಗಿಸಿದ ಜಪಾನ್: 2 ರನ್‌ಗಳಿಂದ ಭಾರತಕ್ಕೆ ರೋಚಕ ಜಯ