
ಲಂಡನ್(ಜ.26): ಭಾರತ ವಿರುದ್ಧ ಫೆಬ್ರವರಿ 5ರಿಂದ ಆರಂಭಗೊಳ್ಳಲಿರುವ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಕೇವಲ 3 ದಿನಗಳ ಕಾಲ ಅಭ್ಯಾಸ ನಡೆಸಲು ಅವಕಾಶ ಸಿಗಲಿದೆ. ಶ್ರೀಲಂಕಾದಿಂದ ಭಾರತಕ್ಕೆ ಬಂದಿಳಿದ ಬಳಿಕ ತಂಡ ಕಡ್ಡಾಯವಾಗಿ 6 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಬೇಕಿದೆ.
ಜೋ ರೂಟ್ ನೇತೃತ್ವದ ಇಂಗ್ಲೆಂಡ್ ತಂಡ ಬುಧವಾರ ಚೆನ್ನೈಗೆ ಆಗಮಿಸಲಿದ್ದು, ಹೋಟೆಲ್‌ನಲ್ಲಿ ಕ್ವಾರಂಟೈನ್‌ಗೆ ಒಳಗಾಗಲಿದೆ. 6 ದಿನಗಳಲ್ಲಿ ಎಲ್ಲ ಆಟಗಾರರು, ಸಿಬ್ಬಂದಿಯನ್ನು 3 ಬಾರಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ.
ಟೀಂ ಇಂಡಿಯಾಗೆ ಶುರುವಾಗಿದೆ ಇಂಗ್ಲೆಂಡ್ ಸ್ಪಿನ್ನರ್ಸ್ ಟೆನ್ಷನ್..!
ಶ್ರೀಲಂಕಾಗೆ ತೆರಳದ ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್ ಹಾಗೂ ರೋರಿ ಬರ್ಸ್ ಭಾನುವಾರ ರಾತ್ರಿ ಭಾರತಕ್ಕೆ ಆಗಮಿಸಿದ್ದು, ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಈ ಆಟಗಾರರಿಗೆ ಮೊದಲ ಟೆಸ್ಟ್‌ಗೂ ಮುನ್ನ 5 ದಿನಗಳ ಕಾಲ ಅಭ್ಯಾಸ ನಡೆಸಲು ಅವಕಾಶ ಸಿಗಲಿದೆ. ಕೊರೋನಾ ಲಾಕ್ಡೌನ್ ಬಳಿಕ ಭಾರತದಲ್ಲಿ ನಡೆಯಲಿರುವ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ ಇದಾಗಿದೆ.
ಒಂದು ಕಡೆ ಟೀಂ ಇಂಡಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಆಸ್ಟ್ರೇಲಿಯಾ ವಿರುದ್ದವೇ 2-1 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಇನ್ನು ಜೋ ರೂಟ್ ನೇತೃತ್ವದ ಇಂಗ್ಲೆಂಡ್ ತಂಡವು ಶ್ರೀಲಂಕಾ ಎದುರು ಟೆಸ್ಟ್ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಹೀಗಾಗಿ ಭಾರತ ಹಾಗೂ ಇಂಗ್ಲೆಂಡ್ ನಡಿವಿನ ಸರಣಿ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆಯಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.